Homeಕರ್ನಾಟಕಪಠ್ಯದಲ್ಲಿ ನನ್ನ ಕವಿತೆಯನ್ನೂ ಕೈಬಿಡಿ: ಶಿಕ್ಷಣ ಸಚಿವರಿಗೆ ಎಸ್‌.ಜಿ.ಸಿದ್ದರಾಮಯ್ಯ ಪತ್ರ

ಪಠ್ಯದಲ್ಲಿ ನನ್ನ ಕವಿತೆಯನ್ನೂ ಕೈಬಿಡಿ: ಶಿಕ್ಷಣ ಸಚಿವರಿಗೆ ಎಸ್‌.ಜಿ.ಸಿದ್ದರಾಮಯ್ಯ ಪತ್ರ

- Advertisement -
- Advertisement -

ಪಠ್ಯ ಪುಸ್ತಕ ಪುನರ್ ಪರಿಷ್ಕರಣೆಗೆ ಅಸಮಾಧಾನ ವ್ಯಕ್ತಪಡಿಸಿರುವ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್‌.ಜಿ.ಸಿದ್ದರಾಮಯ್ಯನವರು ಪಠ್ಯದಲ್ಲಿ ತಮ್ಮ ಕವಿತೆಯ ಪ್ರಕಟಣೆಗೆ ಕೊಟ್ಟಿದ್ದ ಅನುಮತಿಯನ್ನು ಹಿಂಪಡೆದಿದ್ದಾರೆ.

ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಅವರು, “ನಮ್ಮ ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಶಿಕ್ಷಣದ ಮೇಲಿನ ಕೋಮುವಾದೀಕರಣ ನೋಡಿದರೆ ಆತಂಕ ಮತ್ತು ಭಯ ಉಂಟಾಗುವಂತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಠ್ಯ ಪರಿಷ್ಕರಣೆಯ ಅಸಾಂವಿಧಾನಿಕ ನಡವಳಿಕೆಗಳು ಶೈಕ್ಷಣಿಕ ವಾತಾವರಣದಲ್ಲಿ ಅನಾರೋಗ್ಯಕರ ಬೆಳವಣಿಗೆಗಳಾಗಿವೆ. ಕನ್ನಡ ಪರಂಪರೆಗೆ ಮತ್ತು ಅದಕ್ಕಾಗಿ ದುಡಿದ ಮಹಾನೀಯರಿಗೆ ಅಗೌರವ ತೋರಲಾಗುತ್ತಿದೆ. ಇದು ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಎಸಗುತ್ತಿರುವ ದ್ರೋಹ ಕೃತ್ಯವಾಗಿದೆ ಎಂದು ತಮ್ಮ ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ಹಿನ್ನೆಲೆಯಲ್ಲಿ ನನ್ನ ಒಂದು ಕವಿತೆ “ಮನೆಗೆಲಸದ ಹೆಣ್ಣು ಮಗಳು” 9ನೇ ತರಗತಿಯ ದ್ವಿತೀಯ ಭಾಷಾ ಪಠ್ಯವಾಗಿ ಸೇರಿದೆ. ಅದನ್ನು ಪಠ್ಯವಾಗಿ ಬೋಧಿಸಲು ನನ್ನ ಅನುಮತಿಯನ್ನು ಹಿಂಪಡೆದಿದ್ದೇನೆ ಎಂದು ಎಸ್‌.ಜಿ.ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಈ ಹಿಂದೆ ಪಠ್ಯ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವ ಮತ್ತು ಜಿ.ರಾಮಕೃಷ್ಣರವರು ತಮ್ಮ ಪಠ್ಯ ಬೋಧಿಸಬೇಡಿ ಎಂದು ಪತ್ರ ಬರೆದಿದ್ದರು.

ಪಠ್ಯ ಪರಿಷ್ಕರಣೆ ವಿರೋಧಿಸಿ ಇಂದು ಬೆಳಿಗ್ಗೆ ತಾನೇ ಸಿದ್ದರಾಮಯ್ಯನವರು ‘ರಾಷ್ಟ್ರಕವಿ ಡಾ. ಜಿಎಸ್‌ ಶಿವರುದ್ರಪ್ಪ ಪ್ರತಿಷ್ಠಾನ’ದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

“ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಶಿಕ್ಷಣ, ಸಂಸ್ಕೃತಿ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳ ಮೇಲೆ ನಡೆಯುತ್ತಿರುವ ಅಸಂವಿಧಾನಿಕ ದಬ್ಬಾಳಿಕೆಗಳನ್ನು ಕಂಡು ಆತಂಕ ಭಯ ಉಂಟಾಗಿದೆ. ಕೋಮುದ್ವೇಷವನ್ನು ರಾಜಾರೋಷವಾಗಿ ಮಾತನಾಡುತ್ತಾ ಆಟಾಟೋಪ ಮರೆಯುತ್ತಾ ಪ್ರಜಾಪ್ರಭುತ್ವದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೆ ಸರ್ಕಾರ ಮೌನ ವಹಿಸಿರುವುದು ಇನ್ನೂ ಹೆಚ್ಚಿನ ಆತಂಕ ಭಯ ಉಂಟು ಮಾಡುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ‘ಶಿಕ್ಷಣ, ಸಂಸ್ಕೃತಿ ಮೇಲಿನ ಅಸಂವಿಧಾನಿಕ ದಬ್ಬಾಳಿಕೆಗೆ ಸರ್ಕಾರ ಮೌನ’: ‘ರಾಷ್ಟ್ರಕವಿ ಶಿವರುದ್ರಪ್ಪ ಪ್ರತಿಷ್ಠಾನ’ದ ಅಧ್ಯಕ್ಷರು ಮತ್ತು ಸದಸ್ಯರು ರಾಜೀನಾಮೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ ಕಾಂಗ್ರೆಸ್‌ನಲ್ಲಿ ನಿಲ್ಲದ ರಾಜೀನಾಮೆ ಪರ್ವ; ಎಎಪಿ ಮೈತ್ರಿ ವಿರೋಧಿಸಿ ಪಕ್ಷ ತೊರೆದ ಮತ್ತಿಬ್ಬರು...

0
ದೆಹಲಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅರವಿಂದ್ ಸಿಂಗ್ ಲವ್ಲಿ ನಂತರ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದ್ದು, ರಾಷ್ಟ್ರ ರಾಜಧಾನಿಯ ಎರಡು ಲೋಕಸಭಾ ಸ್ಥಾನಗಳಿಗೆ ನೇಮಿಸಿದ್ದ ಅದರ ಇಬ್ಬರು ನಾಯಕರು, ವೀಕ್ಷಕರಾದ ನೀರಜ್ ಬಸೋಯಾ ಮತ್ತು ನಸೀಬ್...