Homeಕರ್ನಾಟಕಬಿಜೆಪಿಯ ಸುಳ್ಳಿನ ಕಾರ್ಖಾನೆಗೆ ದಾಳ ಆಗಬೇಡಿ: CLP ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬಿಜೆಪಿಯ ಸುಳ್ಳಿನ ಕಾರ್ಖಾನೆಗೆ ದಾಳ ಆಗಬೇಡಿ: CLP ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

- Advertisement -
- Advertisement -

”ಬಿಜೆಪಿ ಪರಿವಾರ ಸುಳ್ಳಿನ ಕಾರ್ಖಾನೆ, ಅವರು ಮೊದಲು ಸುಳ್ಳನ್ನು ಸೃಷ್ಟಿಸುತ್ತಾರೆ. ಬಳಿಕ ಆ ಸುಳ್ಳನ್ನು ತಮ್ಮ ಸುಳ್ಳಿನ ಪರಿವಾರದ ಮೂಲಕ ಹರಡಿಸುತ್ತಾರೆ. ಕೊನೆಗೆ ಅದೇ ಸುಳ್ಳಿನ ಮೇಲೆ ಮಾಧ್ಯಮಗಳಲ್ಲಿ ಚರ್ಚೆ ಆಗುವಂತೆ ಮಾಡುತ್ತಾರೆ ಈ ಬಗ್ಗೆ ಎಚ್ಚರದಿಂದಿರಿ” ಎಂದು ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ.

”ಸುಳ್ಳಿನ ಕಾರ್ಖಾನೆಯ ಕಾರ್ಮಿಕರು ಸುಳ್ಳನ್ನು ಸೃಷ್ಟಿಸಿ, ಅದನ್ನು ಸತ್ಯ ಎನ್ನುವಂತೆ ಬಿಂಬಿಸುತ್ತಾರೆ. ಇದಕ್ಕಾಗಿ ಅವರು ವಿಪರೀತ ಖರ್ಚು ಮಾಡುತ್ತಾರೆ. ಇದನ್ನೆಲ್ಲಾ ನಾವು ಸರಿಯಾಗಿ ಅರ್ಥ ಮಾಡಿಕೊಂಡು ಜವಾಬ್ದಾರಿಯಿಂದ ವರ್ತಿಸಬೇಕು” ಎಂದು ತಮ್ಮ ಎಲ್ಲ ಶಾಸಕರಿಗೂ ಸಿದ್ದರಾಮಯ್ಯ ಹೇಳಿದರು.

”ಹೊಸ ಸರ್ಕಾರ ಬಂದ ಬಳಿಕ ನಮ್ಮ ಎದುರಿಗೆ ತಕ್ಷಣಕ್ಕೆ ರಾಜ್ಯದ ಆರ್ಥಿಕತೆಯನ್ನು ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿ ಇತ್ತು. ಜತೆಗೆ ಆಯವ್ಯಯ ರೂಪಿಸುವ ಹೊಣೆಗಾರಿಕೆಯೂ ಇತ್ತು ಹಾಗೂ ಹೊಸ ಸರ್ಕಾರವಾದ್ದರಿಂದ ಜಂಟಿ ಅಧಿವೇಶನವನ್ನೂ ಕರೆಯಬೇಕಿತ್ತು. ಹೊಸ ಶಾಸಕರಿಗೂ ತಮ್ಮ ಅಭಿಪ್ರಾಯ, ನಿಲುವನ್ನು ವ್ಯಕ್ತಪಡಿಸಲು ಅವಕಾಶ ಆಗಬೇಕು ಎನ್ನುವ ಕಾರಣದಿಂದ ಮೂರು ವಾರ ಮೊದಲ ಅಧಿವೇಶನವನ್ನು ನಡೆಸಿದೆವು” ಎಂದರು.

”ಈ ಆಯವ್ಯಯ ಅತ್ಯಂತ ಮಹತ್ವದ್ದಾಗಿತ್ತು. ಐದು ಗ್ಯಾರಂಟಿಗಳನ್ನು ಜಾರಿ ಮಾಡಲು 58 ಸಾವಿರ ಕೋಟಿ ರೂಪಾಯಿ ಬೇಕು ಎಂದು ಅಂದಾಜಿಸಲಾಗಿತ್ತು. ಹೀಗಾಗಿ ಈ ಆಯವ್ಯಯವನ್ನು ಅತ್ಯಂತ ಎಚ್ಚರಿಕೆಯಿಂದ ರೂಪಿಸುವುದಕ್ಕಾಗಿ, ಜತೆಗೆ ಐದು ಗ್ಯಾರಂಟಿಗಳಿಗೆ ಹಣ ಮೀಸಲಿಡುವ ಅಗತ್ಯವೂ ಇತ್ತು. ಆದ್ದರಿಂದ ನಾನೇ ಸ್ವತಃ ಬಜೆಟ್ ಸಿದ್ಧತೆಗೆ ಕೂರುವುದು ಅನಿವಾರ್ಯವಾಗಿತ್ತು. ಈ ಎಲ್ಲಾ ಕಾರಣಗಳಿಂದ ನಾನು ಇತರೆ ಸಂಗತಿಗಳ ಕಡೆಗೆ ಗಮನ ಕೊಡಲು ಸಾಧ್ಯ ಆಗಲಿಲ್ಲ” ಎಂದರು.

”ಅಧಿವೇಶನದ ನಡುವೆ ರಾಷ್ಟ್ರ ಮಟ್ಟದ ವಿರೋಧ ಪಕ್ಷಗಳ ನಾಯಕರ ಸಭೆಯನ್ನು ನಡೆಸಿದೆವು. ಈ ಸಭೆ ಮುಗಿಯುತ್ತಿದ್ದಂತೆ ನಮ್ಮ ವರಿಷ್ಠರು ಶಾಸಕರು ಮತ್ತು ಸಚಿವರ ಜತೆ ಸಭೆ ನಡೆಸಲು ತೀರ್ಮಾನಿಸಿದ್ದರು. ಈ ಎರಡೂ ಕಾರಣಗಳಿಂದ ಶಾಸಕಾಂಗ ಸಭೆ ಕರೆಯುವುದು ತಡವಾಗಿದೆ” ಎಂದು ಹೇಳಿದರು.

”ಬಿಜೆಪಿಯ ದುರಾಡಳಿತ, ಬೆಲೆ ಏರಿಕೆ, ಹಣದುಬ್ಬರದಿಂದ ನಾಡಿನ ಜನತೆ ಹೈರಾಣಾಗಿ ಅವರ ಬದುಕು ದುಸ್ತರವಾಗಿತ್ತು. ಹೀಗಾಗಿ ಐದು ಗ್ಯಾರಂಟಿಗಳ ಮೂಲಕ ನಾಡಿನ ಜನತೆಯ ಸಂಕಷ್ಟಗಳಿಗೆ ಸ್ಪಂದಿಸಲು ನಾವು ಮುಂದಾದೆವು. ಇಡಿ ದೇಶದಲ್ಲಿ ಇಷ್ಟೊಂದು ದೊಡ್ಡ ಮಟ್ಟದ , ದೊಡ್ಡ ಮೊತ್ತದ ಜನ ಸ್ಪಂದನೆಯ ಯೋಜನೆಗಳನ್ನು ಜಾರಿಗೊಳಿಸಿದ್ದು ನಮ್ಮ ಕಾಂಗ್ರೆಸ್ ಸರ್ಕಾರ” ಎಂದರು.

”ನಮ್ಮ ಗ್ಯಾರಂಟಿ ಯೋಜನೆಗಳನ್ನು ನಮ್ಮ ನಾಡಿನ ಶೇ. 97ಕ್ಕೂ ಹೆಚ್ಚು ಜನ ಸ್ವಾಗತಿಸಿ, ಸಂಭ್ರಮಿಸಿದ್ದಾರೆ. ಸಮಾಧಾನ ಪಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲೆಲ್ಲಾ ವರದಿ ಮಾಡಿವೆ. ಇದು ಪ್ರತಿಯೊಬ್ಬ ಕಾಂಗ್ರೆಸ್ ಶಾಸಕರು, ಕಾರ್ಯಕರ್ತರು, ಬೆಂಬಲಿಗರು ಮತ್ತು ಅಭಿಮಾನಿಗಳು ಎದೆ ಎತ್ತಿ ಹೆಮ್ಮೆ ಪಡುವ ಸಂದರ್ಭ” ಎಂದು ಸಂತಸ ವ್ಯಕ್ತಪಡಿಸಿದರು.

”ನಮ್ಮ ಐದು ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗಗಳ ಬದುಕಿಗೂ ಸ್ಪಂದಿಸಿವೆ. ಇದು ಬಿಜೆಪಿ ಪರಿವಾರಕ್ಕೆ ನಡುಕ ಹುಟ್ಟಿಸಿದೆ. ಹೀಗಾಗಿ ನಾಡಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ವಿಪರೀತ ಸುಳ್ಳುಗಳನ್ನು, ನಕಲಿ ವಿಡಿಯೊಗಳನ್ನು ಸೃಷ್ಟಿಸುತ್ತಾರೆ. ಶಾಸಕರೊಬ್ಬರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿ, ಸುದ್ದಿ ಮಾಡಿಸಿದ್ದು ಈ ಕುತಂತ್ರದ ಭಾಗವೇ ಆಗಿದೆ’ ಎಂದರು.

”ಈಗ ಶಾಸಕರೇ ಆ ಪತ್ರ ತಮ್ಮದಲ್ಲ ಎಂದು ಸ್ಪಷ್ಟನೆ ನೀಡಿದ್ದಾಗಿದೆ. ವಿಪರ್ಯಾಸ ಅಂದರೆ ಸತ್ಯ ಏನು ಎಂದು ಗೊತ್ತಾಗುವುದರೊಳಗೆ ಅವರು ಸುಳ್ಳನ್ನು ವ್ಯಾಪಕವಾಗಿ ಹರಡಿದ್ದಾರೆ” ಎಂದು ಹೇಳಿದರು.

”ಕರ್ನಾಟಕ ರಾಜ್ಯದ ಜನತೆ ಈ ವಿಧಾನಸಭಾ ಚುನಾವಣೆಯಲ್ಲಿ ನೀಡಿರುವ ತೀರ್ಪು ಇಡಿ ದೇಶದ ರಾಜಕಾರಣಕ್ಕೆ ಗೇಮ್ ಚೇಂಜರ್ ಎನ್ನುವ ವಿಶ್ಲೇಷಣೆಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವ್ಯಕ್ತವಾಗಿದೆ. ಹೀಗಾಗಿ ಸುಳ್ಳಿನ‌ ಸರಮಾಲೆಗಳ ಮೂಲಕ ಅವರು ಐದು ಗ್ಯಾರಂಟಿಗಳ ಯಶಸ್ಸು ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಾರೆ. ಈ ಬಗ್ಗೆ ಪ್ರತಿಯೊಬ್ಬ ಶಾಸಕರೂ ಎಚ್ಚರದ ಸ್ಥಿತಿಯಲ್ಲಿದ್ದು ಅವರ ಸುಳ್ಳುಗಳಿಗೆ ನೀವೂ ದಾಳ ಆಗಬೇಡಿ” ಎಂದು ಎಚ್ಚರಿಸಿದರು.

”ಆಡಳಿತಾತ್ಮಕ ಒತ್ತಡಗಳ ನಡುವೆಯೂ ನಾನು ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ. ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಚರ್ಚಿಸುತ್ತೇನೆ. ಸರ್ಕಾರದಿಂದ ತುರ್ತಾಗಿ ಆಗಬೇಕಿರುವ ಕೆಲಸಗಳು ಸಮರ್ಪಕವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ. ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ, ಪಕ್ಷದ ವೇದಿಕೆಯಲ್ಲಿ ಚರ್ಚಿಸಿ” ಎಂದು ಸಿಎಂ ಸಿದ್ದರಾಮಯ್ಯ ತಿಳಿಹೇಳಿದರು.

ಇದನ್ನೂ ಓದಿ: ಲಲಿತ ಮೋದಿ, ನೀರವ್ ಮೋದಿಯನ್ನು ನಿಮ್ಮೊಂದಿಗೆ ಹೋಲಿಸಬಹುದೇ?: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...