Homeಮುಖಪುಟಬೇಡಿಕೆ ಈಡೇರುವವರೆಗೂ ಜಿಎಸ್‌ಟಿ ಪಾವತಿಸಬೇಡಿ: ವರ್ತಕರಿಗೆ ಪ್ರಧಾನಿ ಸಹೋದರನ ಸಲಹೆ

ಬೇಡಿಕೆ ಈಡೇರುವವರೆಗೂ ಜಿಎಸ್‌ಟಿ ಪಾವತಿಸಬೇಡಿ: ವರ್ತಕರಿಗೆ ಪ್ರಧಾನಿ ಸಹೋದರನ ಸಲಹೆ

- Advertisement -
- Advertisement -

ನಮ್ಮ ಬೇಡಿಕೆಗಳು ಈಡೇರುವವರೆಗೂ ಜಿಎಸ್‌ಟಿ ಪಾವತಿಸಬೇಡಿ ಎಂದು ಅಖಿಲ ಭಾರತ ನ್ಯಾಯಯುತ ಬೆಲೆ ಅಂಗಡಿಗಳ ಅಸೋಷಿಯೇಷನ್ ರಾಷ್ಟ್ರೀಯ ಉಪಾಧ್ಯಕ್ಷರಾದ ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿಯವರು ವರ್ತಕರಿಗೆ ಸಲಹೆ ನೀಡಿದ್ದಾರೆ.

ಹಲವು ಹಕ್ಕೊತ್ತಾಯಗಳನ್ನಿಟ್ಟುಕೊಂಡು ಹೋರಾಡುತ್ತಿರುವ ವರ್ತಕರ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಕೂಗು ಮಹಾರಾಷ್ಟ್ರ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ತಲುಪಬೇಕು. ಉದ್ಧವ್‌ ಠಾಕ್ರೆ ಮತ್ತು ನರೇಂದ್ರ ಮೋದಿಯವರು ಬರುವವರೆಗೂ ಹೋರಾಟ ನಿಲ್ಲಿಸಬೇಡಿ ಎಂದು ಕರೆ ನೀಡಿದ್ದಾರೆ.

ನಾನು ದೇಶದ ಆರೂವರೆ ಲಕ್ಷ ನ್ಯಾಯಯುತ ಅಂಗಡಿಗಳ ವರ್ತಕರನ್ನು ಪ್ರತಿನಿಧಿಸುತ್ತೇನೆ. ನಮ್ಮ ಹಕ್ಕೊತ್ತಾಯಗಳು ಈಡೇರುವವರೆಗೂ ಜಿಎಸ್‌ಟಿ ಪಾವತಿಸಬೇಡಿ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ನರೇಂದ್ರ ಮೋದಿ ಇರಲಿ ಅಥವಾ ಮತ್ಯಾರೇ ಇರಲಿ, ನಿಮ್ಮ ಮಾತನ್ನು ಅವರು ಕೇಳಲೇಬೇಕು. ನೀವು ಇಂದಿನಿಂದ ಜಿಎಸ್‌ಟಿ ಪಾವತಿಸುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಯವರಿಗೆ ಬರೆಯಿರಿ. ನಾವು ಪ್ರಜಾತಂತ್ರ ವ್ಯವಸ್ಥೆಯಲ್ಲಿದ್ದೇವೆಯೇ ಹೊರತು ಗುಲಾಮಿ ವ್ಯವಸ್ಥೆಯಲ್ಲಿ ಅಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಮಹಾರಾಷ್ಟ್ರದ ಠಾಣೆ ಜಿಲ್ಲೆಯ ವರ್ತಕರು ಕೋವಿಡ್‌ ಮತ್ತು ಲಾಕ್‌ಡೌನ್‌ನಿಂದಾಗಿ ನಷ್ಟ ಅನುಭವಿಸಿದ್ದು ಸೂಕ್ತ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಇ-ಕಾಮರ್ಸ್ ಮಳಿಗೆಗಳು ಮಾತ್ರ ಕೆಲಸ ನಿರ್ವಹಿಸಿ ಲಾಭ ಮಾಡಿಕೊಂಡಿವೆ. ಆದರೆ ಉಳಿದ ವರ್ತಕರು ನಷ್ಟದಲ್ಲಿದ್ದಾರೆ ಎಂದು ಅವರು ದೂರಿದ್ದಾರೆ.


ಇದನ್ನೂ ಓದಿ: ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಡ್ಯ | ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ಮತ್ತೆ ಮೂವರ ಬಂಧನ

0
ಮಂಡ್ಯ ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಭ್ರೂಣ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ರಾಮಕೃಷ್ಣ ಅಲಿಯಾಸ್...