Homeಮುಖಪುಟಐಟಿ ನಿಯಮಗಳ ಅಡಿಯಲ್ಲಿ ಡಿಜಿಟಲ್ ಮೀಡಿಯಾಗಳ ವಿರುದ್ಧ ಬಲವಂತದ ಕ್ರಮ ಸಲ್ಲದು: ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್...

ಐಟಿ ನಿಯಮಗಳ ಅಡಿಯಲ್ಲಿ ಡಿಜಿಟಲ್ ಮೀಡಿಯಾಗಳ ವಿರುದ್ಧ ಬಲವಂತದ ಕ್ರಮ ಸಲ್ಲದು: ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ತಾಕೀತು

- Advertisement -
- Advertisement -

ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳು-2021 ರ ಅಡಿಯಲ್ಲಿ ಡಿಜಿಟಲ್ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು ಎಂದು ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ಬಂಧ ಹೇರಿದೆ.

ಕೇಂದ್ರವು ಹೊಸ ಐಟಿ ನಿಯಮಗಳ ಅಡಿಯಲ್ಲಿ ಡಿಜಿಟಲ್‌ ಮಾಧ್ಯಮಗಳನ್ನು ನಿಯಂತ್ರಿಸಲು ಮುಂದಾಗಿದೆ. ಈ ಕ್ರಮದ ವಿರುದ್ದ ಮದ್ರಾಸ್‌ ಹೈಕೋರ್ಟ್‌ನಲ್ಲಿ ಇಂಡಿಯನ್ ಬ್ರಾಡ್‌ಕಾಸ್ಟರ್ಸ್ ಮತ್ತು ಡಿಜಿಟಲ್ ಫೌಂಡೇಶನ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. 

ಡಿಸೆಂಬರ್ 6ರ ಸೋಮವಾರ ಅರ್ಜಿಯ ವಿಚಾರಣೆ ನಡೆಸಿರುವ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಂಎನ್ ಭಂಡಾರಿ ಮತ್ತು ನ್ಯಾಯಮೂರ್ತಿ ಪಿಡಿ ಆದಿಕೇಶವಲು ಅವರಿದ್ದ ಪೀಠವು, ಹೊಸ ನಿಯಮಗಳಿಗೆ ತಡೆಯಾಜ್ಞೆ ನೀಡಿದೆ. ಅಲ್ಲದೆ, ಹೊಸ ನಿಯಮಗಳಲ್ಲಿರುವ ನಿಬಂಧನೆಗಳನ್ನು ಪ್ರಶ್ನಿಸಿದೆ.

ವಿಚಾರಣೆಯ ಸಂದರ್ಭದಲ್ಲಿ ಪೀಠವು, “ಪ್ರತಿವಾದಿಗಳು (ಕೇಂದ್ರ ಸರ್ಕಾರ) ನ್ಯಾಯಾಲಯದ ಅನುಮತಿಯಿಲ್ಲದೆ ಯಾವುದೇ ಬಲವಂತದ ಕ್ರಮವನ್ನು ತೆಗೆದುಕೊಳ್ಳದಂತೆ ನಿರ್ಬಂಧಿಸಲಾಗಿದೆ” ಎಂದು ಹೇಳಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 25ಕ್ಕೆ ಮುಂದೂಡಲಾಗಿದೆ.

ಹೊಸ ಐಟಿ ನಿಯಮಗಳಿಗೆ ಬಾಂಬೆ ಹೈಕೋರ್ಟ್ ಕೆಲವು ತಿಂಗಳ ಹಿಂದೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಆದರೂ, ನಿಯಮಗಳ ನಿಬಂಧನೆಗಳ ಪ್ರಕಾರ ಕೇಂದ್ರ ಸರ್ಕಾರ ದಂಡದ ಕ್ರಮವನ್ನು ಪ್ರಾರಂಭಿಸುತ್ತಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲರು ಆರೋಪಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಕೇರಳ ಹೈಕೋರ್ಟ್ ಕೂಡ ಇದೇ ರೀತಿಯ ಆದೇಶವನ್ನು ನೀಡಿದೆ.


ಇದನ್ನೂ ಓದಿ: ಡೀಫಾಲ್ಟ್ ಜಾಮೀನು ಪ್ರಶ್ನಿಸಿದ್ದ ಎನ್‌ಐಎ ಅರ್ಜಿ ವಜಾಗೊಳಿಸಿದ ಸುಪ್ರೀಂ: ನಾಳೆ ಸುಧಾ ಭಾರದ್ವಾಜ್‌ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...