ಸರ್ಕಾರದ ಏಕೈಕ ಕಿಡ್ನಿ ಆಸ್ಪತ್ರೆಯನ್ನು ಕೊರೊನಾ ಚಿಕಿತ್ಸಾ ಕೇಂದ್ರವನ್ನಾಗಿ ಮಾಡಬೇಡಿ: KSKSWS

ಕರ್ನಾಟಕದಲ್ಲಿರುವ ಏಕೈಕ ಸರ್ಕಾರಿ ಕಿಡ್ನಿ ಆಸ್ಪತ್ರೆಯನ್ನು ಕೊರೊನಾ ಚಿಕಿತ್ಸಾ ಕೇಂದ್ರವನ್ನಾಗಿ ಮಾಡಲು ಸರ್ಕಾರ ಯೋಚಿಸುತ್ತಿದೆ. ಇದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಕಿಡ್ನಿ ಸುರಕ್ಷಾ ಕ್ಷೇಮಾಭಿವೃದ್ಧಿ ಸಂಸ್ಥೆ (KSKSWS) ಅಧ್ಯಕ್ಷರಾದ ಜೆ. ಎಂ. ವೀರಸಂಗಯ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಸರ್ಕಾರದ ಏಕೈಕ ಕಿಡ್ನಿ ಆಸ್ಪತ್ರೆಯನ್ನು ಕೊರೊನಾ ಚಿಕಿತ್ಸಾ ಕೇಂದ್ರವನ್ನಾಗಿ ಮಾಡಬೇಡಿ: KSKSWS

ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ಸುಮಾರು 150 ಹಾಸಿಗೆಗಳ ಸಾಮರ್ಥ್ಯವಿರುವ ನೆಫ್ರೋ ಯೂರಾಲಜಿ (INU) ಸಂಸ್ಥೆಯನ್ನು ಕೊರೊನಾ ಚಿಕಿತ್ಸಾ ಕೇಂದ್ರವನ್ನಾಗಿಸಲಾಗುತ್ತಿದೆ.

ಇಲ್ಲಿ ಇದುವರೆಗೂ ಸಾವಿರಾರು ಜನ ಕಿಡ್ನಿ ಸಮಸ್ಯೆ ಇರುವವರು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಪ್ರತಿನಿತ್ಯ ನೂರಾರು ಜನ ಡಯಾಲಿಸಿಸ್, ಶಸ್ತ್ರ ಚಿಕಿತ್ಸೆ, ಕಿಡ್ನಿ ಕಸಿ ಚಿಕಿತ್ಸೆಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇದು ಅತ್ಯಂತ ಸೂಕ್ಷ್ಮವಾದ ಪ್ರಕ್ರಿಯೆಯಾಗಿದ್ದು, ಸರ್ಕಾರವು ಇವರ ಜೀವನದ ಜೊತೆ ಆಟವಾಡಬಾರದು ಎಂದು ವೀರಸಂಗಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

ಸರ್ಕಾರದ ಏಕೈಕ ಕಿಡ್ನಿ ಆಸ್ಪತ್ರೆಯನ್ನು ಕೊರೊನಾ ಚಿಕಿತ್ಸಾ ಕೇಂದ್ರವನ್ನಾಗಿ ಮಾಡಬೇಡಿ: KSKSWS ಮನವಿ

Posted by Naanu Gauri on Thursday, July 30, 2020

ಇದಕ್ಕೆ ಪರ್ಯಾಯವಾಗಿ ಪಿಎಂಎಸ್‌ಐ ಎದುರಿಗೆ ಸೆಂಚುರಿ ಆಸ್ಪತ್ರೆ ಇದೆ. ಅಲ್ಲಿ ಸುಮಾರು 250 ಹಾಸಿಗೆಗಳ ಸಾಮರ್ಥ್ಯವಿದೆ. ಅದನ್ನು ಬಳಸಿಕೊಳ್ಳಬಹುದು. ಹಾಗಾಗಿ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡುವುದರ ಮೂಲಕ ಈ ಪ್ರಕ್ರಿಯೆಯನ್ನು ಕೊನೆಗೊಳಿಸಬೇಕೆಂದು ಅವರೇ ಸ್ವತಃ ಮಾತನಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.


ಇದನ್ನೂ ಓದಿ: ಅನ್‌ಲಾಕ್ 3: ಕರ್ಫ್ಯೂ ಅಂತ್ಯ, ಆಗಸ್ಟ್ ತಿಂಗಳು ಶಾಲೆ ಬಂದ್‌; ಜಿಮ್‌, ಯೋಗ ಸಂಸ್ಥೆ ಓಪನ್

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here