Homeಮುಖಪುಟಸಿನಿಮಾ ಬಿಡುಗಡೆಯಾಗಿ 3 ದಿನ ವಿಮರ್ಶಿಸಬೇಡಿ!: ತಮಿಳು ನಿರ್ಮಾಪಕರ ವಿಚಿತ್ರ ಬೇಡಿಕೆ

ಸಿನಿಮಾ ಬಿಡುಗಡೆಯಾಗಿ 3 ದಿನ ವಿಮರ್ಶಿಸಬೇಡಿ!: ತಮಿಳು ನಿರ್ಮಾಪಕರ ವಿಚಿತ್ರ ಬೇಡಿಕೆ

- Advertisement -
- Advertisement -

ತಮಿಳು ಚಲನಚಿತ್ರ ನಿರ್ಮಾಪಕರ ಮಂಡಳಿಯು (TFPC) ಚಲನಚಿತ್ರ ವಿಮರ್ಶಕರು ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿಗಳಿಗೆ ಭಾನುವಾರ ವಿಚಿತ್ರವಾದ ವಿನಂತಿ ಮಾಡಿದ್ದು, ತಮಿಳು ಸಿನಿಮಾಗಳು ಬಿಡುಗಡೆಯಾಗಿ ಕನಿಷ್ಠ ಮೂರು ದಿನಗಳ ವರೆಗೆ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿಮರ್ಶೆಗಳನ್ನು ಪೋಸ್ಟ್ ಮಾಡಬೇಡಿ ಎಂದು ಹೇಳಿದೆ.

ಸಾಮಾಜಿಕ ಮಾಧ್ಯಮಗಳ ನಕಾರಾತ್ಮಕ ವಿಮರ್ಶೆಗಳು ಚಲನಚಿತ್ರಗಳ ಗಳಿಕೆಗಳನ್ನು ಹಾನಿ ಮಾಡುವುದು ಗಮನಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮಂಡಳಿಯು ಹೇಳಿಕೊಂಡಿದೆ. ಆದರೆ ವಿಮರ್ಶಕರು ಇದನ್ನು ವಿರೋಧಿಸಿದ್ದು, ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಚಿತ್ರ ಬಿಡುಗಡೆಯ ದಿನ ಅದನ್ನು ವೀಕ್ಷಿಸಿದವರು ತಮ್ಮ ಅಭಿಪ್ರಾಯ ಅಥವಾ ವಿಮರ್ಶೆಗಳನ್ನು ಹಂಚಿಕೊಳ್ಳುವುದಕ್ಕೆ ಯಾಕೆ ನಿರ್ಬಂಧಿಸಬೇಕು ಎಂದು ನನಗೆ ಅರ್ಥವಾಗುತ್ತಿಲ್ಲ. ಇಂತಹ ‘ವಿಮರ್ಶೆ ನಿಷೇಧ’ ಜಾರಿಯಾಗುವುದು ಹೇಗೆ ಸಾಧ್ಯ? ಇದು ವ್ಯಕ್ತಿಯೊಬ್ಬನ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಂತೆ ಭಾಸವಾಗುತ್ತಿದೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಚಲನಚಿತ್ರ ವಿಮರ್ಶಕ ಮತ್ತು ಮನರಂಜನಾ ಸಂಪಾದಕ ಸುಧೀರ್ ಶ್ರೀನಿವಾಸನ್ ಹೇಳಿದ್ದಾರೆ.

ಇದನ್ನೂ ಓದಿ: ನಚ್ಚತಿರಂ ನಗರ್ಗಿರದು: ಮನುವಾದಕ್ಕೆ ತಿರುಗೇಟು; ಮನಪರಿವರ್ತನೆಗೆ ಅವಕಾಶ- ಇದು ಪ.ರಂಜಿತ್‌ ಪ್ರೇಮಲೋಕ

ಆದರೆ ಚಿತ್ರ ವಿಮರ್ಶೆಗಳು ಮೂಲಭೂತವಾದ ವಿಷಯಗಳನ್ನು ಅನುಸರಿಸಬೇಕು. ಚಲನಚಿತ್ರದ ಅನುಭವವನ್ನು ಕೊಲ್ಲುವ ಗುರಿಯೊಂದಿಗೆ ವಿಮರ್ಶೆ ಇರಬಾರದು ಎಂದು ತಾನು ಭಾವಿಸುವುದಾಗಿ ಅವರು ಹೇಳಿದ್ದಾರೆ.

“ತಾವು ನೋಡಿದ ಚಲನಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಪೋಸ್ಟ್ ಮಾಡಬೇಡಿ ಎಂದು ಸಾಮಾಜಿಕ ಮಾಧ್ಯಮದ ಯುಗದಲ್ಲಿ ಟ್ವಿಟ್ಟರ್ ಬಳಕೆದಾರರನ್ನು ಕೇಳುವುದು ನಿಜವಾಗಿಯೂ ಕಷ್ಟಕರವಾಗಿರುತ್ತದೆ” ಎಂದು ಚಲನಚಿತ್ರ ವಿಮರ್ಶಕಿ ಮತ್ತು ಸ್ವತಂತ್ರ ಪತ್ರಕರ್ತೆ ಕವಿತಾ ಮುರಳೀಧರನ್ ಅಭಿಪ್ರಾಯಪಟ್ಟಿದ್ದಾರೆ.

“ಚಿತ್ರಗಳ ಕಥೆಗಳನ್ನು ಹಾಕಬೇಡಿ ಎಂದು ಅವರು ಜನರನ್ನು ಕೇಳಬಹುದು. ಆದರೆ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿಮರ್ಶೆಗಳನ್ನು ಹಾಕದಂತೆ ಜನರಿಗೆ ಹೇಳುವುದು ಅಸಮಂಜಸವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

ಈ ಮಧ್ಯೆ, ಈ ‘ವಿನಂತಿ’ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದಾದ್ಯಂತ ಎಲ್ಲಾ ವಿಮರ್ಶಕರಿಗೆ ಅನ್ವಯಿಸುತ್ತದೆಯೇ ಅಥವಾ ಸಾಮಾಜಿಕ ಮಾಧ್ಯಮ ಪ್ರಭಾವಿಗಳಿಗೆ ಮಾತ್ರ ಅನ್ವಯಿಸುತ್ತದೆಯೇ ಎಂಬುದರ ಕುರಿತು TFPC ಇನ್ನೂ ಸ್ಪಷ್ಟತೆಯನ್ನು ನೀಡಿಲ್ಲ. ಅದರ ಸದಸ್ಯರು ಬೇರೆ ಬೇರೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

“ಚಲನಚಿತ್ರದ ಬಿಡುಗಡೆಯಾದ ತಕ್ಷಣ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿಮರ್ಶೆಗಳನ್ನು ಪೋಸ್ಟ್ ಮಾಡುವುದನ್ನು ತಡೆಯಲು ಎಲ್ಲಾ ಚಿತ್ರ ವಿಮರ್ಶಕರಿಗೆ ಕೇಳಿಕೊಳ್ಳುತ್ತಿದ್ದೇವೆ. ಮುಂಬರುವ ದಿನಗಳಲ್ಲಿ ಅಧಿಕೃತ ಪತ್ರಿಕಾಗೋಷ್ಠಿಯಲ್ಲಿ ಇದನ್ನು ಅಧಿಕೃತವಾಗಿ ಘೋಷಿಸಲಾಗುವುದು” ಎಂದು ತೆಲುಗು ಚಲನಚಿತ್ರ ನಿರ್ಮಾಪಕರ ಮಂಡಳಿಯ ಅಧ್ಯಕ್ಷ, TFPC ಸದಸ್ಯ ಸಿ. ಕಲ್ಯಾಣ್ ಹೇಳಿದ್ದಾರೆ.

TFPC ಯ ಉಪಾಧ್ಯಕ್ಷ ಆರ್‌.ಕೆ. ಸುರೇಶ್ ಅವರು, ಎಲ್ಲಾ ವಿಮರ್ಶಕರಿಗೆ ಮಾರ್ಗಸೂಚಿ ಅನ್ವಯಿಸುತ್ತದೆ ಎಂದು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಫಾಸಿಲ್‌ ನಟನೆಯ ‘ಮಲಯನ್‌ಕುಂಜು’ ಸಿನಿಮಾ ‘ಜಾತಿವಾದಿ ಮನಸ್ಥಿತಿ’ಯ ಕುರಿತು ಅನುಕಂಪ ಸೃಷ್ಟಿಸಿದೆಯೇ?

ಆದರೆ, ಕೌನ್ಸಿಲ್ ಕೇವಲ ಸಾಮಾಜಿಕ ಮಾಧ್ಯಮ ಪ್ರಭಾವಿಗಳ ಬಗ್ಗೆ ಮಾತನಾಡುತ್ತಿದೆಯೇ ಹೊರತು ಮುದ್ರಣ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮಗಳ ಬಗ್ಗೆ ಅಲ್ಲ ಎಂದು TFPC ಪ್ರಧಾನ ಕಾರ್ಯದರ್ಶಿ ಆರ್. ರಾಧಾಕೃಷ್ಣನ್ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...