ಪುಂಡರು ಕಾನೂನನ್ನು ಕೈಗೆತ್ತಿಕೊಳ್ಳುವ ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸುವ ಮೂಲಕ ಕಾನೂನು ಪಾಲನೆ ನಿಮ್ಮಿಂದ ಸಾಧ್ಯವಿಲ್ಲ ಎಂದು ನಿಮ್ಮ ಅಸಾಮರ್ಥ್ಯವನ್ನು ತೋಡಿಕೊಂಡಿದ್ದೀರಿ. ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಬುಧವಾರದಂದು ಮಂಗಳೂರಿನಲ್ಲಿ ಮಾತನಾಡಿದ್ದ ಸಿಎಂ ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿಕೊಂಡಿದ್ದರು. “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ನೈತಿಕತೆ ಇಲ್ಲದೇ ನಾವು ಬದುಕಲು ಸಾಧ್ಯವೇ?” ಎಂದು ಅವರು ಹೇಳಿದ್ದರು.
ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿಯ ಹೇಳಿಕೆಯನ್ನು ವಿರೋಧಿಸಿರುವ ಸಿದ್ದರಾಮಯ್ಯ, “ಮುಖ್ಯಮಂತ್ರಿ ಬೊಮ್ಮಾಯಿಯವರೇ, ಪುಂಡರು ಕಾನೂನನ್ನು ಕೈಗೆತ್ತಿಕೊಳ್ಳುವ ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸುವ ಮೂಲಕ ಕಾನೂನು ಪಾಲನೆ ನಿಮ್ಮಿಂದ ಸಾಧ್ಯವಿಲ್ಲ ಎಂದು ನಿಮ್ಮ ಅಸಾಮರ್ಥ್ಯವನ್ನು ತೋಡಿಕೊಂಡಿದ್ದೀರಿ. ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ” ಎಂದು ಹೇಳಿದ್ದಾರೆ.
ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ @BSBommai
ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ನೈತಿಕತೆ ಇಲ್ಲದೇ ನಾವು ಬದುಕಲು ಸಾಧ್ಯವೇ? ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಎಂ ಹೇಳಿದ್ದಾರೆ.#NaanuGauri #MoralPolicing @BSBommai #Mangalore pic.twitter.com/cck2b7W7sO
— Naanu Gauri (@naanugauri) October 13, 2021
‘‘ಅನೈತಿಕ ಪೊಲೀಸ್ ಗಿರಿಗೆ ಬಲಿಯಾಗುತ್ತಿರುವವರು ಅಸಹಾಯಕ, ಅಮಾಯಕ ಹೆಣ್ಣುಮಕ್ಕಳು. ಸ್ತ್ರಿಪೀಡಕರ ಹೆಡೆಮುರಿ ಕಟ್ಟಿ ಜೈಲಿಗೆ ತಳ್ಳಬೇಕಾದ ನೀವು ಅದನ್ನು ಮಾಡದೆ ಆ ದುಷ್ಕರ್ಮಿಗಳ ರಕ್ಷಣೆಗೆ ನಿಂತಿದ್ದೀರಿ. ಕುರ್ಚಿಯ ರಕ್ಷಣೆಗಾಗಿ ಸಂಘ ಪರಿವಾರದ ಓಲೈಕೆ ನಿಮಗೆ ಅನಿವಾರ್ಯವಾಗಿರಬಹುದು. ಇದಕ್ಕಾಗಿ ಇಷ್ಟೊಂದು ಕೆಳ ಮಟ್ಟಕ್ಕೆ ಇಳಿಯುವುದೇ?” ಎಂದು ಕೇಳಿದ್ದಾರೆ.
ಇದನ್ನೂ ಓದಿ: ‘ನಾನು ಬೂಟ್ ನೆಕ್ಕುವ ಮೂಲಕ ಮಂತ್ರಿಯಾಗಿಲ್ಲ’ – ಸಿಎಂ ಬೊಮ್ಮಾಯಿಗೆ ಬಿಜೆಪಿ ಸಂಸದ
“ನಾಳೆಯಿಂದ ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲೆ ಅನೈತಿಕ ಪೊಲೀಸ್ ಗಿರಿಯನ್ನು ಯಾರೇ ನಡೆಸಲಿ, ಅವರದ್ದು ಮುಖವಾಡ ಮಾತ್ರ, ಅಸಲಿ ಮುಖ ಅಂತಹ ಕೃತ್ಯಕ್ಕೆ ಪ್ರಚೋದನೆ,ಉತ್ತೇಜನ ಮತ್ತು ರಕ್ಷಣೆ ನೀಡುವ ನಿಮ್ಮದು ಎಂದು ತಿಳಿದುಕೊಳ್ಳಬಹುದೇ ಮುಖ್ಯಮಂತ್ರಿಗಳೇ?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.
“ಆ್ಯಕ್ಷನ್‌ಗೆ ರಿಯಾಕ್ಷನ್ ಇರುತ್ತೆ ಎಂದು ಹೇಳುವ ಮೂಲಕ ಯಾವ ಕಾಡಿನ ನ್ಯಾಯವನ್ನು ಪಾಠ ಮಾಡುತ್ತಿದ್ದೀರಿ ಮುಖ್ಯಮಂತ್ರಿಗಳೇ.? ಪೊಲೀಸ್ ಇಲಾಖೆಯನ್ನು ರದ್ದು ಮಾಡಿ ನಿಮ್ಮ ಪರಿವಾರಕ್ಕೆ ಕಾನೂನು ಪಾಲನೆಯ ಕೆಲಸವನ್ನು ವಹಿಸಿಕೊಡುವ ದುಷ್ಟ ಉದ್ದೇಶವೇನಾದರೂ ನಿಮಗಿದೆಯೇ?” ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.
“ನಿಮ್ಮ ಆರೋಗ್ಯ ಸಚಿವರು ಇತ್ತೀಚೆಗೆ ಹೆಣ್ಣುಮಕ್ಕಳ ಬದುಕುವ ಸ್ವಾತಂತ್ರ್ಯವನ್ನು ಪ್ರಶ್ನಿಸಿ ಅವಮಾನ ಮಾಡಿದ್ದರು. ಇದೀಗ ನೀವು ಮಹಿಳೆಯರ ಮೆಲೆ ದೌರ್ಜನ್ಯ ನಡೆಸುತ್ತಿರುವವರ ರಕ್ಷಣೆಗೆ ಇಳಿದಿದ್ದೀರಿ.
ನಿಮ್ಮ ಸರ್ಕಾರದ ನಿಷ್ಠೆ ಸಂವಿಧಾನಕ್ಕೋ? ಮನುಸ್ಮೃತಿಗೋ?” ಎಂದು ಸಿದ್ದರಾಮಯ್ಯ ಕೇಳಿದ್ದಾರೆ.
ಇದನ್ನೂ ಓದಿ: ಮುಖ್ಯಮಂತ್ರಿ ಬೊಮ್ಮಾಯಿ ‘ಕೇಶವ ಕೃಪಾ’ದ ಗುಲಾಮ: ಮಾವಳ್ಳಿ ಶಂಕರ್ ಆಕ್ರೋಶ
ಸಿದ್ದರಾಮಯ್ಯ ನವರ ಸರ್ಕಾರವು ಇದ್ದಾಗ ,ಹಿಂಧೂ ಕಾರ್ಯಕರ್ತರ ಕೊಲೆ,ನಿಷ್ಠಾವಂತ ಅಧಿಕಾರಿಗಳ ಮಾರಣ ಹೋಮ ,ಲೋಕಾಯುಕ್ತದ ನಿರ್ನಾಮ ,ಜಾರ್ಜ್ ,ಡಿಕೆಶಿ ಅವರ ಭ್ರಷ್ಟಾಚಾರ ,ಸಿದ್ದರಾಮಯ್ಯ ರ ವಾಚ್ ಹಗರಣ ಹೀಗೆ ಹನುಮಂತನ ಬಾಲದ ತರ ದುರಾಡಳಿತ ದ ಪಟ್ಟಿಯೇ ಇದೆ . ಇಂಥವರಿಗೆ ಬಿಜೆಪಿಯ ಬಗ್ಗೆ ಮಾತಾಡೋ ಯೋಗ್ಯತೆ ಇದಿಯಾ ಸಿದ್ದರಾಮಯ್ಯ ನವರೇ…..
No one is for this country and society
Concept of patristic political role.