Homeಮುಖಪುಟ'ಶಿಬಿರ ತೊರೆಯದಿರಿ' | ಸಿಆರ್‌ಪಿಎಫ್ ಸಿಬ್ಬಂದಿಗೆ ತಾಕೀತು ಮಾಡಿದ ಕುಕಿ ಸಂಘಟನೆ!

‘ಶಿಬಿರ ತೊರೆಯದಿರಿ’ | ಸಿಆರ್‌ಪಿಎಫ್ ಸಿಬ್ಬಂದಿಗೆ ತಾಕೀತು ಮಾಡಿದ ಕುಕಿ ಸಂಘಟನೆ!

- Advertisement -
- Advertisement -

“ಯಾವುದೇ ಸಿಆರ್‌ಪಿಎಫ್ ಸಿಬ್ಬಂದಿಯನ್ನು ತಮ್ಮ ಶಿಬಿರದ ಆವರಣದಿಂದ ಹೊರಹೋಗಲು ಅನುಮತಿಸುವುದಿಲ್ಲ” ಎಂದು ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಸೋಮವಾರ ನಡೆದ ಗುಂಡಿನ ಚಕಮಕಿಗೆ ಪ್ರತಿಕ್ರಿಯೆಯಾಗಿ, ಕುಕಿ ವಿದ್ಯಾರ್ಥಿಗಳ ಸಂಘಟನೆ (ಕೆಎಸ್‌ಒ) ಎಚ್ಚರಿಕೆ ನೀಡಿದೆ. ಗುಂಡಿನ ಚಕಮಕಿಯಲ್ಲಿ ಹತ್ತು ಶಂಕಿತ ಕುಕಿ-ಜೋ ಉಗ್ರಗಾಮಿಗಳು ಮತ್ತು ಇಬ್ಬರು ಸಿಆರ್‌ಪಿಎಫ್ ಯೋಧರು ಹತರಾಗಿದ್ದಾರೆ ಎಂದು ಸೇನೆಯು ಹೇಳಿದೆ. ಘಟನೆಯ ಒಂದು ದಿನದ ನಂತರ, ಇಬ್ಬರು ಹಿರಿಯ ನಾಗರಿಕ ಶವಗಳನ್ನು ಪತ್ತೆ ಮಾಡಲಾಗಿದೆ. ಶಿಬಿರ ತೊರೆಯದಿರಿ

ಕುಕಿ-ಜೋ ಸಂಘಟನೆಯಾದ, ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF)ಯು, CRPF ನಿಂದ ಗುಂಡಿಕ್ಕಿ ಕೊಲ್ಲಲ್ಪಟ್ಟ 10 ವ್ಯಕ್ತಿಗಳು ಉಗ್ರಗಾಮಿಗಳಲ್ಲ, ಬದಲಾಗಿ ಕುಕಿ-ಜೋ “ಗ್ರಾಮ ಸ್ವಯಂಸೇವಕರು” ಎಂದು ಪ್ರತಿಪಾದಿಸಿದೆ. ಸೇನೆಯು ಅವರನ್ನು ಹೊಂಚು ಹಾಕಿ ಹತ್ಯೆ ಮಾಡಿದೆ ಎಂದು ಐಟಿಎಲ್‌ಎಫ್ ಹೇಳಿಕೊಂಡಿದೆ. ಶಿಬಿರ ತೊರೆಯದಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಯಾವುದೇ ಸಿಆರ್‌ಪಿಎಫ್ ಸಿಬ್ಬಂದಿ ಈ ಸೂಚನೆಯನ್ನು ಉಲ್ಲಂಘಿಸಿದರೆ ಅದಕ್ಕೆ ಅವರೇ ಜವಾಬ್ದಾರರಾಗಿದ್ದಾರೆ. ಈ ಸೂಚನೆ ನೀಡಿದ ತಕ್ಷಣವೇ ಈ ನಿರ್ದೇಶನ ಜಾರಿಯಲ್ಲಿರುತ್ತದೆ. ಸಿಆರ್‌ಪಿಎಫ್ ಜಿರಿಬಾಮ್‌ನಲ್ಲಿ ನಡೆಸಿದ ಅನಾಗರಿಕ ಕ್ರಮಗಳನ್ನು ಸಾರ್ವಜನಿಕವಾಗಿ ಅಂಗೀಕರಿಸಿ ಅದಕ್ಕಾಗಿ ಕ್ಷಮೆಯಾಚಿಸುವವರೆಗೆ ಇದು ಜಾರಿಯಲ್ಲಿರುತ್ತದೆ” ಎಂದು ಕೆಎಸ್‌ಒ ಹೊರಡಿಸಿದ ನೋಟಿಸ್ ಹೇಳಿದೆ.

ಮಡಿದವರಿಗೆ ಗೌರವ ಸಲ್ಲಿಸಲು ಮಂಗಳವಾರ ಕುಕಿ-ಜೋ ಪ್ರದೇಶಗಳಲ್ಲಿ “ಸಂಪೂರ್ಣ ಬಂದ್” ಆಚರಿಸಲಾಗುತ್ತಿದೆ. ಜಕುರಾಧೋರ್ ಮತ್ತು ಬೊರೊಬೆಕ್ರಾ ಪೊಲೀಸ್ ಠಾಣೆಯ ಸಮೀಪದಲ್ಲಿರುವ ಸಿಆರ್‌ಪಿಎಫ್ ಪೋಸ್ಟ್ ಮೇಲೆ “ಶಸ್ತ್ರಸಜ್ಜಿತ ಉಗ್ರರು” ದಾಳಿ ನಡೆಸಿದ್ದಾರೆ ಎಂದು ಮಣಿಪುರ ಪೊಲೀಸರು ಸೋಮವಾರ ಆರೋಪಿಸಿದ್ದಾರೆ. ಈ ದಾಳಿಗೆ ಪ್ರತಿಯಾಗಿ ಸಿಆರ್‌ಪಿಎಫ್ ಮತ್ತು ಪೊಲೀಸರು ತೀವ್ರ ಪ್ರತಿದಾಳಿ ನಡೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಗುಂಡಿನ ಚಕಮಕಿ ನಿಲ್ಲಿಸಿದ ನಂತರ ಆ ಪ್ರದೇಶದಲ್ಲಿ ಶೋಧ ನಡೆಸಲಾಗಿದ್ದು, 10 ಉಗ್ರರ ಶವಗಳನ್ನು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಘಟನೆಯಲ್ಲಿ ಒಬ್ಬ ಸಿಆರ್‌ಪಿಎಫ್ ಯೋಧ ಗಾಯಗೊಂಡಿದ್ದು, ಅವರನ್ನು ಅಸ್ಸಾಂನ ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

“ಅಮಾನುಷವಾಗಿ ಗುಂಡಿಕ್ಕಿ ಕೊಲ್ಲಲ್ಪಟ್ಟವರಿಗೆ ಸಾಮೂಹಿಕ ದುಃಖ ವ್ಯಕ್ತಪಡಿಸುವ ಮತ್ತು ಬೆಂಬಲ ವ್ಯಕ್ತಪಡಿಸಲು” ಕುಕಿ-ಝೋ ಕೌನ್ಸಿಲ್ ಮಂಗಳವಾರ ಬೆಳಿಗ್ಗೆ 5 ರಿಂದ ಸಂಜೆ 6 ರವರೆಗೆ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಸಂಪೂರ್ಣ ಬಂದ್‌ಗೆ ಕರೆ ನೀಡಿದೆ.

ಇದನ್ನೂ ಓದಿ: ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...