Homeಕರ್ನಾಟಕಗ್ಯಾರಂಟಿಗಳಿಂದ ಕೊಟ್ಟ ಖುಷಿಯನ್ನು ಮದ್ಯದಂಗಡಿ ಪರವಾಣಿಗೆ ಮೂಲಕ ಕಸಿಯದಿರಿ: ಸರ್ಕಾರಕ್ಕೆ ಮಹಿಳಾ ಸಂಘಟನೆಗಳ ಮನವಿ

ಗ್ಯಾರಂಟಿಗಳಿಂದ ಕೊಟ್ಟ ಖುಷಿಯನ್ನು ಮದ್ಯದಂಗಡಿ ಪರವಾಣಿಗೆ ಮೂಲಕ ಕಸಿಯದಿರಿ: ಸರ್ಕಾರಕ್ಕೆ ಮಹಿಳಾ ಸಂಘಟನೆಗಳ ಮನವಿ

- Advertisement -
- Advertisement -

”ನೂತನ ರಾಜ್ಯ ಸರಕಾರ ಮಹಿಳೆಯರಿಗೆ ಕೆಲವು ಗ್ಯಾರಂಟಿ ಯೋಜನೆಗಳ ಮೂಲಕ ಖುಷಿ ನೀಡಿತ್ತು. ಆದರೆ ಇದೀಗ ಆ ಖುಷಿಯನ್ನು ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಮೂಲಕ ಕಸಿಯಲು ಹೊರಟಿರುವುದು ಆಘಾತಕಾರಿ” ಎಂದು ದ.ಕ. ಜಿಲ್ಲೆಯ ಮದ್ಯನಿಷೇಧ ಆಂದೋಲನದಡಿ ಜಿಲ್ಲೆಯ ವಿವಿಧ ಸಂಘಟನೆಗಳ ಮಹಿಳಾ ಪ್ರತಿನಿಧಿಗಳು ರಾಜ್ಯ ಸರಕಾರಕ್ಕೆ  ಭಾವನಾತ್ಮಕ ಮನವಿ ಮಾಡಿದ್ದಾರೆ.

ಮಂಗಳೂರಿನ ಪುರಭವನದ ಸಮೀಪದ ರಾಜಾಜೀ ಪಾರ್ಕ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಗಾಂಧಿ ಜಯಂತಿ ಕಾರ್ಯಕ್ರಮದ ಸಂದರ್ಭ ಮಹಿಳಾ ಹೋರಾಟಗಾರರ ಗುಂಪೊಂದು ಜಿಲ್ಲಾ ಮಟ್ಟದ ಅಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿಯನ್ನು ಸಲ್ಲಿಸಿತು.

”ಯಾವುದೇ ಸರಕಾರ ಮದ್ಯ ಮಾರಾಟದಿಂದ ಬರುವ ಆದಾಯವನ್ನು ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸುವುದು ಅಪರಾಧ ಎಂದು ಗಾಂಧೀಜಿ ಹೇಳಿದ್ದರು. ಆದರೆ ಸರಕಾರ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು 600 ಗ್ರಾಮ ಪಂಚಾಯತ್ ಸೇರಿದಂತೆ 1000 ಹೊಸ ಮದ್ಯದಂಗಡಿಗೆ ಪರವಾನಿಗೆ ನೀಡುವ ಪ್ರಸ್ತಾವನೆ ಮುಂದಿಟ್ಟಿರುವುದು ತಿಳಿದು ಆಘಾತಗೊಂಡಿದ್ದೇವೆ” ಎಂದು ಮದ್ಯ ನಿಷೇಧ ಆಂದೋಲನ, ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ, ಯುವ ಮುನ್ನಡೆ ಮಂಗಳೂರು, ಪ್ರಜ್ಞಾ ಸಲಹಾ ಕೇಂದ್ರ, ಕರಾವಳಿ ಲೇಖಕಿಯರ ವಾಚಕಿಯರ ಸಂಘ, ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ, ಕರ್ನಾಟಕ ರಾಜ್ಯ ರೈತ ಸಂಘ (ಸಿಪಿಐಎಂಎಎಲ್)ಗಳನ್ನು ಒಳಗೊಂಡ ಪ್ರತಿನಿಧಿಗಳು ಮನವಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

”ಮದ್ಯ ನಿಷೇಧ ಆಂದೋಲನದ ಮಹಿಳೆಯರು 2015ರಿಂದಲೂ ಹೈಕೋರ್ಟ್‌ನ ಆದೇಶದಂತೆ ಅಕ್ರಮ ಮದ್ಯ ಮಾರಾಟ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಅಕ್ರಮ ಮಾರಾಟಗಾರರ ಮೇಲೆ ಕಠಿಣ ಕ್ರಮ ವಹಿಸಬೇಕು. ಕರ್ನಾಟಕ ಪಂಚಾಯತ್‌ರಾಜ್ ಕಾನೂನಿನ ಅನ್ವಯ (73ನೆ ತಿದ್ದುಪಡಿ) ಗ್ರಾಮಸಭೆಗೆ ಪರಮಾಧಿಕಾರ ನೀಡುವ ಆದೇಶ ಹೊರಡಿಸಬೇಕು. ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಂತೆ ಶೇ. 10ರಷ್ಟು ಮಹಿಳೆಯರು ಆಯಾ ಪಂಚಾಯತ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ನೀಡಬಾರದು ಎಂಬುದಾಗಿ ಗ್ರಾಮ ಸಭೆಯಲ್ಲಿ ನಿರ್ಧರಿಸಿದ್ದಲ್ಲಿ ಆ ಠರಾವನ್ನು ಸರಕಾರ ಎತ್ತಿ ಹಿಡಿಯಬೇಕು ಎಂಬ ತಮ್ಮ ಹಕ್ಕೊತ್ತಾಯವನ್ನು ಪುನರುಚ್ಚರಿಸುತ್ತಿದ್ದೇವೆ. ಮಾತ್ರವಲ್ಲದೆ ಸರಕಾರ ಹೊರತಾಗಿ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ, ಮಾಲ್ ಸೂಪರ್ ಮಾರುಕಟ್ಟೆಗಳಲ್ಲಿ ಹಾಗೂ ಆನ್‌ಲೈನ್ ಮಾರಾಟ ಮಾಡುವ ಪ್ರಸ್ತಾವನೆ ಕೈಬಿಡಬೇಕು” ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಬಿ.ಎಂ. ರೋಹಿಣಿ, ವಿಜಯಲಕ್ಷ್ಮಿ ಬಿ. ಶೆಟ್ಟಿ, ಸ್ವರ್ಣ ಭಟ್, ದೇವಿಕಾ, ಆದಿತ್ಯ ಕೊಲ್ಲಾಜೆ ಅವರನ್ನು ಒಳಗೊಂಡ ನಿಯೋಗ ಸರ್ಕಾರಕ್ಕೆ ಈ ಮನವಿ ಮಾಡಿದೆ.

ಇದನ್ನೂ ಓದಿ: ಶಿವಮೊಗ್ಗ: ಮೀಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...