Homeಮುಖಪುಟದೊರೆಸ್ವಾಮಿ ಕಾಂಗ್ರೆಸ್ ಬೆಂಬಲಿಗರು: ಯತ್ನಾಳ್‌ ಪರ ವಹಿಸಿದ ಈಶ್ವರಪ್ಪ

ದೊರೆಸ್ವಾಮಿ ಕಾಂಗ್ರೆಸ್ ಬೆಂಬಲಿಗರು: ಯತ್ನಾಳ್‌ ಪರ ವಹಿಸಿದ ಈಶ್ವರಪ್ಪ

- Advertisement -
- Advertisement -

ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ “ದೊರೆಸ್ವಾಮಿ ಹಿಂದಿನಿಂದಲೂ ಕಾಂಗ್ರೆಸ್‌ಗೆ ಬೆಂಬಲ ನೀಡಿಕೊಂಡೆ ಬಂದಿದ್ದಾರೆ” ಎಂದು ಆರೋಪಿಸಿದ್ದಾರೆ. ಯತ್ನಾಳ್‌ ಮಾಡಿದ ಅವಹೇಳನದ ಆರೋಪಕ್ಕೆ ಈಶ್ವರಪ್ಪ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ

“ದೊರೆಸ್ವಾಮಿ ಅವರು ಸ್ವಾತಂತ್ರ್ಯ ಹೋರಾಟಗಾರರು. ಅವರು ಒಂದು ಪಕ್ಷದ ಪರವಾಗಿ ಮಾತನಾಡಿದರೆ ಅವರ ಬಗ್ಗೆ ಗೌರವ ಹೇಗೆ ಉಳಿಯುತ್ತದೆ? ಸ್ವಾತಂತ್ರ ಹೋರಾಟಗಾರರು ಪಕ್ಷಾತೀತವಾಗಿರಬೇಕು” ಎಂದು ಈಶ್ವರಪ್ಪ ಹೇಳಿದ್ದಾರೆ.

“ಕಾಂಗ್ರೆಸ್ ನಾಯಕರು ನೀಡಿದ ಹೇಳಿಕೆಗೆ ಹಿಂದಿನಿಂದನೂ ದೊರೆಸ್ವಾಮಿ ಅವರು ಬೆಂಬಲ‌ ನೀಡಿಕೊಂಡೇ ಬಂದಿದ್ದಾರೆ” ಎಂದರಲ್ಲದೆ “ದೊರೆಸ್ವಾಮಿ ಅವರು ‘ಪಾಕಿಸ್ತಾನ್ ಜಿಂದಾಬಾದ್’ ಎಂದವರ ವಿರುದ್ಧ ಧರಣಿ ಕೂತಿದ್ದರೆ ನಾವೂ ಅವರಿಗೆ ಬೆಂಬಲ ನೀಡುತ್ತಿದ್ದೆವು‌” ಎಂದಿದ್ದಾರೆ.

“ನಾವು ಅಮೂಲ್ಯ ರಾಷ್ಟ್ರದ್ರೋಹಿ ಹೇಳಿಕೆ ನೀಡಿದ್ದಕ್ಕೆ ಪ್ರತಿಭಟನೆ ನಡೆಸುತ್ತಿದ್ದೇವೆ. ದೊರೆಸ್ವಾಮಿ ಅವರು ಹಿರಿತನಕ್ಕೆ ತಕ್ಕಂತೆ ಮಾರ್ಗದರ್ಶನ ಮಾಡಿದರೆ ನಾವು ಅವರೊಂದಿಗೆ ಇರುತ್ತೇವೆ” ಎಂದು ಈಶ್ವರಪ್ಪ ಹೇಳಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟಿಲ ಯತ್ನಾಲ್ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿಯವರನ್ನು “ಪಾಕಿಸ್ತಾನದ ಏಜೆಂಟ್, ನಕಲಿ ಸ್ವಾತಂತ್ರ್ಯ ಹೋರಾಟಗಾರ” ಎಂದು ಅವಹೇಳನ ಹೇಳಿದ್ದರು. ಇದರ ವಿರುದ್ಧ ರಾಜ್ಯದ್ಯಂತ ಆಕ್ರೋಶ ವ್ಯಕ್ತವಾಗಿದ್ದು ಕಾಂಗ್ರೆಸ್ ನಿನ್ನೆ ಪ್ರತಿಭಟನೆ ಮಾಡಿ ಕ್ಷಮೆ ಕೇಳುವಂತೆ ಒತ್ತಾಯಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...