Homeಕರ್ನಾಟಕನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

ನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

ದಶಕಗಳ ಅಯೋಧ್ಯೆ ವಿವಾದ ಬಗೆಹರಿದ ನಂತರ ರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಕೆಲಸ ಬಿರುಸಾಗಿ ನಡೆಯುತ್ತಿದ್ದು, ಇದಕ್ಕೆ ದೇಶದಾದ್ಯಂತ ದೇಣಿಗೆ ಸಂಗ್ರಹಿಸುವ ಕೆಲಸವೂ ನಡೆಯುತ್ತಿದೆ. ಆದರೆ ಈ ದೇಣಿಗೆ ಸಂಗ್ರಹಕ್ಕೆ ಸಂಬಂಧಿಸಿದಂತೆ ಹಲವರು ಪ್ರಶ್ನೆಗಳನ್ನು ಕೇಳುತ್ತಿದ್ದು, ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹಿಸಿದ ಹಣ ಮತ್ತು ಇಟ್ಟಿಗೆಯ ಲೆಕ್ಕ ಏನಾಯ್ತು? ಎಂದು ಹಿಂದೂ ಸಂಘಟನೆಗಳು ಮತ್ತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮತ್ತೊಂದು ಗಂಭೀರ ಆರೋಪವನ್ನು ಮಾಡಿದ್ದು, “ರಾಮಮಂದಿರಕ್ಕೆ ದೇಣಿಗೆ ಕೊಡದವರ ಮನೆ ಗುರುತು ಹಾಕಿಕೊಳ್ಳಲಾಗುತ್ತಿದೆಯಂತೆ” ಎಂದು ಕಳವಳ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಅಯೋಧ್ಯೆಯಲ್ಲಿ ಕಟ್ಟುವ ರಾಮಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ, ನಮ್ಮೂರಿನಲ್ಲಿ ಅಥವಾ ಬೇರೆ ಎಲ್ಲಾದರೂ ಕಟ್ಟುವ ರಾಮಮಂದಿರಕ್ಕೆ ದೇಣಿಗೆ ಕೊಡುತ್ತೇನೆ. ಇವರು ಸಂಗ್ರಹಿಸುವ ಹಣಕ್ಕೆ ರಸೀದಿ ಕೊಡುತ್ತಾರೆಯೇ? ಲೆಕ್ಕ ಕೊಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ವ್ಯಾಪಕ ಚರ್ಚೆಗೆ ಒಳಗಾಗಿತ್ತು.

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು, ಸಿದ್ದರಾಮಯ್ಯನವರ ದೇಶನಿಷ್ಠೆಯ ಬಗ್ಗೆ ಸಂದೇಹವಾಗುತ್ತಿದೆ ಎಂದು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಸ್ವಾಮೀಜಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಪುದುಚೇರಿ: ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿಯನ್ನು ತೆಗೆದುಹಾಕಿದ ರಾಷ್ಟ್ರಪತಿ

ಚಿಂತಕರಾದ ನಾ ದಿವಾಕರ್ ತಮ್ಮ ಫೇಸ್‌ಬುಕ್‌ನಲ್ಲಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, “ಸ್ವಾಮೀಜಿಯವರ ಮನುಜ ನಿಷ್ಠೆಯ ಬಗ್ಗೆ ಸಂದೇಹ ವ್ಯಕ್ತವಾಗುತ್ತಿದೆ” ಎಂದಿದ್ದಾರೆ.

ವಿನೋದ್ ಎಂಬುವವರು, “ದೇಶನಿಷ್ಠೆಯ ಮಾನದಂಡವೇನು? ಸಿದ್ಧರಾಮಯ್ಯ ದೇಶನಿಷ್ಠೆಯ ಬಗ್ಗೆ ನಮಗೆ ಸಂದೇಹವಿದೆ ಎಂದಿದ್ದಾರೆ ಪೇಜಾವರ ಶ್ರೀ! ಹಾಗೆಂದರೇನು? ದೇಶನಿಷ್ಠೆಗೆ ಇರುವ ಮಾನದಂಡವೇನು? ನಮಗೆ ಶಾಲೆ-ಕಾಲೇಜು ಎಲ್ಲಿಯೂ ದೇಶನಿಷ್ಠೆ ಬಗ್ಗೆ ಕಲಿಸಲಿಲ್ಲ. ಸಂವಿಧಾನ, ರಾಷ್ಟ್ರಗೀತೆ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದನ್ನು ಕಲಿಸಿದರಷ್ಟೇ. ಈ ಮೂರರಲ್ಲಿ ಯಾವುದಾದರೂ ಒಂದಕ್ಕೆ ಮಾಜಿ ಸಿಎಂ ಅವರು ಅಗೌರವ ತೋರಿರುವರೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ನೆರೆಯ ರಾಷ್ಟ್ರಗಳಲ್ಲೂ ಬಿಜೆಪಿ ಸಂಘಟನೆ’ ಹೇಳಿಕೆ: ಖಂಡನೆ ವ್ಯಕ್ತಪಡಿಸಿದ ನೇಪಾಳ

ಉಡುಪಿಯ ಪೇಜಾವರ ಸ್ವಾಮಿಗೆ ಮನುವಾದದ ಪಿತ್ತ ನೆತ್ತಿಗೇರಿದೆ… ಶೂದ್ರಶಕ್ತಿಯಾಗಿ ಬೆಳೆದು ನಿಂತಿರುವ ಸಿದ್ದರಾಮಯ್ಯ ಮನುವಾದಿಗಳಿಗೆ ದೇಶದ್ರೋಹಿಯಂತೆ ಕಾಣದೆ ಮತ್ತೆ ಹೇಗೆ ಕಂಡಾರು? ಮನುವಿನ ಸಂವಿಧಾನ ಈಗ ದೇಶಭಕ್ತಿಯ ಕವಚ ತೊಟ್ಟು ಜಾರಿಯಾಗುತ್ತಿದೆ.. ಎಂದು ಯತಿರಾಜ್ ಬ್ಯಾಲಹಳ್ಳಿ ಕಿಡಿಕಾರಿದ್ದಾರೆ.

ವಿಶ್ವ ಪೂಜಾರ ಎಂಬುವವರು ಸ್ವಾಮೀಜಿಯ ಹೇಳಿಕೆಯನ್ನು ಉಲ್ಲೇಖಿಸಿ, “ಹಿರಿಯ ಸ್ವಾಮಿಗಳ ( ದಿ. ವಿಶ್ವೇಶ್ವರ ತೀರ್ಥ ಸ್ವಾಮೀಜಿ) ಹಾದಿಯಲ್ಲಿಯೇ ಸಾಗುತ್ತಿರುವ ಕಿರಿಯ ಸ್ವಾಮಿಗಳು. ನಮ್ಮ ಹೆಮ್ಮೆ” ಎಂದು ಪೇಜಾವರ ಶ್ರೀಗಳ ಕಾಲೆಳೆದಿದ್ದಾರೆ.

ಎಂ ಆರ್ ಕೃಷ್ಣ ಎಂಬುವವರು ತಮ್ಮ ಪೋಸ್ಟ್‌ನಲ್ಲಿ, “ಇವರಿಗೆಲ್ಲಾ ಮಠಾಧಿಪತಿ ಅಂತ ಎಲ್ಲರೂ ಮರ್ಯಾದೆ ಕೊಡುತ್ತಾರೆ, ಆದರೆ ನಾಲಿಗೆ ಹರಿಬಿಡುವ ಇಂತಹವರು ಟೆಂಪಲ್ ಇಂಡಸ್ಟ್ರಿ ನಡೆಸುತ್ತಿದ್ದು ಟನ್‌ಗಟ್ಟಲೆ ಹಣ ಸಂಗ್ರಹಿಸುತ್ತಾರೆ, ಜನರಿಂದ, ರಾಜಕಾರಣಿಗಳಿಂದ, ಉದ್ಯಮಿಗಳಿಂದ ಮತ್ತು ಸರ್ಕಾರದಿಂದ ಕೂಡಾ. ಮಠಗಳು ರಾಜಕೀಯ ಮಾಡುವುದರಿಂದ ಈಗಾಗಲೆ ಸಮಾಜದ ವ್ಯವಸ್ಥೆ ಕೆಟ್ಟಿದೆ, ಇವರಿಗಿಲ್ಲದ ದೇಶಭಕ್ತಿ ಬಗ್ಗೆ ಹೇಳಿದರೆ ಇಲ್ಲಿ ಕೇಳುವರಾರು ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಿಶಾ ರವಿ ಬಂಧನ ಖಂಡಿಸಿದ ‘ಭಾರತದ ಗ್ರೇಟಾ ಥನ್‌ಬರ್ಗ್’ ರಿಧಿಮಾ ಪಾಂಡೆ

ರೇಣುಕಾರಾಧ್ಯ ಎಂಬುವವರು ವಿದ್ಯಾಭೂಷಣರ ಆತ್ಮಕತೆ ‘ ನೆನಪೇ ಸಂಗೀತ’ ಪುಸ್ತಕದಲ್ಲಿನ ವಿಷಯವನ್ನ ಉಲ್ಲೇಖಿಸಿ, “ಈ ವ್ಯಕ್ತಿ ಉತ್ತಾರಾಧಿಕಾರಿಯಾಗಿ ಆಯ್ಕೆಯಾದಾಗ ಹತ್ತು ಹನ್ನೆರಡು ವರ್ಷ ಇರಬೇಕೇನೋ ಆಗ ಮಠಕ್ಕೆ ಹೋಗಿದ್ದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರು ಈತನನ್ನು ಕಂಡು “ಅಯ್ಯೋ ಪಾಪ ಹುಡುಗ” ಅಂದಿದ್ದರಂತೆ… ಮಾಸ್ತಿ ಅವತ್ತು ಅಯ್ಯೋ ಪಾಪ ಯಾಕಂದ್ರು ಅಂತ ಈ ಸ್ವಾಮಿಗೆ ಅವತ್ತು ಅರ್ಥ ಆಗಿದ್ರೆ ಚೆನ್ನಾಗಿರ್ತಿತ್ತು… ಸ್ವಾಮಿ ಆಗಿ ಮಠಕ್ಕೂ ದೇಶಕ್ಕೂ ವ್ಯತ್ಯಾಸ ಗೊತ್ತಿಲ್ಲ… ಅಯ್ಯೊ ಪಾಪ…. – ವಿದ್ಯಾಭೂಷಣರ ಆತ್ಮಕತೆ ‘ ನೆನಪೇ ಸಂಗೀತ’ ದಲ್ಲಿ ಈ ಬಗ್ಗೆ ವಿವರಗಳಿವೆ” ಎಂದು ವ್ಯಂಗ್ಯವಾಡಿದ್ದಾರೆ.

ನಿತಿನ್ ಎಂಬುವವರು, “ಇಂದಿಗೂ ಕೃಷ್ಣಮಠದಲ್ಲಿ ಪಂಕ್ತಿಭೇದದ ಮೂಲಕ ಹಿಂದೂ ಧರ್ಮದ ಕೆಳವರ್ಗದವರನ್ನು ಶೋಷಣೆ ಮಾಡುವ ನಿಮ್ಮ ಧರ್ಮನಿಷ್ಠೆಯ ಬಗ್ಗೆ ನನಗೆ ಸಂದೇಹವಿದೆ ಪೇಜಾವರ ಶ್ರೀಗಳೇ.. ಶ್ರೀಗಳು ತಮ್ಮ ಇತಿ-ಮಿತಿಗಳನ್ನು ಅರಿತು ಸಂನ್ಯಾಸ ಧರ್ಮ ಪಾಲನೆಯೊಂದಿಗೆ ಯಾವುದೇ ಪಕ್ಷದ ವಕ್ತಾರನಂತೆ ವರ್ತಿಸದಿದ್ದರೆ ಒಳ್ಳೆಯದು ಎಂಬುದು ನನ್ನ ಭಾವನೆ..” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಾನವಹಕ್ಕುಗಳ ರಕ್ಷಕ ಅಮ್ನೆಸ್ಟಿ ಸಂಸ್ಥೆಯ ಹಣ ಮುಟ್ಟುಗೋಲು: ಭಾರತ ಸರ್ಕಾರ ಕಿರುಕುಳ ನೀಡುತ್ತಿದೆ ಎಂದಿದ್ದ ಸಂಸ್ಥೆ

ಭರತ್ ಹೆಬ್ಬಾಳ್ ತಮ್ಮ ಪೋಸ್ಟ್‌ನಲ್ಲಿ, ಈ ಹಿಂದೆ ಪೇಜಾವರ ಶ್ರೀ ರೈತರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದನ್ನು ಉಲ್ಲೇಖಿಸಿ “ರೈತರು ಹೊಲಗದ್ದೆಗಳಲ್ಲಿ ಕಷ್ಟಪಟ್ಟು ದುಡಿದು ತಂದು ಹಾಕಿದ ಬೆಳೆಗಳನ್ನು ಎಳ್ಳಷ್ಟೂ ಕೆಲಸ ಮಾಡದೆ ಜಾತಿವಾದಿ ಪಂಕ್ತಿ ಭೋಜನದಲ್ಲಿ ದನ ತಿನ್ನೊಂಗೆ ತಿಂದು, ಪ್ರತಿಭಟನೆ ಮಾಡುತ್ತಿರುವವರು ರೈತರೊ ಇಲ್ಲವೋ ಎಂಬ ಸಂಶಯ ವ್ಯಕ್ತಪಡಿಸುವುದು.. ತಿಂದ ಬಿಟ್ಟಿ ಊಟ ಜೀರ್ಣವಾಗದಿದ್ದಲ್ಲಿ ಇನ್ನೊಬ್ಬರ ದೇಶಭಕ್ತಿಯನ್ನು ಪ್ರಶ್ನಿಸುವುದು..” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಹೀಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೇಜಾವರ ಶ್ರೀಗಳ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತ ದೇಶ ಎಂದರೆ ಬ್ರಾಹ್ಮಣ್ಯ, ಭಾರತ ದೇಶ ಎಂದರೆ ಬಿಜೆಪಿ, ಭಾರತ ದೇಶ ಎಂದರೆ ‘ಇವರು ಮಾತ್ರ’ ಎನ್ನುವುದು ಕೆಲವು ಮೂಲಭೂತವಾದಿಗಳ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ. ಭಾರತ ಎಂದರೆ ಬಹುತ್ವದ, ಬಹುಜನರ, ಸರ್ವ ಸಂಸ್ಕೃತಿಗಳ ದೇಶ ಎಂದು ಒಪ್ಪುವುದಕ್ಕೆ ಇವರು ತಯಾರಿಲ್ಲ.

ಈ ಮನಸ್ಥಿತಿಗಳೇ ಇಂದು, ರಾಮಮಂದಿರಕ್ಕೆ ದೇಣಿಗೆ ನೀಡದವರನ್ನು ದೇಶ ಭಕ್ತರಲ್ಲ ಎಂದು ಬಿಂಬಿಸುತ್ತದೆ. ಅವರ ಮನೆಯನ್ನು ಗುರುತು ಮಾಡಿಕೊಳ್ಳಲಾಗುತ್ತದೆ. ಬಿಜೆಪಿ ಸರ್ಕಾರವನ್ನು ಟೀಕಿಸಿದರೆ, ಇದು ದೇಶದ್ರೋಹ ಎಂದು ಪ್ರಕರಣ ದಾಖಲಿಸಲಾಗುತ್ತದೆ. ಬಿಜೆಪಿಯ ವಿರುದ್ಧ ಪ್ರತಿಭಟನೆ ಮಾಡಿದರೆ, ಪ್ರಶ್ನಿಸಿದರೆ ಅವರೆಲ್ಲರೂ ದೇಶದ್ರೋಹಿಗಳಾಗುತ್ತಾರೆ. ಇದು ಈ ದೇಶದ ವಿಪರ್ಯಾಸವಲ್ಲದೆ ಮತ್ತೇನು?


ಇದನ್ನೂ ಓದಿ: ಸರ್ವಾಧಿಕಾರಿ ಸರ್ಕಾರ ಭಯಭೀತವಾಗಿದೆ: ಮಹುವಾ ಮೊಯಿತ್ರಾರನ್ನು ಬೆಂಬಲಿಸಿದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರೆಲ್ಲಾ ಮನುವಾದವನ್ನು ವಿರೋಧಿಸುತ್ತಾರೋ, ಅವರೆಲ್ಲರೂ ಮನುವಾದಿಗಳ ಪ್ರಕಾರ “ದೇಶದ್ರೋಹಿಗಳು”. ಮಾನವತೆಯ ವಿರೋಧಿಗಳಾಗಿರುವ ಈ ಮನುವಾದಿಗಳು ದೇಶಪ್ರೇಮದ ಹೆಸರಿನಲ್ಲಿ ಮಾಡಬಾರದ್ದನ್ನೆಲ್ಲಾ ಮಾಡುತ್ತಿದ್ದಾರೆ. ದೇಶಪ್ರೇಮಕ್ಕಿಂತಲೂ ಮಿಗಿಲಾದುದು ಮಾನವತಾಪ್ರೇಮ ಎಂಬುದನ್ನು ಈ ಅವಿವೇಕಿಗಳು ಮೊದಲು ತಿಳಿದುಕೊಳ್ಳುವುದು ಒಳ್ಳೆಯದು.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...