Homeಕರ್ನಾಟಕಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ, ಪರಿಣಾಮ ನೆಟ್ಟಗಾಗದು; ಅಮೂಲ್ ವಿರುದ್ಧ ಸಿದ್ದರಾಮಯ್ಯ ಗರಂ

ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ, ಪರಿಣಾಮ ನೆಟ್ಟಗಾಗದು; ಅಮೂಲ್ ವಿರುದ್ಧ ಸಿದ್ದರಾಮಯ್ಯ ಗರಂ

“ಮೋದಿ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ?”

- Advertisement -
- Advertisement -

‘ನಂದಿನಿ ಉಳಿಸಿ’, ‘ಅಮೂಲ್‌ ವಾಪಸ್ ಕಳಿಸಿ’ ಅಭಿಯಾನ ಬಿರುಸು ಪಡೆದ ಬೆನ್ನಲ್ಲೇ ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, “ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ, ಪರಿಣಾಮ ನೆಟ್ಟಗಾಗದು” ಎಂದು  ಎಚ್ಚರಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕನ್ನಡಿಗರು ಕಟ್ಟಿದ್ದ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯಿತು. ಈಗ ನಮ್ಮ ನಂದಿನಿಯನ್ನು ಮುಕ್ಕಲು ಹೊರಟಿದ್ದೀರಾ?” ಎಂದು ಪ್ರಶ್ನಿಸಿದ್ದಾರೆ.

“ನಮ್ಮ ವಿಜಯಾ ಬ್ಯಾಂಕನ್ನು ನುಂಗಿದ ಬರೋಡಾ ಬ್ಯಾಂಕ್ ಗುಜರಾತ್‌ನದ್ದು, ಬಂದರು, ಏರ್ ಪೋರ್ಟ್ ನುಂಗಿದ್ದ ಅದಾನಿ ಗುಜರಾತ್‌‌ನವರು, ಈಗ ಕೆಎಂಎಫ್ ನುಂಗಲು ಹೊರಟಿರುವ ಅಮುಲ್ ಗುಜರಾತ್‌ನದ್ದು. ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಗುಜರಾತಿ ಆಕ್ರಮಣ ಇನ್ನು ಸಹಿಸಲು ಸಾಧ್ಯ ಇಲ್ಲ. ಕರ್ನಾಟಕದಲ್ಲಿ ಅಮುಲ್ ಉತ್ಪನ್ನಗಳ ಮಾರಾಟವನ್ನು ಗೌರವಪೂರ್ವಕವಾಗಿ ನಿಲ್ಲಿಸಿ. ಕನ್ನಡಿಗರ ನಾಡಪ್ರೇಮ, ಸ್ವಾಭಿಮಾನವನ್ನು ಕೆಣಕಲು ಹೋಗಬೇಡಿ, ಪರಿಣಾಮ ನೆಟ್ಟಗಾಗದು” ಎಂದು ಮುನ್ನೆಚ್ಚರಿಕೆ ನೀಡಿದ್ದಾರೆ.

“ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಅಮುಲ್ ಜೊತೆ ಕೆಎಂಎಫ್ ವಿಲೀನದ ಪ್ರಸ್ತಾವ ಮಾಡಿದ ದಿನದಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಪ್ರಹಾರ ಶುರುವಾಗಿದೆ, ಏನಿದು ನಿಮ್ಮ ಕರಾಮತ್ತು?” ಎಂದು ಕೇಳಿದ್ದಾರೆ.

“ಇದ್ದಕ್ಕಿದ್ದ ಹಾಗೆ ಮಾರುಕಟ್ಟೆಯಿಂದ ನಂದಿನಿ ಹಾಲು ಮತ್ತಿತರ ಉತ್ಪನ್ನಗಳು ಮಾಯವಾಗುತ್ತಿವೆ. ಗುಜರಾತ್‌ನಿಂದ ನೀವು ಕಳುಹಿಸುತ್ತಿರುವ ಅಮುಲ್ ಹಾಲು ಮತ್ತು ಉತ್ಪನ್ನಗಳ ಮಾರಾಟದ ಬಿರುಸು ಹೆಚ್ಚಾಗಿದೆ. ಇವೆಲ್ಲವೂ ಸಹಜ ಬೆಳವಣಿಗೆಯೇ?” ಎಂದು ಟೀಕಿಸಿದ್ದಾರೆ.

“ಭರವಸೆ ನೀಡಿದಂತೆ ಯುವಜನರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡಲಿಲ್ಲ, ಬದಲಿಗೆ ನಮ್ಮ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳಲ್ಲಿನ ಕನ್ನಡಿಗರ ಉದ್ಯೋಗಗಳನ್ನು ಕಿತ್ತುಕೊಂಡಾಯಿತು. ಈಗ ರೈತರ ಹೊಟ್ಟೆಗೆ ಹೊಡೆಯುವ ಹುನ್ನಾರವೇ?” ಎಂದು ಹರಿಹಾಯ್ದಿದ್ದಾರೆ.

“ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಕ್ಷೀರಧಾರೆ ಮತ್ತು ಕ್ಷೀರಭಾಗ್ಯ ಯೋಜನೆಗಳು ಅನ್ನಭಾಗ್ಯ ಯೋಜನೆಯ ರೀತಿಯಲ್ಲಿಯೇ ನನಗೆ ಸಂತೃಪ್ತಿ ತಂದ ಯೋಜನೆಗಳು. ಗೋಭಕ್ತಿ ಎಂದರೆ ಗೋಮಾಂಸ ಮಾರಾಟಕ್ಕೆ ಲೈಸೆನ್ಸ್ ಕೊಡುವುದೇ ಮೋದಿ ಜೀ?” ಎಂದು ಕುಟುಕಿದ್ದಾರೆ.

“ಹಾಲಿನ ಸಬ್ಸಿಡಿಯನ್ನು ಲೀಟರಿಗೆ 5 ರೂ. ಹೆಚ್ಚಿಸಿ ನಾನು ಕ್ಷೀರಧಾರೆ ಯೋಜನೆ ಜಾರಿಗೊಳಿಸಿದ್ದೆ. ಇದರಿಂದಾಗಿ 20-12-2013 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಹಾಲು ಹೆಚ್ಚಾಯಿತು ಎಂದು ನಾವು ಖರೀದಿ ಕಡಿಮೆ ಮಾಡಿರಲಿಲ್ಲ. ಹೆಚ್ಚುವರಿ ಹಾಲನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ನೀಡಲು ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಇದು ಗೋಸಂಪತ್ತು, ರೈತ ಸಂಪತ್ತು ಮತ್ತು ಮಕ್ಕಳ ಸಂಪತ್ತು ಬೆಳೆಸಿದ ನಮ್ಮ ಆಡಳಿತಶೈಲಿ. ನಿಮ್ಮದೇನು?” ಎಂದು ಪ್ರಶ್ನಿಸಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. 99 ಲಕ್ಷ ಲೀಟರ್ ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಸಂಗ್ರಹವಾಗುತ್ತಿದೆ. ಇದು ನೀವು ಮತ್ತು ಅಮಿತ್ ಶಾ ಕೂಡಿ ಕೆಎಂಎಫ್ ವಿರುದ್ಧ ಮಾಡಿರುವ ಷಡ್ಯಂತ್ರವೇ?” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಕೆಎಂಎಫ್ ಹಾಲು ಖರೀದಿಸುತ್ತಿಲ್ಲ ಎಂದು ಹಳ್ಳಿಗಳಲ್ಲಿ ಪಶುಪಾಲಕರು ಗೋಳಾಡುತ್ತಿದ್ದಾರೆ. ಹಾಲು ಸಂಗ್ರಹದ ಪ್ರಮಾಣ ಕಡಿಮೆಯಾಗಿರುವ ಕಾರಣದಿಂದಾಗಿ ಪ್ರತಿದಿನ ಸುಮಾರು 11 ಕೋಟಿ ರೂಪಾಯಿ ಹಣ ರೈತರ ಕೈತಪ್ಪಿ ಹೋಗುತ್ತಿದೆ. ಇದೇನಾ ನಿಮ್ಮ ರೈತರ ಆದಾಯ ದುಪ್ಟಟ್ಟುಗೊಳಿಸುವ ಯೋಜನೆ?” ಎಂದಿದ್ದಾರೆ.

“ಗುಜರಾತ್ ರಾಜ್ಯದ ಅಮುಲ್ ಪ್ರವೇಶದಿಂದ ನಂದಿನಿಯ ಬೇಡಿಕೆ ಇನ್ನಷ್ಟು ಕುಸಿದು ಕೆಎಂಎಫ್ ಹಾಲಿನ ಸಂಗ್ರಹ ಕಡಿಮೆಯಾಗಲಿದೆ. ಗ್ರಾಮೀಣ ಭಾಗದಲ್ಲಿ ಕೃಷಿಕರ ಪ್ರಮುಖ ಆದಾಯದ ಮೂಲವಾದ ಹೈನುಗಾರಿಕೆಗೆ ಯಾಕೆ ಕಲ್ಲು ಹಾಕುತ್ತಿದ್ದೀರಾ?” ಎಂದು ಗುಡುಗಿದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಬರ್ವಾಲ್‌ಗಳು, ಬಿಂದ್ರಾಗಳು, ಜೈನ್‌ಗಳು, ಶರ್ಮಾಗಳ ಬೀಫ್ ರಫ್ತು ಪ್ರಮಾಣ ಸಾವಿರಾರು ಕೋಟಿಗಳಿಗೆ ಏರಿಕೆಯಾಗಿರುವುದಾಗಿ ವರದಿಗಳಿವೆ. ಇವರ ಮೇಲಿರುವ ಕೃಪಕಟಾಕ್ಷ ಯಾರದ್ದು?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಸಾಮಾಜಿಕ ಮಾಧ್ಯಮದಲ್ಲಿ ‘#AmulGoback, #SaveKMF’ ಹ್ಯಾಶ್‌ಟ್ಯಾಗ್‌ ಟ್ರೆಂಡ್

“ನಮ್ಮ ಸರ್ಕಾರ ಐದು ವರ್ಷಗಳಲ್ಲಿ 1,356 ಕೋಟಿ ರೂಪಾಯಿಗಳನ್ನು ಹಾಲಿನ ಸಬ್ಸಿಡಿ ರೂಪದಲ್ಲಿ ರೈತರಿಗೆ ಕೊಟ್ಟಿತ್ತು. ಆದರೆ ಬಿಜೆಪಿ ಸರ್ಕಾರ 2020 -21 ರಲ್ಲಿ 1,186 ಕೋಟಿ ಖರ್ಚು ಮಾಡಿದ್ದರೆ 2023-24ಕ್ಕೆ ಕೇವಲ 1,200 ಕೋಟಿ ರೂ.ಗಳನ್ನು ಬಜೆಟ್ನಲ್ಲಿ ಒದಗಿಸಿ ಅನ್ಯಾಯ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಳೆದ 5 ವರ್ಷಗಳಲ್ಲಿ ಪಶು ಆಹಾರದ ಬೆಲೆಗಳು ಮೂರು ಪಟ್ಟು ಹೆಚ್ಚಾಗಿವೆ. 2017-18ರಲ್ಲಿ 49 ಕೆ.ಜಿ ಬೂಸಾದ ಬೆಲೆ 450 ರೂ. ಇದ್ದದ್ದು ಈಗ 1,350 ರೂ.ಗಳಿಗೆ ಏರಿಕೆಯಾಗಿದೆ. 30 ಕೆಜಿ ಹಿಂಡಿಯ ಬೆಲೆ 400 ರೂ.ಗಳಿಂದ 1,500 ಕ್ಕೇ ಏರಿದೆ” ಎಂದು ವಿಷಾದಿಸಿದ್ದಾರೆ.

“ರಾಜ್ಯದ ಬಿಜೆಪಿ ಸರ್ಕಾರ ಸರ್ಕಾರಿ ಕಾವಲು ಜಮೀನುಗಳನ್ನು, ಡಿನೋಟಿಫೈ ಮಾಡಿ ಉಳ್ಳವರಿಗೆ, ಆರ್‌ಎಸ್‌ಎಸ್ ನವರಿಗೆ, ಬಂಡವಾಳಿಗರಿಗೆ ಹಂಚಲು ಪ್ರಾರಂಭಿಸಿದೆ. ಟಿಪ್ಪುಸುಲ್ತಾನನ ದೂರದೃಷ್ಟಿಯ ಫಲವಾದ ಲಕ್ಷಾಂತರ ಎಕರೆ ವಿಸ್ತೀರ್ಣದ ಅಮೃತ್ ಮಹಲ್ ಕಾವಲು ಪ್ರದೇಶ ಮಾಯವಾಗುತ್ತಿರುವುದು ಯಾರಿಂದ? ಆರ್‌ಎಸ್‌ಎಸ್‌ಗೆ ಸರ್ಕಾರಿ ಜಮೀನುಗಳನ್ನು ಮನಸೋ ಇಚ್ಛೆ ನೀಡಲಾಗುತ್ತಿದೆ. ನಮ್ಮ ರೈತರ ಜಾನುವಾರುಗಳಿಗೆ ಮೇಯಲು ಜಾಗ ಇಲ್ಲದಂತಾಗಿದೆ. ಇದನ್ನು ಕೂಡಲೆ ನಿಲ್ಲಿಸಿ ರಾಜ್ಯದಲ್ಲಿರುವ ಎಲ್ಲ ಮೇವಿನ ಕ್ಷೇತ್ರಗಳನ್ನು ಉಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...