Homeಮುಖಪುಟನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು: ಅಧೀರ್ ಚೌಧರಿ

ನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು: ಅಧೀರ್ ಚೌಧರಿ

- Advertisement -
- Advertisement -

ನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ಅಧೀರ್ ಚೌಧರಿ ಸಂಸತ್ತಿನ ಮೊದಲ ದಿನದ ಅಧಿವೇಶನದಲ್ಲಿ ಹೇಳಿದ್ದು, ವಿಶೇಷ ಅಧಿವೇಶನದ ಬಗ್ಗೆ ಮಾಧ್ಯಮಗಳಿಂದ ತಿಳಿದುಕೊಂಡಿದ್ದೇವೆ ಮತ್ತು ಅಧಿವೇಶನ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದು ಯಾರಿಗೂ ತಿಳಿದಿಲ್ಲ ಎಂದು ಹೇಳಿದ್ದಾರೆ.

ಈ ಅಧಿವೇಶನವನ್ನು ವಿಶೇಷ ಅಧಿವೇಶನ ಎಂದು ಕರೆಯಲಾಗುತ್ತಿದೆ ಆದರೆ ಎಂಟು ಮಸೂದೆಗಳನ್ನು ಚರ್ಚಿಸಲು ಪಟ್ಟಿಮಾಡಲಾಗಿದೆ. ಇದು ವಿಶೇಷ ಅಧಿವೇಶನವೋ ಅಥವಾ ಸಾಮಾನ್ಯವೋ ನಮಗೆ ಅರ್ಥವಾಗುತ್ತಿಲ್ಲ ಎಂದು ಅಧೀರ್ ರಂಜನ್ ಚೌಧರಿ ಅವರು ಹೇಳಿದ್ದಾರೆ.

ಅಧಿವೇಶನದಲ್ಲಿ ಶೂನ್ಯ ವೇಳೆಯಿಲ್ಲ, ಪ್ರಶ್ನೋತ್ತರ ವೇಳೆಯಿಲ್ಲ. ಇದು ಯಾವ ರೀತಿಯ ಅಧಿವೇಶನ ಎಂದು ನಮಗೆ ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದರು.

ಸದನದಲ್ಲಿ ನೆಹರು ಬಗ್ಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಸದನದಲ್ಲಿ ತಮ್ಮ ಭಾಷಣದ ವೇಳೆ ಸಮಯದ ಮಿತಿಯನ್ನು ಮೀರಿದಾಗ ಸ್ಪೀಕರ್ ಹೇಗೆ ಗಂಟೆ ಬಾರಿಸುತ್ತಿದ್ದರು ಎಂಬುದನ್ನು ಚೌಧರಿ ನೆನಪಿಸಿಕೊಂಡರು. ಭಾರತ-ಪಾಕಿಸ್ತಾನ ವಿಭಜನೆ, ಬಡತನ ಮತ್ತು ಇತರ ಸವಾಲುಗಳಿಂದ ದೇಶವು ತತ್ತರಿಸುತ್ತಿರುವ ಸಮಯದಲ್ಲಿ ಭಾರತಕ್ಕೆ ನೆಹರೂ ಅವರ ಕೊಡುಗೆಯನ್ನು ಅವರು  ನೆನಪಿಸಿಕೊಂಡಿದ್ದಾರೆ.

ಸಂಸದೀಯ ಪ್ರಜಾಪ್ರಭುತ್ವವು ಹಲವು ಸದ್ಗುಣಗಳನ್ನು ಬಯಸುತ್ತದೆ ಎಂದು ಪಂಡಿತ್ ನೆಹರು ಹೇಳಿದ್ದರು.  ಪಂಡಿತ್ ನೆಹರು ಸಂಸತ್ತಿನಲ್ಲಿ ಭಾರಿ ಬಹುಮತವನ್ನು ಪಡೆದಿದ್ದರೂ, ವಿರೋಧ ಪಕ್ಷದ ಧ್ವನಿಯನ್ನು ಆಲಿಸುವಲ್ಲಿ ಅವರು ದಣಿವರಿಯಲಿಲ್ಲ. ಪ್ರಶ್ನೆಗಳಿಗೆ ಉತ್ತರಿಸುವಾಗ ಎಂದಿಗೂ ಅಪಹಾಸ್ಯ ಅಥವಾ ದಿಕ್ಕು ತಪ್ಪಿಸುವ ಕೆಲಸ ಮಾಡಿಲ್ಲ. ಸಂಸತ್ತಿನಲ್ಲಿ ಭಾಷಣ ಮಾಡುವಾಗ ಜವಾಹರಲಾಲ್ ನೆಹರು ಅವರು ತಮ್ಮ ಸಮಯದ ಮಿತಿಯನ್ನು ಮೀರಿದಾಗ ಸ್ಪೀಕರ್ ಬೆಲ್ ಕೂಡ ಬಾರಿಸುತ್ತಿದ್ದರು ಎಂದು ಚೌದರಿ ಅವರು ತಮ್ಮ ಮಾತಿನಲ್ಲಿ ನೆನಪಿಸಿಕೊಂಡಿದ್ದಾರೆ.

ಆಧುನಿಕ ಭಾರತದ ವಾಸ್ತುಶಿಲ್ಪಿ ನೆಹರು ಅವರು ಸಂಸದೀಯ ಪ್ರಜಾಪ್ರಭುತ್ವವು ಅನೇಕ ಸದ್ಗುಣಗಳನ್ನು ಬಯಸುತ್ತದೆ, ಅದರಲ್ಲಿ ಸಾಮರ್ಥ್ಯ, ಕೆಲಸ ಮಾಡುವ ನಿರ್ದಿಷ್ಟ ಶ್ರದ್ಧೆ  ಮತ್ತು ಸ್ವಯಂ-ಶಿಸ್ತು ಮತ್ತು ಸಂಯಮವನ್ನು ಹೇಳಿದ್ದರು ಎಂದು ಚೌದರಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಪ್ರಧಾನ ಮಂತ್ರಿಗಳ ಆಡಳಿತದಲ್ಲಿ ಭಾರತದ ಪರಮಾಣು ಶಕ್ತಿ ಆಯೋಗ ಮತ್ತು ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ಸ್ಥಾಪನೆಯ ಬಗ್ಗೆ ಚೌದರಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಈ ಸದನ ನೆಹರೂ ಅವರ ಕೊಡುಗೆಯನ್ನು ಚರ್ಚಿಸಲಾಗಿದೆ ಮತ್ತು ಶ್ಲಾಘಿಸಲಾಗಿದೆ ಎಂಬುವುದರಿಂದ ನನಗೆ ಸಂತೋಷವಾಗಿದೆ. ಮಾಜಿ ಪ್ರಧಾನಿ ನೆಹರು ಅವರು ಕಠಿಣ ಸಮಯದಲ್ಲಿ ಭಾರತವನ್ನು ಮುನ್ನಡೆಸಿದರು ಮತ್ತು ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು ಎಂದು ಅವರು ಹೇಳಿದ್ದಾರೆ.

ನಾವು ಸಂಸತ್ತಿನ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿದ್ದಂತೆ, ಹಳೆಯ ಕಟ್ಟಡದ ಮೌಲ್ಯಗಳು ಮತ್ತು ಪಾಠಗಳನ್ನು ಮರೆಯಬಾರದು ಎಂದು ಚೌಧರಿ ಹೇಳಿದರು. ನಮ್ಮ ಹಳೆಯ ಕಟ್ಟಡಕ್ಕೆ ವಿದಾಯ ಹೇಳಲು ನಾವೆಲ್ಲರೂ ಇಲ್ಲಿ ಸೇರಿದ್ದೇವೆ. ಇಂದು ಈ ಸಂಸತ್ ಕಟ್ಟಡದಿಂದ ಹೊರಬರುವುದು ಎಂಬುವುದು ನಮಗೆಲ್ಲರಿಗೂ ಇದು ನಿಜವಾಗಿಯೂ ಭಾವನಾತ್ಮಕ ಕ್ಷಣವಾಗಿದೆ ಎಂದು ಅವರು ಹೇಳಿದರು.

ಇದನ್ನು ಓದಿ: ಚುನಾವಣಾ ಅಧಿಕಾರಿಗಳ ನೇಮಕ ಸಂಬಂಧಿತ ಮಸೂದೆ ಕೈಬಿಟ್ಟ ಕೇಂದ್ರ: ಪ್ರತಿಪಕ್ಷಗಳ ಪ್ರತಿಭಟನೆಗೆ ಹೆದರಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...