ಮೊದಲ ದಿನದ ಜೆಇಇ ಪರೀಕ್ಷೆಗೆ 50% ರಷ್ಟು ವಿದ್ಯಾರ್ಥಿಗಳು ಗೈರು: ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ
Photo Courtesy: Scroll.in

ಕಳೆದ ಕೆಲವು ತಿಂಗಳುಗಳಿಂದ NEET, JEE ಪ್ರವೇಶ ಪರೀಕ್ಷೆ ಮುಂದೂಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿರುವ ಬೆನ್ನಲ್ಲೆ ದೇಶ, ವಿದೇಶದ ವಿವಿಧ ವಿಶ್ವವಿದ್ಯಾಲಯಗಳ 150ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದು ಕೂಡಲೇ ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದಾರೆ.

NEET, JEE ಪರೀಕ್ಷೆ ವಿಳಂಬವು ವಿದ್ಯಾರ್ಥಿಗಳ ಭವಿಷ್ಯ ಮುಂದೂಡಿದಂತೆ. ವಿದ್ಯಾರ್ಥಿಗಳ ಭವಿಷ್ಯದ ವಿಚಾರದಲ್ಲಿ ರಾಜೀ ಮಾಡಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಸಕಾಲದಲ್ಲಿ ಪರೀಕ್ಷೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಮುಂದಿಟ್ಟುಕೊಂಡು ಪರೀಕ್ಷೆ ಮುಂದೂಡುವಂತೆ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಅವರ ಅಜೆಂಡಾ ಹೇರಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಸರ್ಕಾರ ಬಗ್ಗದೇ ಆದಷ್ಟು ಬೇಗ ಪರೀಕ್ಷೆ ನಡೆಸಬೇಕು. ಸಾಂಕ್ರಾಮಿಕ ರೋಗದಿಂದಾಗಿ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಅನಿಶ್ಚತತೆಯ ಕಾರ್ಮೋಡಗಳಿವೆ. ಅವರ ಆತಂಕಗಳನ್ನು ಆದಷ್ಟು ಬೇಗನೆ ಪರಿಹರಿಸಬೇಕಾಗಿದೆ ಎಂದು ತಜ್ಞರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯ, ಇಗ್ನೋ, ಲಕ್ನೋ ವಿಶ್ವವಿದ್ಯಾನಿಲಯ, ಜೆಎನ್ ಯು, ಬಿಎಚ್ ಯು, ಐಐಟಿ ದೆಹಲಿ ಮತ್ತು ವಿದೇಶಿ ವಿಶ್ವವಿದ್ಯಾನಿಲಯಗಳಾದ ಲಂಡನ್ ವಿಶ್ವವಿದ್ಯಾನಿಲಯ, ಕ್ಯಾಲಿಪೋರ್ನಿಯಾ ವಿಶ್ವವಿದ್ಯಾನಿಲಯ, ದಿ ಹೀಬ್ರೂ ಯುನಿವರ್ಸಿಟಿ ಆಫ್ ಜೆರುಸಲೆಮ್ ಮತ್ತು ಇಸ್ರೇಲ್ ದೇಶದ ಬೆನ್ ಗುರಿಯನ್ ವಿಶ್ವವಿದ್ಯಾನಿಲಯಗಳ ಶಿಕ್ಷಣ ತಜ್ಞರು ಪತ್ರಕ್ಕೆ ಸಹಿ ಮಾಡಿ ಪರೀಕ್ಷೆ ನಡೆಸಲು ಮನವಿ ಮಾಡಿದ್ದಾರೆ.

ನಿನ್ನೆ ತಾನೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ 7 ರಾಜ್ಯಗಳ ಸಿಎಂಗಳ ಸಭೆ ನಡೆದು ಪರೀಕ್ಷೆ ಮುಂದೂಡಲು ಕಾನೂನು ಸಮರಕ್ಕೆ ಪ್ರತಿಪಕ್ಷಗಳು ಸಜ್ಜಾಗಿವೆ. ಇಂದು ರಾಜ್ಯದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊರೋನಾ ನಡುವೆ ಪರೀಕ್ಷೆ ಬೇಡ, ಪ್ರಧಾನಿಗಳು ಯುವ ವಿದ್ಯಾರ್ಥಿಗಳ ಬಗ್ಗೆ ಸೂಕ್ಷ್ಮತೆ ಹೊಂದಬೇಕು ಮತ್ತು ಪರೀಕ್ಷೆ ಮುಂದೂಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಇತ್ತ ಸರ್ಕಾರ ಪರೀಕ್ಷೆಗಳನ್ನು ಮುಂದೂಡಿ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷವನ್ನು ವ್ಯರ್ಥ ಮಾಡಲು ಸಾದ್ಯವಿಲ್ಲ, ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಪತ್ರತಿಪಕ್ಷಗಳು ಆಟವಾಡುತ್ತಿವೆ. ಯುವಜನತೆಯ ಭವಿಷ್ಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಪರೀಕ್ಷೆ ನಡೆಸಿಯೇ ನಡೆಸುತ್ತೆವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಇಷ್ಟೊಂದು ಚರ್ಚೆ, ಪ್ರತಿಭಟನೆಗಳು, ರಾಜಕೀಯ ಕೆಸರೆರಚಾಟದ ಮಧ್ಯೆಯೇ ನಿನ್ನೆ NTA ಬಿಡುಗಡೆ ಮಾಡಿರುವ ನೀಟ್ ಮತ್ತು JEE ಪರೀಕ್ಷೆಯ ಪ್ರವೇಶ ಪತ್ರಗಳನ್ನು ಈಗಾಗಲೇ 14 ಲಕ್ಷಕ್ಕೂ ಅಧಿಕ ಮಂದಿ ಡೌನ್ ಲೋಡ್ ಮಾಡಿಕೊಂಡಿದ್ದಾರೆ. ಸೆಪ್ಟೆಂಬರ್ 13ಕ್ಕೆ ನೀಟ್ ಪರೀಕ್ಷೆ ಮತ್ತು ಸೆಪ್ಟೆಂಬರ್ 1ರಿಂದ 6ರವರೆಗೆ ಜೆಇಇ ಪರೀಕ್ಷೆಗಳು ನಡೆಯಲಿವೆ.


ಇದನ್ನೂ ಓದಿ: ನೀಟ್, ಜೆಇಇ ಪರೀಕ್ಷೆ: ವಿದ್ಯಾರ್ಥಿಗಳ ಬಗ್ಗೆ ಕೇಂದ್ರಕ್ಕೆ ಕಾಳಜಿಯಿಲ್ಲ ಎಂದ ಸೋನಿಯಾ ಗಾಂಧಿ

Also Read: DU Online Exams: Servers Crash, Chaos and Nightmare for Students

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here