Homeಕರ್ನಾಟಕದಾಖಲೆ ರಹಿತ ವಲಸಿಗರ ಪತ್ತೆಗೆ ಮನೆಮನೆ ಸರ್ವೇ: ಮಣಿಪುರ ಸರ್ಕಾರ

ದಾಖಲೆ ರಹಿತ ವಲಸಿಗರ ಪತ್ತೆಗೆ ಮನೆಮನೆ ಸರ್ವೇ: ಮಣಿಪುರ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ಜನಸಂಖ್ಯಾ ಆಯೋಗವನ್ನು ರಚಿಸಿದ ನಂತರ ದಾಖಲೆರಹಿತ ವಲಸಿಗರನ್ನು ಗುರುತಿಸಲು ಮನೆ-ಮನೆ ಸಮೀಕ್ಷೆಯನ್ನು ನಡೆಸುವುದಾಗಿ ಮಣಿಪುರ ಸರ್ಕಾರ ಹೇಳಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ರಾಜ್ಯ ಸರ್ಕಾರವು ಮಣಿಪುರ ರಾಜ್ಯ ಜನಸಂಖ್ಯಾ ಆಯೋಗವನ್ನು ಸುಗ್ರೀವಾಜ್ಞೆಯ ಮೂಲಕ ಸ್ಥಾಪಿಸಲು ಚಿಂತಿಸಿದೆ.

“ಸಮೀಕ್ಷೆಯ ಸಮಯದಲ್ಲಿ ದಾಖಲೆರಹಿತ ವಲಸಿಗರು ಕಂಡು ಬಂದಲ್ಲಿ ಅವರಿಗೆ ಆಶ್ರಯ ನೀಡುತ್ತಿರುವವರ ವಿರುದ್ಧ ವಿದೇಶಿಯರ ಕಾಯಿದೆ ಮತ್ತು ಇನ್ನರ್ ಲೈನ್ ಪರ್ಮಿಟ್ ಸಿಸ್ಟಮ್‌ನ ನಿಬಂಧನೆಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಹೇಳಿದ್ದಾರೆ.

ಇನ್ನರ್ ಲೈನ್ ಪರ್ಮಿಟ್ ಎನ್ನುವುದು ರಾಜ್ಯದ ಹೊರಗಿನ ಜನರು ಮಣಿಪುರವನ್ನು ಪ್ರವೇಶಿಸುವಾಗ ತೋರಿಸಬೇಕಾದ ಪ್ರಯಾಣದ ದಾಖಲೆಯಾಗಿದೆ.

ಮಣಿಪುರದಲ್ಲಿ ದಾಖಲೆಗಳಿಲ್ಲದ ವಲಸಿಗರ ಒಳಹರಿವು ಆತಂಕಕಾರಿ ಪ್ರಮಾಣವನ್ನು ತಲುಪಿದೆ ಎಂದು ಮುಖ್ಯಮಂತ್ರಿ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ 600ಕ್ಕೂ ಹೆಚ್ಚು ದಾಖಲೆರಹಿತ ವಲಸಿಗರು ಮತ್ತು ಇನ್ನರ್ ಲೈನ್ ಪರ್ಮಿಟ್ ಇಲ್ಲದ ಜನರನ್ನು ಪೊಲೀಸರು ಕೆಲವು ಕಾರ್ಯಾಚರಣೆ ವೇಳೆ ಬಂಧಿಸಿದ್ದಾರೆ ಎಂದು ‘ದಿ ಇಂಫಾಲ್ ಪ್ರೆಸ್’ ವರದಿ ಮಾಡಿದೆ.

ಇದನ್ನೂ ಓದಿರಿ: ಶ್ರೀಲಂಕಾದಲ್ಲಿ ಹೆಚ್ಚುತ್ತಿದೆ ಚೀನಾ ಸೇನೆಯ ಪ್ರಾಬಲ್ಯ; ತಮಿಳುನಾಡಿಗೆ ಗುಪ್ತಚರ ಸಂಸ್ಥೆ ಎಚ್ಚರಿಕೆ ಕರೆಘಂಟೆ

1990ರಿಂದ ಸ್ಥಳೀಯರಂತೆ ಬಿಂಬಿಸಿಕೊಂಡಿದ್ದ ಮೊಹಮ್ಮದ್ ಅನ್ವರ್ ಹುಸೇನ್ ಮತ್ತು ಅವರ ಮಗ ಮೊಹಮ್ಮದ್ ಅಮ್ಜಾದ್ ಅಲಿ ಎಂಬ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಸಹ ಪೊಲೀಸರು ಹಿಡಿದಿದ್ದಾರೆ ಎಂದು ಬಿರೇನ್‌ ಸಿಂಗ್‌ ಹೇಳಿದ್ದಾರೆ. ಅವರು ಡ್ರೈವಿಂಗ್ ಲೈಸೆನ್ಸ್ ಮತ್ತು ಆಧಾರ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ ಎಂದೂ ಮಾಹಿತಿ ನೀಡಿದ್ದಾರೆ.

“ಅಕ್ರಮ ನುಸುಳಿದವರ ವಿರುದ್ಧದ ಹೋರಾಟದಲ್ಲಿ ಸರ್ಕಾರ ಏಕಾಂಗಿಯಾಗಿ ಯಶಸ್ವಿಯಾಗಲು ಸಾಧ್ಯವಿಲ್ಲ” ಎಂದಿರುವ ಮುಖ್ಯಮಂತ್ರಿ, “ಸ್ಥಳೀಯ ಜನಸಂಖ್ಯೆಯನ್ನು ರಕ್ಷಿಸಲು ನಮಗೆ ಜನರ ಬೆಂಬಲ ಬೇಕು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....