Homeಚಳವಳಿರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

ಟ್ವಿಟ್ಟರ್‌ ಬಳಕೆದಾರರು "ಮಾಧ್ಯಮಗಳಿಗೆ ಸಲಹೆ ನೀಡಿದ್ದು ಸಾಕು, ಇನ್ನಾದರೂ ಶಿಕ್ಷೆ ನೀಡಿ" ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಕಾಲೆಳೆದಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ‘ಖಲಿಸ್ತಾನಿಗಳು’ ಮತ್ತು ರಾಷ್ಟ್ರ ವಿರೋಧಿಗಳು ಎಂದು ಲೇಬಲ್ ಮಾಡದಂತೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮಾಧ್ಯಮಗಳಿಗೆ ಸಲಹೆ ನೀಡಿದೆ.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ, ಯಾವುದೇ ಭಿನ್ನಾಭಿಪ್ರಾಯವನ್ನು ಅವಹೇಳನ ಮಾಡುವಂತಹ ನಿರೂಪಣೆಗೆ ಸಹಕರಿಸಬಾರದು ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರೈತ ಪ್ರತಿಭಟನಾಕಾರರನ್ನು, ಅದರಲ್ಲೂ ಹೆಚ್ಚಾಗಿ ಪಂಜಾಬ್‌ನ ಸಿಖ್ ಸಮುದಾಯದ ರೈತರನ್ನು ಪ್ರತ್ಯೇಕತಾವಾದಿಗಳಾದ ಖಲಿಸ್ತಾನಿಗಳು ಮತ್ತು ರಾಷ್ಟ್ರ ವಿರೋಧಿಗಳು ಎಂದು ಸುದ್ದಿ ವಾಹಿನಿಗಳು ಸೇರಿದಂತೆ ಕೆಲವು ಮಾಧ್ಯಮಗಳು ಹೇಳುತ್ತಿವೆ. ಈ ಹಿನ್ನೆಲೆಯಲ್ಲಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಇಂದು ಮಾಧ್ಯಮಗಳಿಗೆ ಸಲಹೆ ನೀಡಿದೆ.

ಇದನ್ನೂ ಓದಿ: ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತ ಸುದ್ದಿ ಪ್ರಸಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ  ಸಂಪಾದಕರ ಸಂಘ, ಯಾವುದೇ ಸಾಕ್ಷಿಗಳು ಮತ್ತು ಪುರಾವೆಗಳಿಲ್ಲದೆ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿರುವವರನ್ನು ಕೆಲವು ಮಾಧ್ಯಮಗಳು ಅವರನ್ನು ‘ಖಲಿಸ್ತಾನಿಗಳು’, ‘ರಾಷ್ಟ್ರ ವಿರೋಧಿಗಳು’ ಎಂಬ ಪದ ಬಳಸುತ್ತಿವೆ ಎಂದಿದೆ.

“ಇಂತಹ ಪದ ಬಳಕೆ ಮತ್ತು ವಿವರಣೆ ಜವಾಬ್ದಾರಿಯುತ ಮತ್ತು ನೈತಿಕ ಪತ್ರಿಕೋದ್ಯಮದ ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ಇಂತಹ ಕ್ರಮಗಳು ಮಾಧ್ಯಮದ ವಿಶ್ವಾಸಾರ್ಹತೆಗೆ ಧಕ್ಕೆಯುಂಟುಮಾಡುತ್ತವೆ” ಎಂದು ಹೇಳಿದೆ.

ಇದನ್ನೂ ಓದಿ: ಮುನ್ಸೂಚನೆಯಿಲ್ಲದೆ ’ಕಾಶ್ಮೀರ ಟೈಮ್ಸ್’‌‌ ಕಚೇರಿಗೆ ಸೀಲ್- ಎಡಿಟರ್ಸ್ ಗಿಲ್ಡ್‌ ಖಂಡನೆ

ರೈತರ ಪ್ರತಿಭಟನೆಯನ್ನು ವರದಿ ಮಾಡುವವರು “ಸಾಂವಿಧಾನಿಕ ಹಕ್ಕುಗಳ ಮೂಲಕ ಪ್ರತಿಭಟನೆ ಮಾಡುವವರ ವಿರುದ್ಧ ಪಕ್ಷಪಾತ ಮಾಡದೇ, ನ್ಯಾಯಯುತ, ವಸ್ತುನಿಷ್ಠವಾಗಿ ವರದಿ ಮಾಡಬೇಕು ಎಂದು ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡಿದೆ.

ಪ್ರತಿಭಟನೆ ಶುರುವಾಗಿ ಇಷ್ಟು ದಿನಗಳಾದ ಮೇಲೆ, ಅದರಲ್ಲೂ ಮಾಧ್ಯಮಗಳು ರೈತರನ್ನು ಖಲಿಸ್ತಾನಿಗಳು, ರಾಷ್ಟ್ರ ವಿರೋಧಿಗಳು ಎಂದೆಲ್ಲಾ ಕರೆದ ಮೇಲೆ ಇಂತಹ ಸಲಹೆಯ ಅವಶ್ಯಕತೆ ಇರಲಿಲ್ಲ ಎಂದು ಎಡಿಟರ್ಸ್ ಗಿಲ್ಡ್‌ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗುತ್ತಿದೆ.

ಹಲವು ಮಂದಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಟ್ವಿಟ್ ಅನ್ನು ರಿಟ್ವಿಟ್ ಮಾಡಿ, “ನೀವು ಚಲನಚಿತ್ರಗಳಲ್ಲಿ ಎಲ್ಲಾ ಮುಗಿದ ಮೇಲೆ ಬರುವ ಪೊಲೀಸರಂತೆ, ಯಾವುದೇ ಪ್ರಯೋಜನ ಇಲ್ಲ” ಎಂದಿದ್ದಾರೆ.

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು “ಮಾಧ್ಯಮಗಳಿಗೆ ಸಲಹೆ ನೀಡಿದ್ದು ಸಾಕು, ಇನ್ನಾದರೂ ಶಿಕ್ಷೆ ನೀಡಿ” ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಕಾಲೆಳೆದಿದ್ದಾರೆ.

ಕೆಲವು ಮಾಧ್ಯಮಗಳು ರೈತರ ಪ್ರತಿಭಟನೆ ಶುರುವಾದಾಗಿನಿಂದಲೂ, ರೈತರನ್ನು ಖಲಿಸ್ತಾನಿಗಳು ಎಂದು ಬಿಂಬಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಪಂಜಾಬ್, ರಾಜಸ್ತಾನ ಮೂಲದ ರೈತರು ಹೆಚ್ಚಾಗಿ ಕಂಡು ಬರುತ್ತಿರುವುದು ಇದಕ್ಕೆ ಕಾರಣ. ಇಷ್ಟೇ ಅಲ್ಲದೇ ರೈತ ಪ್ರತಿಭಟನೆಯಲ್ಲಿ ಇರುವವರು ರೈತರಲ್ಲ, ಅವರು ಬಡವರಲ್ಲ, ಪೊಲೀಸರನ್ನು ರೈತರೇ ಹೊಡೆಯುತ್ತಿದ್ದಾರೆ ಎಂಬಂತಹ ನಕಲಿ ಸುದ್ದಿಗಳನ್ನು ಪ್ರಚುರ ಪಡಿಸುತ್ತಿದ್ದಾರೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳದೇ, ಕೆವಲ ಸಲಹೆ ನಿಡಲು ಮಾತ್ರ ಸೀಮಿತವಾಗಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ  ಮೇಲೆ ಸಾಮಾಜಿಕ ಹೋರಾಟಗಾರರು, ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...