Homeಮುಖಪುಟಇಬ್ಬಾಗವಾದ ಎನ್‌ಸಿಪಿ; ಶಿಂಧೆ ಸರ್ಕಾರಕ್ಕೆ ಬೆಂಬಲ ಘೋಷಿಸಿ, ಡಿಸಿಎಂ ಆದ ಅಜಿತ್ ಪವಾರ್!

ಇಬ್ಬಾಗವಾದ ಎನ್‌ಸಿಪಿ; ಶಿಂಧೆ ಸರ್ಕಾರಕ್ಕೆ ಬೆಂಬಲ ಘೋಷಿಸಿ, ಡಿಸಿಎಂ ಆದ ಅಜಿತ್ ಪವಾರ್!

- Advertisement -
- Advertisement -

ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಹಿರಿಯ ನಾಯಕ ಅಜಿತ್ ಪವಾರ್ ಅವರು ಸ್ವಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ. ಬಿಜೆಪಿ-ಶಿವಸೇನಾ ಸರ್ಕಾರದ ಜೊತೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಕೈ ಜೋಡಿಸಿದ್ದಾರೆ. ಈ ಮೂಲಕ ಮಹಾ ಮೈತ್ರಿ ಸರ್ಕಾರಕ್ಕೆ ಎನ್‌ಸಿಪಿ ಪಡೆ ಬೆಂಬಲ ನೀಡಿದೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಜುಲೈ 2ರಂದು ರಾಜಭವನದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನಿರಾಕರಿಸಿದ ಬೆನ್ನಲ್ಲೆ ಅಜಿತ್ ಪವಾರ್ ಅವರು ಭಾನುವಾರ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಕೆಲವು ನಾಯಕರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ್ದಾರೆ.

ಈ ಮಧ್ಯೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ನಿವಾಸದಲ್ಲಿ ಎನ್‌ಸಿಪಿ ನಾಯಕರ ಸಭೆಯನ್ನು ಏಕೆ ಕರೆಯಲಾಗಿದೆ ಎಂಬ ವಿವರಗಳನ್ನು ಕೇಳಿದಾಗ, ಶರದ್ ಪವಾರ್ ಅವರು ಪ್ರತಿಕ್ರಿಯಿಸಿ, ”ಈ ಸಭೆಯನ್ನು ಏಕೆ ಕರೆಯಲಾಗಿದೆ ಎಂದು ನನಗೆ ನಿಖರವಾಗಿ ತಿಳಿದಿಲ್ಲ ಆದರೆ ವಿರೋಧ ಪಕ್ಷದ ನಾಯಕನಾಗಿರುತ್ತೇನೆ. ಅವರು (ಅಜಿತ್ ಪವಾರ್) ಶಾಸಕರ ಸಭೆಯನ್ನು ಕರೆಯುವ ಹಕ್ಕನ್ನು ಹೊಂದಿದ್ದಾರೆ. ಅವರು ಅದನ್ನು ನಿಯಮಿತವಾಗಿ ಮಾಡುತ್ತಾರೆ. ಈ ಸಭೆಯ ಬಗ್ಗೆ ನನಗೆ ಹೆಚ್ಚಿನ ವಿವರಗಳಿಲ್ಲ” ಎಂದು ಹೇಳಿದ್ದಾರೆ.

ಸಭೆಯಲ್ಲಿ ಹಲವು ನಾಯಕರ ಜೊತೆ ಚರ್ಚಿಸಿರುವ ಅಜಿತ್ ಪವಾರ್ ಅವರು ಆಡಳಿತ ಪಕ್ಷ ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಭೆ ಬಳಿಕ ನಾಯಕರ ಜೊತೆಗೆ ಅವರು ರಾಜಭವನಕ್ಕೆ ತಲುಪಿದ್ದಾರೆ. ರಾಜ್ಯಪಾಲರಿಗೆ ಶರದ್ ಪವಾರ್ ಅವರು ತಮ್ಮೊಂದಿಗೆ 29 ಶಾಸಕರ ಬೆಂಬಲ ಇರುವ ಬಗ್ಗೆ ಖಚಿತತೆಯ ಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಶರದ್ ಪವಾರ್ ವಿರುದ್ಧ ಸಿಡಿದೆದ್ಧಿರುವ ಅಜಿತ್ ಪವಾರ್, ಇದೀಗ ಶಿಂಧೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಬೆಂಬಲದ ಬೆನ್ನಲ್ಲೇ ಸಿಎಂ ಏಕನಾಥ್ ಶಿಂಧೆ, ದೇವೇಂದ್ರ ಫಡ್ನವಿಸ್ ಹಾಗೂ ಅಜಿತ್ ಪವಾ‌ರ್ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

ಅಜಿತ್ ಪವಾರ್ ತಮ್ಮ ಬೆಂಬಲಿತ ಶಾಸಕರೊಂದಿಗೆ ರಾಜಭವನ ತೆರಳಿದ್ದರು. ಇದರೊಂದಿಗೆ ಪವಾರ್ ಮಹಾರಾಷ್ಟ್ರದ ಎನ್‌ಡಿಎ ಸರ್ಕಾರಕ್ಕೆ ಸೇರ್ಪಡೆಯಾದರು. ಎನ್‌ಸಿಪಿ ನಾಯಕ ಛಗನ್ ಭುಜಬಲ್ ಅವರು ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ಮಹಾರಾಷ್ಟ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದರೊಂದಿಗೆ ಪವಾರ್ ಮಹಾರಾಷ್ಟ್ರದ ಎನ್‌ಡಿಎ ಸರ್ಕಾರವನ್ನು ಸೇರಿಕೊಂಡು ಮೂರನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದಾರೆ. ಮೂಲಗಳ ಪ್ರಕಾರ, ಅವರು 53 ಎನ್‌ಸಿಪಿ ಶಾಸಕರ ಪೈಕಿ 43 ಶಾಸಕರ ಬೆಂಬಲವನ್ನು ಹೊಂದಿದ್ದಾರೆ ಮತ್ತು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಳ್ಳಲಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಇತರ ಎನ್‌ಸಿಪಿ ನಾಯಕರಲ್ಲಿ ಪ್ರಫುಲ್ ಪಟೇಲ್, ಧನಂಜಯ್ ಮುಂಡೆ, ಅನಿಲ್ ಪಾಟೀಲ್ ಮತ್ತು ಅದಿತಿ ತತ್ಕರೆ ಸೇರಿದ್ದಾರೆ.

ಎನ್‌ಡಿಎ ಸರ್ಕಾರಕ್ಕೆ ಪವಾರ್ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಸಚಿವ ಸುಧೀರ್ ಮುಂಗಂತಿವಾರ್, ”40ಕ್ಕೂ ಹೆಚ್ಚು ಶಾಸಕರು ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆ. ಬಹುತೇಕ ಸಂಪೂರ್ಣ ಎನ್‌ಸಿಪಿ ಸೇರಲಿದೆ” ಎಂದು ಹಯೇಳಿದ್ದಾರೆ.

”ಏಕತಾ ಸಭೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವ ಮತ್ತು ಮೈತ್ರಿ ಮಾಡಿಕೊಳ್ಳುವ ಶರದ್ ಪವಾರ್ ಅವರ ಏಕಪಕ್ಷೀಯ ನಿರ್ಧಾರದಿಂದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರೊಂದಿಗೆ ರಾಜಭವನಕ್ಕೆ ತೆರಳಿದ್ದ ಕೆಲವು ಶಾಸಕರು ಅಸಮಾಧಾನಗೊಂಡಿದ್ದಾರೆ” ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...