Homeಮುಖಪುಟಕರೋನಾ ವೈರಸ್ ಬಗ್ಗೆ ಆತಂಕ ಬೇಡ : ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಮನವಿ

ಕರೋನಾ ವೈರಸ್ ಬಗ್ಗೆ ಆತಂಕ ಬೇಡ : ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಮನವಿ

- Advertisement -
- Advertisement -

ಕಳೆದ 48 ಗಂಟೆಗಳ ಅವಧಿಯಲ್ಲಿ ಎರಡು ಹೊಸ ಪ್ರಕರಣಗಳಲ್ಲಿ ಕರೋನಾ ವೈರೆಸ್‌ ಪತ್ತೆಯಾದ “ಭಯಪಡುವ ಅಗತ್ಯವಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು “ಭಯಪಡುವ ಅಗತ್ಯವಿಲ್ಲ. ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ, ಸ್ವರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸಣ್ಣ ಮತ್ತು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಮುಂಜಾಗ್ರತ ಕ್ರಮಗಳ ಬಗ್ಗೆ ತಿಳಿಸಿದ್ದಾರೆ.

COVID-19 ಕೊರೊನಾ ವೈರಸ್‌ನ ಸನ್ನದ್ಧತೆಯ ಬಗ್ಗೆ ವ್ಯಾಪಕ ವಿಮರ್ಶೆ ನಡೆಸಿದೆ. ಭಾರತಕ್ಕೆ ಆಗಮಿಸುವ ಜನರನ್ನು ಪರೀಕ್ಷಿಸುವುದರಿಂದ ಹಿಡಿದು ತ್ವರಿತ ವೈದ್ಯಕೀಯ ಚಿಕಿತ್ಸೆ ನೀಡುವವರೆಗೆ ವಿವಿಧ ಸಚಿವಾಲಯಗಳು ಮತ್ತು ರಾಜ್ಯಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಇನ್ನೊಂದೆಡೆ ಕರೋನಾ ವೈರಸ್ ಕುರಿತು ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದೆಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮನವಿ ಮಾಡಿದ್ದಾರೆ.

ಅಗತ್ಯ ವೈದ್ಯಕೀಯ ನೆರವಿಗೆ ಸರ್ಕಾರ ಎಲ್ಲ ರೀತಿಯಲ್ಲೂ ಸಜ್ಜುಗೊಂಡಿದೆ. ನಾಗರಿಕರೂ ಸಹ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ವೈರಸ್ ಹರಡದಂತೆ ಎಚ್ಚರಿಕೆ ವಹಿಸಬೇಕೆಂದು ಮನವಿ ಮಾಡಿರುವ ಮುಖ್ಯಮಂತ್ರಿಗಳು, ವೈರಸ್ ಕುರಿತ ಊಹಾಪೋಹಗಳಿಂದ ಭಯಭೀತರಾಗಬಾರದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಭಾರತವು ದ್ವೀಪ ರಾಷ್ಟ್ರದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದವನ್ನು ಬಯಸುತ್ತಿದೆ: ಮಾಲ್ಡೀವ್ಸ್ ಸಚಿವ

0
ಮಾಲ್ಡೀವ್ಸ್‌ನೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ರಚಿಸಲು ಭಾರತವು ಪ್ರಯತ್ನಗಳನ್ನು ಪ್ರಾರಂಭಿಸಿದೆ ಎಂದು ಮಾಲ್ಡೀವ್ಸ್ ಸಚಿವ ಮೊಹಮ್ಮದ್ ಸಯೀದ್ ಹೇಳಿದ್ದಾರೆ. ಮಾಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರ್ಥಿಕ ಅಭಿವೃದ್ಧಿ ಮತ್ತು ವ್ಯಾಪಾರ ಸಚಿವ ಸಯೀದ್, "ಎಫ್‌ಟಿಎಗೆ...