Homeಮುಖಪುಟನನ್ನನ್ನು ಮತ್ತೆ ನಕ್ಸಲನನ್ನಾಗಿ ಮಾಡಬೇಡಿ : ನಿತಿನ್ ಗಡ್ಕರಿ ಕಿಡಿ..

ನನ್ನನ್ನು ಮತ್ತೆ ನಕ್ಸಲನನ್ನಾಗಿ ಮಾಡಬೇಡಿ : ನಿತಿನ್ ಗಡ್ಕರಿ ಕಿಡಿ..

- Advertisement -
- Advertisement -

ನಾನು ಮೊದಲು ನಕ್ಸಲನಾಗಿದ್ದೆ. ನಂತರ ನಾನು ಆರ್‌ಎಸ್‍ಎಸ್ ಸೇರಿಕೊಂಡಿದ್ದು, ನೀವು ಮತ್ತೆ ನನ್ನ ನಕ್ಸಲನನ್ನಾಗಿ ಮಾಡಬೇಡಿ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಕೇರಳದ ಹೆದ್ದಾರಿ ಯೋಜನೆಯು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಪದೇ ಪದೇ ತಡವಾಗಿರುವುದರಿಂದ ಇದರ ಕುರಿತು ಚರ್ಚಿಸಲು ಇಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿತಿನ್ ಗಡ್ಕರಿಯನ್ನು ಭೇಟಿಯಾಗಿದ್ದರು. ಆಗ ಗಡ್ಕರಿಯವರು, ಇದೇ ವಿಚಾರಕ್ಕೆ ಪಿಣರಾಯಿ ವಿಜಯನ್ ಅವರು ಐದು ಬಾರಿ ನನ್ನ ಬಳಿ ಬಂದಿದ್ದಾರೆ. ನೀವು ಮಾಡಿದ ಕೆಲಸಕ್ಕೆ ನನಗೆ ನಾಚಿಕೆಯಾಗುತ್ತಿದೆ. ಈ ವಿಚಾರದಲ್ಲಿ ನಿಮಗೆ ತೊಂದರೆ ಕೊಡುವವರು ಯಾರು ಎಂದು ನನಗೆ ಗೊತ್ತಿದೆ. ಈ ಇಲಾಖೆಗೆ ನಾನು ಮುಖ್ಯಸ್ಥ. ಇಂದು ಸಂಜೆಯೊಳಗೆ ಆ ಕೆಲಸ ಆಗಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ನಿತಿನ್ ಗಡ್ಕರಿಯವರ ಕೋಪವನ್ನು ಅರಿತ ತಕ್ಷಣ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು ಕೇರಳದ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಭೂಸ್ವಾಧೀನಕ್ಕೆ ಇದ್ದ ಅಡೆತಡೆಗಳನ್ನು ತೆಗೆದುಹಾಕಿದ್ದಾರೆ.

ನಕ್ಸಲರು ಯಾರು? ಗಡ್ಕರಿ ಹೀಗೆ ಹೇಳಿದ್ದೇಕೆ?

ಸಮಾಜದಲ್ಲಿ ಮೂಲಭೂತ ಬದಲಾವಣೆ ಬಯಸುವವರು ನಕ್ಸಲರಾಗಿದ್ದಾರೆ. ಅದಕ್ಕಾಗಿ ಹಿಂಸಾಮಾರ್ಗವಾದರು ಸರಿಯೇ ಸೈನ್ಯಕಟ್ಟಿ ಕ್ರಾಂತಿ ಮಾಡಬೇಕೆಂಬುದು ಅವರ ಗುರಿ. ಅವರು ಸದಾ ವ್ಯವಸ್ಥೆಯ ವಿರುದ್ಧವಿರುತ್ತಾರೆ. ಏಕೆಂದರೆ ಅವರು ಈ ವ್ಯವಸ್ಥೇಯನ್ನು ಅಸಮಾನತೆಯಿಂದ ಕೂಡಿದೆ ಎಂದು ಭಾವಿಸುತ್ತಾರೆ. ಹಾಗಾಗಿ ಅವರು ಸದಾ ಸಮಾನತೆಯ ಪರವಾಗಿ ಮತ್ತು ಶೋಷಣೆಯ ವಿರುದ್ಧದ ಚಟುವಟಿಕೆಗಳಲ್ಲಿ ತೊಡಗಿರುತ್ತಾರೆ. ಅಷ್ಟೇ ಮುಖ್ಯವಾಗಿ ಅವರು ಸಂಘಪರಿವಾರ ಮತ್ತು ಎಲ್ಲಾ ರಾಜಕೀಯ ಪಕ್ಷಗಳನ್ನು ತೀವ್ರವಾಗಿ ವಿರೋಧಿಸುತ್ತಾರೆ. ನಕ್ಸಲರ ಪ್ರಕಾರ ಸಂಘಪರಿವಾರವೂ ಸಮಾನತೆಯ ವಿರೋಧಿ ಮತ್ತು ವರ್ಣ ವ್ಯವಸ್ಥೆಯನ್ನು ಜಾರಿಗೆ ತರಲು ಶ್ರಮಿಸುತ್ತದೆ ಎಂಬುದಾಗಿದೆ.

ಸದ್ಯಕ್ಕೆ ಅಭಿವೃದ್ದಿ ಕಾರ್ಯಗಳಿಗೆ ಅಡ್ಡಿಯಾಗಿರುವ ಅಧಿಕಾರಿಗಳಿಗೆ ಬಿಸಿಮುಟ್ಟಿಸಲು ನಿತಿನ್ ಗಡ್ಕರಿ ನಾನು ನಕ್ಸಲನಾಗಿದ್ದೆ ಎಂದು ಹೇಳಿಕೆ ನೀಡಿದ್ದಾರೆ. ಹಾಗಾಗಿ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡದಿದ್ದರೆ ಮತ್ತೆ ನಕ್ಸಲನಾಗಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ. ಇವರ ಈ ಹೇಳಿಕೆಯು ಒಂದು ರೀತಿಯಲ್ಲಿ ನಕ್ಸಲರ ಪರ ಇರುವಂತೆಯೂ ಕಾಣುತ್ತದೆ.

ಆದರೆ ನಿತಿನ್‌ ಗಡ್ಕರಿ ಪ್ರತಿನಿಧಿಸುವ ಬಿಜೆಪಿ ಪಕ್ಷ ಮತ್ತು ಆರ್‌.ಎಸ್‌.ಎಸ್‌ ಸಂಘಟನೆಯು ನಕ್ಸಲರನ್ನು ನಖಾಶಿಖಾಂತ ವಿರೋಧಿಸುತ್ತಾರೆ. ಅಷ್ಟೇ ಏಕೆ ಜನಪರ ಹೋರಾಟಗಾರರನ್ನು ಸಹ ಅವರು ಅರ್ಬನ್‌ ನಕ್ಸಲ್ ಎಂದು ಕರೆಯುತ್ತಾರೆ. ಅಂತಹ ಪಕ್ಷದ ನಿತಿನ್ ಗಡ್ಕರಿಯವರು ನಾನು ನಕ್ಸಲನಾಗಬೇಕಾಗುತ್ತದೆ ಎಂದಿರುವುದು ಆಶ್ಚರ್‍ಯಕರವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...