Homeರಾಜಕೀಯ‘ನನ್ನೊಂದಿಗೆ ನೀವು ಮಾತನಾಡಬೇಡಿ’: ಮಾತಿನ ನಡುವೆ ತೊಂದರೆ ನೀಡಿದ ಸ್ಮೃತಿ ಇರಾನಿಗೆ ಸೋನಿಯಾ ಗಾಂಧಿ

‘ನನ್ನೊಂದಿಗೆ ನೀವು ಮಾತನಾಡಬೇಡಿ’: ಮಾತಿನ ನಡುವೆ ತೊಂದರೆ ನೀಡಿದ ಸ್ಮೃತಿ ಇರಾನಿಗೆ ಸೋನಿಯಾ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಾಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು “ರಾಷ್ಟ್ರಪತ್ನಿ” ಎಂದು ಕರೆದಿದ್ದಕ್ಕಾಗಿ ಗುರುವಾರ ಸಂಸತ್ತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದೇ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಧಿವೇಶನ ಮುಂದೂಡಿದ ನಂತರ ಬಿಜೆಪಿ ಸಂಸದೆಯೊಬ್ಬರ ಜೊತೆಗೆ ಮಾತನಾಡುತ್ತಿದ್ದಾಗ ಮಧ್ಯೆ ಪ್ರವೇಶಿಸಿದ ಸಚಿವೆ ಸ್ಮೃತಿ ಇರಾನಿಯವರೊಂದಿಗೆ “ನನ್ನೊಂದಿಗೆ ನೀವು ಮಾತನಾಡಬೇಡಿ” ಎಂದು ಹೇಳಿದ್ದಾಗಿ ವರದಿಯಾಗಿದೆ.

ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಸಚಿವೆ ಸ್ಮೃತಿ ಇರಾನಿ ಮತ್ತು ಇತರ ಬಿಜೆಪಿ ಸಂಸದರು ಸೋನಿಯಾ ಗಾಂಧಿಯನ್ನು ಕೆಣಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ವಿರುದ್ಧ ಬಿಜೆಪಿ ಸಂಸದರು ಭಾರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಲೋಕಸಭೆಯ ಅಧಿವೇಶನವನ್ನು ಮುಂದೂಡಲಾಗಿತ್ತು. ಈ ನಡುವೆ ಸ್ಮೃತಿ ಇರಾನಿ ಮತ್ತು ಬಿಜೆಪಿ ಸಂಸದರು ‘‘ಸೋನಿಯಾ ಗಾಂಧಿ ಕ್ಷಮೆಯಾಚಿಸಿ’’ ಎಂದು ಆಗ್ರಹಿಸಿದ್ದರು. “ಸೋನಿಯಾ ಗಾಂಧಿ ಅವರೇ ನೀವು ದ್ರೌಪದಿ ಮುರ್ಮು ಅವರಿಗೆ ಆಗಿರುವ ಅವಮಾನವನ್ನು ಅನುಮೋದಿಸಿದ್ದೀರಿ” ಎಂದು ಸ್ಮೃತಿ ಇರಾನಿ ಹೇಳಿದ್ದರು.

ಇದನ್ನೂ ಓದಿ: ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ED ನೋಟಿಸ್

ಪ್ರತಿಭಟನೆಯ ಕಾರಣಕ್ಕೆ ಸದನವನ್ನು ಮುಂದೂಡಿದ ನಂತರ, ಸೋನಿಯಾ ಗಾಂಧಿ ಅವರು ಬಿಜೆಪಿ ಸಂಸದೆ ರಮಾ ದೇವಿ ಅವರೊಂದಿಗೆ ಮಾತನಾಡಲು ನಿರ್ಧರಿಸಿ, ಇಬ್ಬರು ಕಾಂಗ್ರೆಸ್ ಸಂಸದರು ತೆರಳಿದರು. ಸದನದ ಮಹಡಿಯನ್ನು ದಾಟಿ ಬಿಜೆಪಿ ಸಂಸದೆ ರಮಾ ದೇವಿ ಅವರೊಂದಿಗೆ, “ಅಧೀರ್ ರಂಜನ್ ಚೌಧರಿ ಈಗಾಗಲೇ ಕ್ಷಮೆಯಾಚಿಸಿದ್ದಾರೆ. ನನ್ನ ತಪ್ಪೇನು?” ಎಂದು ಕೇಳಿದ್ದಾರೆ.

ಈ ವೇಳೆ ಮಧ್ಯಪ್ರವೇಶಿಸಿದ ಸಚಿವೆ ಸ್ಮೃತಿ ಇರಾನಿ, “ಮೇಡಂ, ನಾನು ನಿಮಗೆ ಸಹಾಯ ಮಾಡಬಹುದೇ? ನಿಮ್ಮ ಹೆಸರನ್ನು ತೆಗೆದುಕೊಂಡಿದ್ದು ನಾನು” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ, “ನನ್ನೊಂದಿಗೆ ನೀವು ಮಾತನಾಡಬೇಡಿ” ಎಂದು ತಿರುಗೇಟು ನೀಡಿದ್ದಾರೆ.

ಸ್ಮೃತಿ ಇರಾನಿ ಅವರು ‘ಬೆರಳು’ ಮಾಡುತ್ತಾ ರಮಾದೇವಿ ಬಳಿ ಬಂದಾಗ ಸೋನಿಯಾ ಗಾಂಧಿ ಅವರು ಸಭ್ಯ ರೀತಿಯಲ್ಲಿ ಸಂಭಾಷಣೆ ನಡೆಸುತ್ತಿದ್ದರು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ಈ ವೇಳೆ ಸ್ಮೃತಿ ಇರಾನಿ ಅವರು, “ನಿಮಗೆ ಎಷ್ಟು ಧೈರ್ಯ, ಈ ರೀತಿ ವರ್ತಿಸಬೇಡಿ, ಇದು ನಿಮ್ಮ ಪಕ್ಷದ ಕಚೇರಿಯಲ್ಲ…” ಎಂದು ಹೇಳಿದ್ದಾರೆ ಎಂದು ಎನ್‌ಡಿಟಿವಿ ಕಾಂಗ್ರೆಸ್ ನಾಯಕರೊಬ್ಬರ ಮಾತನ್ನು ಉಲ್ಲೇಖಿಸಿ ವರದಿ ಮಾಡಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

“ಸೋನಿಯಾ ಗಾಂಧಿ ಅವರು ಸ್ಮೃತಿ ಇರಾನಿ ಅವರಿಗೆ ‘ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ’ ಎಂದು ಎರಡು ಬಾರಿ ಹೇಳಿದ್ದಾರೆ. ಆದರೂ ಅವರು ಸೋನಿಯಾ ಗಾಂಧಿ ಅವರನ್ನು ಸುತ್ತುವರೆದಿದ್ದರು ಮತ್ತು ಅಲ್ಲಿನ ಪರಿಸ್ಥಿತಿ ಗಂಭೀರವಾಯಿತು” ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಸಂಸದರಾದ ಮಹುವಾ ಮೊಯಿತ್ರಾ ಮತ್ತು ಅಪರೂಪಾ ಪೊದ್ದಾರ್ ಮತ್ತು ಎನ್‌ಸಿಪಿಯ ಸುಪ್ರಿಯಾ ಸುಳೆ ಅವರು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಸದಸ್ಯರ ನಡುವಿನಿಂದ ಸೋನಿಯಾ ಗಾಂಧಿಯವರನ್ನು ದೂರ ಸೆಳೆದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಇದರ ನಂತರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಮುಂದಾದರು ಎಂದು ಅದು ಹೇಳಿದೆ.

ರಮಾ ದೇವಿ ಅವರು ತನಗೆ ತಿಳಿದಿರುವುದರಿಂದ ಅವರೊಂದಿಗೆ ಮಾತನಾಡುತ್ತಿದ್ದೆ ಎಂದು ಸೋನಿಯಾ ಗಾಂಧಿ ಅವರು ನಂತರ ಹೇಳಿದ್ದಾರೆ. ‘‘ನಾನು ಭಯ ಪಟ್ಟುಕೊಂಡಿಲ್ಲ. ನನಗೆ ರಮಾದೇವಿಯ ಪರಿಚಯವಿದೆ, ಹಾಗಾಗಿ ನಾನು ‘ಅಧೀರ್ ಕ್ಷಮೆಯಾಚಿಸಿದ್ದಾರೆ ಆದರೆ ನೀವು ಯಾಕೆ ನನ್ನ ಮೇಲೆ ದಾಳಿ ಮಾಡುತ್ತಿದ್ದೀರಿ?’ ಎಂದು ಅವರೊಂದಿಗೆ ಹೇಳಲು ಹೋದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಇಡಿಯಿಂದ ಸೋನಿಯಾಗಾಂಧಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಪೊಲೀಸರ ಮೇಲೆ ಬಿದ್ದ ಡಿಕೆಶಿ, ಶಾಂತಿನಗರದಲ್ಲಿ ಕಾರ್‌ಗೆ ಬೆಂಕಿ

ಸಂಸದೆ ಮಹುವಾ ಮೊಯಿತ್ರಾ ಅವರು ಘಟನೆಯನ್ನು, “ಸೋನಿಯಾ ಗಾಂಧಿಯವರ ಮೇಲೆ ನಡೆದ ಸಂಯೋಜಿತ ದಾಳಿ” ಎಂದು ಕರೆದಿದ್ದಾರೆ.

ಸ್ಮೃತಿ ಇರಾನಿ ಅವರು ತಮ್ಮ ಪಕ್ಷದ ಮುಖ್ಯಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

“ಒಕ್ಕೂಟ ಸರ್ಕಾರದ ಸಚಿವೆ ಸ್ಮೃತಿ ಇರಾನಿ ಇಂದು ಲೋಕಸಭೆಯಲ್ಲಿ ಅಸಭ್ಯವಾಗಿ ಮತ್ತು ನಿಂದನಾತ್ಮಕವಾಗಿ ವರ್ತಿಸಿದ್ದಾರೆ! ಆದರೆ ಸ್ಪೀಕರ್ ಇದನ್ನು ಖಂಡಿಸುತ್ತಾರೆಯೇ? ನಿಯಮಗಳು ವಿರೋಧ ಪಕ್ಷಕ್ಕೆ ಮಾತ್ರ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಿಬಿಎಸ್‌ಇ ಪ್ರಶ್ನೆಪತ್ರಿಕೆಯಲ್ಲಿ ಸ್ತ್ರೀದ್ವೇಷ: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಕಿಡಿ

ಆದರೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘಟನೆಯ ಬಗ್ಗೆ ಸೋನಿಯಾ ಗಾಂಧಿ ಅವರನ್ನು ಕಟುವಾಗಿ ಟೀಕಿಸಿದ್ದಾರೆ, “ಸೋನಿಯಾ ಗಾಂಧಿ ನಮ್ಮ ಹಿರಿಯ ನಾಯಕಿ ರಮಾದೇವಿ ಬಳಿಗೆ ಬಂದಾಗ, ಅಲ್ಲಿ ಏನಾಗುತ್ತಿದೆ ಎಂದು ತಿಳಿಯಲು ನಮ್ಮ ಕೆಲವು ಸಂಸದರು ಹೋಗಿದ್ದರು. ಈ ವೇಳೆ ಸೋನಿಯಾ ಗಾಂಧಿ ಅವರು, ನೀವು ನನ್ನೊಂದಿಗೆ ಮಾತನಾಡಬೇಡಿ ಎಂದು ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ಸಚಿವೆ ಸ್ಮೃತಿ ಇರಾನಿ ಮತ್ತು ಕೆಲವು ಪುರುಷ ಬಿಜೆಪಿ ಸಂಸದರು ಸಹ ಸೋನಿಯಾ ಗಾಂಧಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕಾಂಗ್ರೆಸ್ ಸಂಸದರಾದ ಗೀತಾ ಕೋರಾ ಮತ್ತು ಜ್ಯೋತ್ಸ್ನಾ ಮಹಂತ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು...

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...