Homeಚಳವಳಿರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

"ಅನಾಥ ಮಗುವಿನ ಕೈಯಲ್ಲಿರುವ ರೊಟ್ಟಿ ತುಂಡನ್ನು ಕಾಗೆ ಕಿತ್ತುಕೊಳ್ಳುವಂತೆ ರೈತರ ರೊಟ್ಟಿಯನ್ನು ಕಿತ್ತುಕೊಳ್ಳಲು ಕಾರ್ಪೊರೇಟ್‌ಗಳು ಪ್ರಯತ್ನಿಸುತ್ತಿದ್ದಾರೆ"

- Advertisement -
- Advertisement -

ಕೇಂದ್ರದ ರೈತ ವಿರೋಧಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಲಕ್ಷಾಂತರ ರೈತರು ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಕಾನೂನುಗಳನ್ನು ತೀವ್ರವಾಗಿ ಖಂಡಿಸಿರುವ ರೈತ ಒಕ್ಕೂಟ, “ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ” ಎಂದು ಭಾವನಾತ್ಮಕವಾಗಿ ಟ್ವೀಟ್ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಿಸಾನ್ ಏಕ್ತಾ ಮೋರ್ಚಾ, “ಅನಾಥ ಮಗುವಿನ ಕೈಯಲ್ಲಿರುವ ರೊಟ್ಟಿ ತುಂಡನ್ನು ಕಾಗೆ ಕಿತ್ತುಕೊಳ್ಳುವಂತೆ ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಲು ಕಾರ್ಪೊರೇಟ್‌ಗಳು ಪ್ರಯತ್ನಿಸುತ್ತಿದ್ದಾರೆ. ರೈತರೂ ಸಹ ಅನಾಥರೆ. ಏಕೆಂದರೆ ತಮ್ಮದೇ ಸರ್ಕಾರ ಕಾರ್ಪೊರೇಟ್‌ಗಳ ಪರವಾಗಿದೆ. ನಮ್ಮ ಜೀವನವನ್ನು ಉಳಿಸಲು ಸಹಕರಿಸಿ” ಎಂದು ಬರೆದುಕೊಂಡಿದೆ.

ಇದನ್ನೂ ಓದಿ: ತೀವ್ರಗೊಳ್ಳುತ್ತಿರುವ ರೈತರ ಆಕ್ರೋಶ: ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ‘7–8 ಲಕ್ಷ ರೈತರನ್ನು’ ಸೇರಿಸಲಾಗಿದೆ – ಅಣ್ಣಾಮಲೈ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾನೂನನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 34 ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನಾ ನಿರತರೊಂದಿಗೆ ಕೇಂದ್ರ ಸರ್ಕಾರ ಇದುವರೆಗೂ ಹಲವು ಭಾರಿ ಮಾತುಕತೆ ನಡೆಸಿದ್ದರೂ ಅವುಗಳೆಲ್ಲವೂ ಮುರಿದು ಬಿದ್ದಿದೆ. ಕೇಂದ್ರವು ಪದೇ ಪದೇ ಒಂದೇ ರೀತಿಯ ಪ್ರಸ್ತಾಪವನ್ನು ಇಡುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ಕಾರ್ಪೋರೇಟ್ ಪರವಿರುವ ಕಾನೂನನ್ನು ರದ್ದುಮಾಡಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದು, ಕೇಂದ್ರ ಸರ್ಕಾರ ಮಾತ್ರ ಇದುವರೆಗೂ ಈ ಕಾನೂನುಗಳನ್ನು ಸಮರ್ಥನೆ ಮಾಡುತ್ತಲೇ ಇದೆ. ಪ್ರಧಾನಿ ಮೋದಿ ಕೂಡಾ ಇತ್ತಿಚೆಗೆ ಕಾನೂನನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ಸಭೆಯಲ್ಲಿ ಕರ್ನಾಟಕದ ಪ್ರತಿನಿಧಿಗಳು

ಕೇಂದ್ರದ ಹೊಸ ಕೃಷಿ ಕಾನೂನಿನ ವಿರುದ್ದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಡಿಸೆಂಬರ್‌ 30 ರಂದು ಸರ್ಕಾರ ಮತ್ತೊಂದು ಸುತ್ತಿನ ಮಾತುಕತೆಗೆ ಕರೆದಿದೆ. ಈ ಹಿನ್ನಲೆಯಲ್ಲಿ ಪ್ರತಿಭಟನಾ ನಿರತ ರೈತರು ಕೇಂದ್ರಕ್ಕೆ ಪತ್ರ ಬರೆದಿದ್ದು, ಮೂರು ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ವಿಧಾನದ ಬಗ್ಗೆ ಮಾತ್ರ ಚರ್ಚೆ ನಡೆಯಬೇಕು ಎಂದು ಹೇಳಿದ್ದಾರೆ.

ಕೇಂದ್ರಕ್ಕೆ ಬರೆದ ಪತ್ರದ ಬಗ್ಗೆ ಪ್ರತಿಕ್ರಿಯೆ ನೀಡಿರುವ 40 ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚ, “ಕೇಂದ್ರ ಸರ್ಕಾರ ನಮ್ಮೊಂದಿಗೆ ನಡೆಸುವ ಮಾತುಕತೆಯಲ್ಲಿ ಮೂರು ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಬಗ್ಗೆ ಚರ್ಚೆ ಕೇಂದ್ರೀಕೃತವಾಗಿಟ್ಟುಕೊಳ್ಳಬೇಕು. ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಸರ್ಕಾರ ಖಾತರಿ ನೀಡಬೇಕು” ಎಂದು ಹೇಳಿದೆ.


ಇದನ್ನೂ ಓದಿ: ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ – ತಮ್ಮ ನಿಲುವು ಸ್ಪಷ್ಟಪಡಿಸಿದ ರೈತ ಮುಖಂಡರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’...

0
ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಹಾದಿಯಾಗಿ ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮತ್ತು ಕಾಂಗ್ರೆಸ್‌ನ ಪ್ರಣಾಳಿಕೆ ವಿರುದ್ಧ ವಾಗ್ಧಾಳಿ ನಡೆಸುತ್ತಾ ಬಂದಿದ್ದಾರೆ. ಈ ಮಧ್ಯೆ ಭಾರತೀಯ ಸಾಗರೋತ್ತರ...