Homeಕರ್ನಾಟಕಪ್ರೊಫೈಲ್‌ನಲ್ಲಿ ರಾಷ್ಟ್ರಧ್ವಜ: ಮೋದಿ ಮನವಿ ಆರ್‌ಎಸ್‌ಎಸ್‌ಗೆ ಮುಜುಗರ ತಂದಿತೇ?

ಪ್ರೊಫೈಲ್‌ನಲ್ಲಿ ರಾಷ್ಟ್ರಧ್ವಜ: ಮೋದಿ ಮನವಿ ಆರ್‌ಎಸ್‌ಎಸ್‌ಗೆ ಮುಜುಗರ ತಂದಿತೇ?

“ರಾಷ್ಟ್ರಧ್ವಜ ಪ್ರೊಫೈಲ್ ವಿಚಾರದಲ್ಲಿ ರಾಜಕೀಯ ಮಾಡಬೇಡಿ” ಎಂದು ಆರ್‌ಎಸ್‌ಎಸ್‌ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರವಾಗಿ ತ್ರಿವರ್ಣ ಧ್ವಜವನ್ನು ಏಕೆ ಹಾಕಿಕೊಂಡಿಲ್ಲ ಎಂಬ ಪ್ರಶ್ನೆಯನ್ನು ಜನರು ಕೇಳುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್, “ಇಂತಹ ವಿಷಯಗಳನ್ನು ರಾಜಕೀಯಗೊಳಿಸಬಾರದು. ಆರ್‌ಎಸ್‌ಎಸ್ ಈಗಾಗಲೇ ‘ಹರ್ ಘರ್ ತಿರಂಗ’ ಮತ್ತು ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮಗಳಿಗೆ ತನ್ನ ಬೆಂಬಲವನ್ನು ನೀಡಿದೆ. ಸರ್ಕಾರ, ಖಾಸಗಿ ಸಂಸ್ಥೆಗಳು ಮತ್ತು ಆರ್‌ಎಸ್‌ಎಸ್ ಅಂಗ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಜನ ಮತ್ತು ಸ್ವಯಂಸೇವಕರು ಸಂಪೂರ್ಣವಾಗಿ ಪಾಲ್ಗೊಳ್ಳುವಂತೆ ಆರ್‌ಎಸ್‌ಎಸ್‌ ಜುಲೈನಲ್ಲೇ ಮನವಿ ಮಾಡಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತ್ರಿವರ್ಣ ಧ್ವಜದ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್‌ನಲ್ಲಿ ಹಾಕಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದ ನಂತರವೂ ಆರ್‌ಎಸ್‌ಎಸ್‌ ಮುಖಂಡರು ತಮ್ಮ ಖಾತೆಗಳಲ್ಲಿ ಏಕೆ ತ್ರಿವರ್ಣ ಧ್ವಜದ ಚಿತ್ರವನ್ನು ಹಾಕಿಕೊಂಡಿಲ್ಲ ಎಂಬ ವಿವಾದ ಮುನ್ನೆಲೆಗೆ ಬಂದಿದೆ.

“ಆರ್‌ಎಸ್‌ಎಸ್‌ ಎಂದಿಗೂ ಭಗವಾಧ್ವಜವನ್ನು ಒಪ್ಪುತ್ತದೆಯೇ ಹೊರತು, ತ್ರಿವರ್ಣ ಧ್ವಜವನ್ನಲ್ಲ” ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ. ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಕಾಲದಿಂದಲೂ ಸ್ವಾತಂತ್ರ್ಯ ನಂತರದಲ್ಲೂ ಆರ್‌‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪಿಲ್ಲ. ರಾಜಕೀಯ ಕಾರಣಗಳಿಗಷ್ಟೇ ಇತ್ತೀಚಿನ ವರ್ಷಗಳಲ್ಲಿ ಆರ್‌ಎಸ್‌ಎಸ್‌ ರಾಷ್ಟ್ರಧ್ವಜವನ್ನು ಗೌರವಿಸುತ್ತಿದೆ” ಎಂಬ ಆರೋಪಗಳು ಬಂದಿವೆ.

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಕೆಲವು ತಿಂಗಳ ಹಿಂದೆ, “ನಾವು ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸುತ್ತೇವೆ” ಎಂದು ಹೇಳಿಕೆ ನೀಡಿದ್ದು ವಿವಾದ ಉಂಟಾಗಿತ್ತು. ಅಲ್ಲದೆ ‘ಭಗವಾಧ್ವಜ’ದ ಕುರಿತು ಹೆಗಡೇವಾರ್‌ ಮಾತನಾಡಿರುವುದನ್ನು ‘ಧ್ವಜ’ ಎಂದು ತಿರುಚಿ ಕರ್ನಾಟಕ ಸರ್ಕಾರ ಪಠ್ಯಪುಸ್ತಕದಲ್ಲಿ ಸೇರಿಸಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಮೋದಿ ಹೇಳಿಕೆ ಹೊರಬಿದ್ದಿದೆ. ಬಹುತೇಕ ಆರ್‌ಎಸ್‌ಎಸ್ ನಾಯಕರು ಮೋದಿಯವರ ಮನವಿಗೆ ಸೊಪ್ಪು ಹಾಕಿಲ್ಲ. ಈ  ಕುರಿತು ಟೀಕೆಗಳು ವ್ಯಕ್ತವಾದ ಬಳಿಕ ಕೆಲವು ನಾಯಕರು ತಮ್ಮ ಪ್ರೊಫೈಲ್ ಬದಲಿಸಿದ್ದಾರೆ.

ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್‌ ಭಾಗವತ್‌, ರಾಷ್ಟ್ರೀಯ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮೊದಲಾದ ನಾಯಕರು ಈಗಲೂ ತಮ್ಮ ಟ್ಟಿಟರ್‌ ಪ್ರೊಫೈಲ್‌ನಲ್ಲಿ ತ್ರಿವರ್ಣಧ್ವಜದ ಚಿತ್ರವನ್ನು ಹಾಕಿಕೊಂಡಿಲ್ಲ.

‘ಆರ್‌ಎಸ್‌ಎಸ್‌’ನ ಅಧಿಕೃತ ಟ್ವಿಟರ್‌ ಹಾಗೂ ಫೇಸ್‌ಬುಕ್‌ ಖಾತೆಯಲ್ಲಿ ಈವರೆಗೂ ಭಗವಾಧ್ವಜವೇ ಪ್ರೊಫೈಲ್‌ ಚಿತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಮನವಿಯು ಆರ್‌ಎಸ್‌ಎಸ್‌ಗೆ ಮುಜುಗರ ತಂದಿದಿಯೇ ಎಂಬ ಚರ್ಚೆಗಳು ಶುರುವಾಗಿವೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್‌ ಪ್ರಮುಖ್‌ ಸುನೀಲ್‌, “ಇಂತಹ ವಿಷಯಗಳಲ್ಲಿ ರಾಜಕೀಯ ಮಾಡಬಾರದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಎದ್ದಿರುವ ಪ್ರಶ್ನೆಗಳ ಬಗ್ಗೆ ಸ್ಪಷ್ಟವಾಗಿ ಉತ್ತರಿಸದ ಅವರು, “ಇದು ಒಂದು ಪ್ರಕ್ರಿಯೆ. ಅದನ್ನು ನಮ್ಮದೇ ರೀತಿಯಲ್ಲಿ ನಿಭಾಯಿಸುತ್ತೇವೆ. ಹೇಗೆ ಆಚರಿಸಬೇಕು ಎಂದು ಯೋಚಿಸುತ್ತಿದ್ದೇವೆ. ಸಂಘವು ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪ್ರಾರಂಭಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಸಂಘವು ಬೆಂಬಲಿಸಿದೆ” ಎಂದಿದ್ದಾರೆ.

‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಉತ್ಸಾಹದಿಂದ ಆಚರಿಸಲು ಜನರು ಮತ್ತು ಸ್ವಯಂಸೇವಕರನ್ನು ಆರ್‌ಎಸ್‌ಎಸ್ ಕೇಳಿಕೊಂಡಿದೆ. ಸಿದ್ಧತೆಗಳು ನಡೆಯುತ್ತಿವೆ ಎಂದಿದ್ದಾರೆ.

ಇದನ್ನೂ ಓದಿರಿ: ಬೊಮ್ಮಾಯಿ ಆಡಳಿತದ ಒಂದು ವರ್ಷದಲ್ಲಿ ರಾಜ್ಯ ಕಂಡ ಕೋಮುದ್ವೇಷ ಪ್ರಕರಣಗಳಿವು

“ಇದು ಸಂಘದ ನಿಲುವು. ಇದನ್ನು ರಾಜಕೀಯ ವಿಷಯ ಮಾಡುವುದು ತಪ್ಪು. ಈ ರೀತಿಯ ತೀಕ್ಷ್ಣವಾದ ಪ್ರಶ್ನೆಗಳು ಇರಬಾರದು. ಇಂತಹ ಪ್ರಶ್ನೆಗಳನ್ನು ಎತ್ತುತ್ತಿರುವ ಪಕ್ಷವೇ ದೇಶ ವಿಭಜನೆಗೆ ಕಾರಣವಾಗಿತ್ತು” ಎಂದು ಕಾಂಗ್ರೆಸ್‌ ಮೇಲೆ ಆರೋಪ ಹೊರಿಸಿದ್ದಾರೆ.

ಪಿಎಂ ಮೋದಿ ಮತ್ತು ಹಲವಾರು ಬಿಜೆಪಿ ನಾಯಕರು ಸಾಮಾಜಿಕ ಮಾಧ್ಯಮದಲ್ಲಿ ತ್ರಿವರ್ಣ ಧ್ವಜವನ್ನು ತಮ್ಮ ಪ್ರೊಫೈಲ್ ಚಿತ್ರವನ್ನಾಗಿ ಅಪ್‌ಲೋಡ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಇದಕ್ಕೆ ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಭಾರತದ ಮೊದಲ ಪ್ರಧಾನಿ ಜವಹರಲಾಲ್‌ ನೆಹರೂ ಅವರು ತ್ರಿವರ್ಣಧ್ವಜವನ್ನು ಹಿಡಿದಿರುವ ಫೋಟೋವನ್ನು ಪ್ರೊಫೈಲ್‌ ಚಿತ್ರವಾಗಿ ಅಪ್‌ಲೋಡ್ ಮಾಡಿದ್ದಾರೆ. ಆ ಮೂಲಕ ತ್ರಿವರ್ಣಧ್ವಜವನ್ನು ಅಂದಿನ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿತು ಎಂಬ ಸಂದೇಶವನ್ನು ಕಾಂಗ್ರೆಸ್ ನೀಡಿದೆ.

ದೇಶದ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಾರಂಭಿಸಲಾದ “ಹರ್ ಘರ್ ತಿರಂಗ” ಅಭಿಯಾನವು ಈಗ ಆರ್‌ಎಸ್‌ಎಸ್‌ ಅಂಗಳದಲ್ಲಿ ಸದ್ದು ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...