Homeಕರ್ನಾಟಕದೋರನಹಳ್ಳಿ ಸಿಲಿಂಡರ್ ಸ್ಪೋಟ ಪ್ರಕರಣ: ಸಂತ್ರಸ್ತರಿಗೆ ತಲಾ 5 ಲಕ್ಷ ರೂ.ಪರಿಹಾರ ವಿತರಿಸಿದ ಸಿಎಂ

ದೋರನಹಳ್ಳಿ ಸಿಲಿಂಡರ್ ಸ್ಪೋಟ ಪ್ರಕರಣ: ಸಂತ್ರಸ್ತರಿಗೆ ತಲಾ 5 ಲಕ್ಷ ರೂ.ಪರಿಹಾರ ವಿತರಿಸಿದ ಸಿಎಂ

- Advertisement -
- Advertisement -

ಯಾದಗಿರಿ ಜಿಲ್ಲೆಯ ದೋರನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಸ್ಪೋಟವಾಗಿ 15 ಜನರು ತೀರಿಹೋಗಿದ್ದು ದೊಡ್ಡ ದುರ್ಘಟನೆ. ಈ ಘಟನೆಯಲ್ಲಿ 10 ಜನ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ದೋರನಹಳ್ಳಿಯಲ್ಲಿ ನಡೆದ ಸಿಲಿಂಡರ್ ಸ್ಪೋಟದಲ್ಲಿ ಮೃತಪಟ್ಟ 15 ಜನರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳಂತೆ ಒಟ್ಟು 75 ಲಕ್ಷ ರೂ.ಗಳ ಪರಿಹಾರವನ್ನು ವಿತರಿಸಿ ಅವರು ಮಾತನಾಡಿದರು.

ಬಡವರು ಶುಭಕಾರ್ಯ ಮಾಡಿ ಸಂಭ್ರಮಿಸುವ ಸಂದರ್ಭದಲ್ಲಿ 15 ಜನ ತೀರಿಹೋಗಿರುವುದು ದೊಡ್ಡ ಅನಾಹುತ. ಅವರ ಕಟುಂಬದವರಿಗೆ ಕೇವಲ ಹಣ ಮಾತ್ರವಲ್ಲದೆ, ಎಲ್ಲಾ ರೀತಿಯ ಸಹಾಯವನ್ನು ಸರ್ಕಾರದ ವತಿಯಿಂದ ಮಾಡಲಾಗುವುದು ಎಂದರು.

ಇದು ತಿಳಿದ ತಕ್ಷಣವೇ ಜಿಲ್ಲಾಡಳಿತ, ಶಾಸಕರು ಎಲ್ಲಾ ಅಗತ್ಯ ನೆರವನ್ನು ನೀಡಿದ್ದಾರೆ. ಸೋಲ್ಹಾಪುರಕ್ಕೆ ಹೋದ ಗಾಯಾಳು ಒಬ್ಬರಿಗೆ ಸುಮಾರು 4 ಲಕ್ಷ ರೂ.ಗಳ ಚಿಕಿತ್ಸಾ ವೆಚ್ಚವನ್ನು ಭರಿಸಬೇಕಿದ್ದು, ಬೆಂಗಳೂರಿಗೆ ಹಿಂತಿರುಗಿದ ತಕ್ಷಣ ಚೆಕ್‌ಗೆ ಸಹಿ ಮಾಡಿ ಮೊತ್ತವನ್ನು ಕಳುಹಿಸಲಾಗುವುದು ಎಂದು ಹೇಳಿದರು.

ವಿದ್ಯಾರ್ಹತೆಗೆ ತಕ್ಕ ಉದ್ಯೋಗಕ್ಕೆ ಕ್ರಮ: ಕೆಲವು ಕುಟುಂಬದವರಿಗೆ ಉದ್ಯೋಗವನ್ನು ನೀಡಬೇಕೆಂಬ ಬೇಡಿಕೆ ಇದ್ದು, ಅವರವರ ವಿದ್ಯಾಭ್ಯಾಸಕ್ಕೆ ತಕ್ಕಂತೆ ನೌಕರಿ ನೀಡಲು ಎಲ್ಲಾ ರೀತಿಯ ಪ್ರಯತ್ನವನ್ನು ಮಾಡಲಾಗುವುದು. ಕೆಲವರಿಗೆ ಸ್ಥಳೀಯವಾಗಿ ನೌಕರಿ ಹಾಗೂ ಇಂಜಿನಿಯರಿಂಗ್ ಮಾಡಿದವರಿಗೆ ಊರ ಹೊರಗಡೆಯೂ ಕೆಲಸ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.

ಐಒಸಿ ಸಹಾಯ ಒದಗಿಸಬೇಕು: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಕಂಪನಿ ಸಂತ್ರಸ್ಥರಿಗೆ ಸಹಾಯವನ್ನು ಮಾಡಬೇಕು. ತಾಂತ್ರಿಕ ಕಾರಣಗಳನ್ನು ಹೇಳುತ್ತಿದ್ದಾರೆ. ಅದ್ಯಾವುದನ್ನು ಹೇಳದೆ ಸಂತ್ರಸ್ತರಿಗೆ ಮಾನವೀಯತೆಯ ದೃಷ್ಟಿಯಿಂದ ದೊಡ್ಡ ಸಹಾಯವನ್ನು ಮಾಡಲೇಬೇಕು ಎಂದು ಬೆಂಗಳೂರಿನಲ್ಲಿರುವ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಹೆಚ್ಚಿನ ಪರಿಹಾರ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬದವರಿಗೆ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ: ತುಮಕೂರಿನ ಪಾವಗಡದಲ್ಲಿ ನಡೆದ ಖಾಸಗಿ ಬಸ್ ಅಪಘಾತದಲ್ಲಿ 8 ಜನ ತೀರಿಹೋಗಿದ್ದು, 20 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಈಗಾಗಲೇ ಸಾರಿಗೆ ಸಚಿವ ಶ್ರೀರಾಮುಲು ಅವರನ್ನು ಕಳುಹಿಸಲಾಗಿದೆ. ದುರಂತ ಯಾಕೆ ಆಗಿದೆ ಎಂದು ತನಿಖೆ ನಡೆಯುತ್ತಿದೆ. ಖಾಸಗಿ ವಾಹನಗಳ ಫಿಟ್‍ನೆಸ್ ಪ್ರಮಾಣಪತ್ರ ಇವುಗಳ ಬಗ್ಗೆ ಪರಿಶೀಲಿಸಲು ತಿಳಿಸಲಾಗಿದೆ. ದುರಂತಗಳು ಸಂಭವಿಸದಂತೆ ಇನ್ನಷ್ಟು ಕ್ರಮವಹಿಸಲಾಗುವುದು ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿರಿ: ಪಾವಗಡ: ಬಸ್‌ ಮಗುಚಿ ಎಂಟು ಮಂದಿ ದುರ್ಮರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...