Homeಸಿನಿಮಾಕ್ರೀಡೆನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ- ನೀರಜ್ ಚೋಪ್ರಾ

ನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ- ನೀರಜ್ ಚೋಪ್ರಾ

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ನ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ಭಾರತೀಯರ ಚಿನ್ನದ ಕನಸು ನನಸು ಮಾಡಿದ್ದ ನೀರಜ್ ಚೋಪ್ರಾ ಅವರ ಹೇಳಿಕೆಯನ್ನು ಬಳಸಿ ಹಲವು ಮಂದಿ ವಿವಾದ ಸೃಷ್ಠಿಸಿದ್ದರು. ಇದಕ್ಕೆ ನೀರಜ್ ಚೋಪ್ರಾ, ನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಒಲಿಂಪಿಕ್ಸ್‌ನ ಜಾವೆಲಿನ್‌ ಥ್ರೋ ಫೈನಲ್‌ ವೇಳೆ ನೀರಜ್ ಅವರು ಎಸೆಯಬೇಕಿದ್ದ ಜಾವೆಲಿನ್‌ ಪಾಕಿಸ್ತಾನದ ಅಥ್ಲೀಟ್‌ ಆರ್ಶದ್ ನದೀಮ್ ಬಳಿಯಿತ್ತು, ಅದನ್ನು ಕೇಳಿದಾಗ ಅವರು ವಾಪಸ್ ನೀಡಿದ್ದರು ಎಂದು ಖಾಸಗಿ ಮಾಧ್ಯಮದ ಸಂದರ್ಶನವೊಂದರಲ್ಲಿ ತಿಳಿಸಿದ್ದರು.

ನೀರಜ್‌ ಚೋಪ್ರಾರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಆರ್ಶದ್ ಅವರ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿ ಹೀಯಾಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನೀರಜ್, ಕ್ರೀಡೆಯಲ್ಲಿ ಇದೊಂದು ಅತ್ಯಂತ ಸಹಜ ಪ್ರಕ್ರಿಯೆ. ನಾವೆಲ್ಲರೂ ಪ್ರೀತಿಯಿಂದ ಇರುತ್ತೇವೆ. ನಿಮ್ಮ ಕೊಳಕು ಅಜೆಂಡಾಗಳಿಗೆ ನಮ್ಮ ಹೆಸರು ಮತ್ತು ಹೇಳಿಕೆಯನ್ನು ಬಳಸದಿರಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಟ್ವಿಟರ್‌ನಲ್ಲಿ ವಿಡಿಯೋ ಶೇರ್‌ ಮಾಡಿರುವ ನೀರಜ್ ಚೋಪ್ರಾ ಅವರ ಹೇಳಿಕೆ ಹೀಗಿದೆ.

“ಎಲ್ಲರಿಗೂ ನಮಸ್ಕಾರ ಮೊದಲಿಗೆ ನನ್ನನ್ನು ಬೆಂಬಲಿಸಿದ, ಪ್ರೀತಿ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ನೀವೆಲ್ಲರೂ ಪ್ರೋತ್ಸಾಹಿಸಿದ ರೀತಿಗೆ ಖುಷಿಯಾಗುತ್ತಿದೆ. ಅದೇ ರೀತಿ ಈಗ ಒಂದು ವಿವಾದ ಅದೇ ರೀತಿ ನಾನು ಟೋಕಿಯೋ ಒಲಿಂಪಿಕ್ಸ್‌ ಜಾವಲಿನ್ ಥ್ರೋ ಫೈನಲ್‌ನಲ್ಲಿ ಪಾಕಿಸ್ತಾನದ ಆರ್ಶದ್ ನದೀಮ್ ಅವರ ಬಳಿಯಿದ್ದ ಜಾವೆಲಿನ್‌ ಪಡೆದು ಎಸೆದೆ. ಇದನ್ನು ದೊಡ್ಡ ವಿವಾದ ಮಾಡುತ್ತಿದ್ದಾರೆ. ಇದೊಂದು ಅತ್ಯಂತ ಸರಳ ಹಾಗೂ ಸಹಜ ಪ್ರಕ್ರಿಯೆ. ಜಾವಲಿನ್‌ ಪಟು ತಮ್ಮದೇ ಆದ ಜಾವಲಿನ್‌ ಹೊಂದಿರುತ್ತಾರೆ. ಅದನ್ನು ಬೇರೆಯವರು ಸಹ ಬಳಸುತ್ತಾರೆ. ಅದೇ ರೀತಿ ನನ್ನ ಜಾವೆಲಿನ್ ಹಿಡಿದುಕೊಂಡು ಆರ್ಶದ್ ನದೀಂ ಅಭ್ಯಾಸ ನಡೆಸುತ್ತಿದ್ದರು. ಅದರಲ್ಲಿ ಯಾವುದೇ ತಪ್ಪು ಇಲ್ಲ. ಈಗ ನನ್ನ ಸ್ಪರ್ಧೆಯಿದೆ ಎಂದು ಅವರ ಬಳಿಯಿದ್ದ ನನ್ನ ಜಾವೆಲಿನ್ ಪಡೆದುಕೊಂಡು ನನ್ನ ಸ್ಪರ್ಧೆ ಪೂರ್ತಿಗೊಳಿಸಿದೆ. ಇದು ಅಂತಹ ದೊಡ್ಡ ವಿಷಯ ಕೂಡ ಅಲ್ಲ. ನನಗೆ ದುಖಃವಿದೆ. ನನ್ನ ಮನವಿ ಏನೆಂದರೆ, ಈ ರೀತಿ ಮಾಡಬೇಡಿ. ಕ್ರೀಡೆ ಎಲ್ಲರನ್ನೂ ಒಟ್ಟಾಗಿ ಸಾಗುವುದನ್ನು ಕಲಿಸುತ್ತದೆ. ನಾವೆಲ್ಲ ಜಾವೆಲಿನ್ ಥ್ರೋ ಪಟುಗಳು ಪ್ರೀತಿಯಿಂದ ಇರುತ್ತೇವೆ. ನಿಮ್ಮ ಮಾತುಗಳು ನಮಗೆ ಹಿಂಸೆಯಾಗದಿರಲಿ” ಎಂದಿದ್ದಾರೆ.

ಜೊತೆಗೆ ನಿಮ್ಮ ಪ್ರಚಾರಕ್ಕಾಗಿ ನಮ್ಮ ಭಾವನೆಗಳಿಗೆ ಧಕ್ಕೆಯಾಗುವಂತೆ ಈ ವಿಚಾರವನ್ನು ಬಿಂಬಿಸಬೇಡಿ. ನಿಮ್ಮ ಅಜೆಂಡಾಗಳಿಗೆ ನನ್ನ ಹೆಸರು, ಹೇಳಿಕೆಯನ್ನು ಬಳಸದಿರಿ ಎಂದು  ನೀರಜ್ ಟ್ವೀಟ್ ಮೂಲಕ ವಿಡಿಯೋ ಸಂದೇಶ ನೀಡಿದ್ದಾರೆ.


ಇದನ್ನೂ ಓದಿ: ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...