ಹೊಸದಾಗಿ ನಿರ್ಮಿಸಲಾದ ತೆಲಂಗಾಣ ರಾಜ್ಯ ಸಚಿವಾಲಯಕ್ಕೆ ಭಾರತದ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರನ್ನು ಇಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರು ಗುರುವಾರ ಘೋಷಿಸಿದ್ದಾರೆ. ದಸರಾ ಹಬ್ಬದ ವೇಳೆಗೆ ಸಿದ್ಧಗೊಳ್ಳುವ ಗುರಿಯೊಂದಿಗೆ ನೂತನ ಸಚಿವಾಲಯ ಸಂಕೀರ್ಣದ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.
ತಮ್ಮ ಸರ್ಕಾರದ ಈ ನಿರ್ಧಾರವನ್ನು ಜಾರಿಗೆ ತರುವಂತೆ ತೆಲಂಗಾಣ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಅವರು ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ತಿಗೆ ಅಂಬೇಡ್ಕರ್ ಅವರ ಹೆಸರನ್ನು ಇಡಬೇಕು ಎಂದು ಪ್ರಧಾನಿ ಮೋದಿಗೆ ಮನವಿ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, “ಸಾಮಾಜಿಕ ಹೋರಾಟಗಾರ ಮತ್ತು ದಾರ್ಶನಿಕ ಡಾ.ಅಂಬೇಡ್ಕರ್ ಅವರ ಹೆಸರನ್ನು ಸಚಿವಾಲಯಕ್ಕೆ ಇಡುವುದು ತೆಲಂಗಾಣದ ಜನರಿಗೆ ಹೆಮ್ಮೆಯ ಸಂಗತಿಯಾಗಿದೆ” ಎಂದು ಹೇಳಿದ್ದಾರೆ.
“ಅಂಬೇಡ್ಕರ್ ಅವರು ವಿವಿಧತೆಯಲ್ಲಿ ಏಕತೆ ಮತ್ತು ಎಲ್ಲರಿಗೂ ಸಮಾನತೆಯ ಕನಸು ಕಂಡಿದ್ದರು. ತೆಲಂಗಾಣ ಸರ್ಕಾರವು ಎಲ್ಲಾ ಕ್ಷೇತ್ರಗಳಲ್ಲಿ ಎಲ್ಲಾ ವರ್ಗಗಳಿಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ಅವರ ತತ್ವದಿಂದ ನಡೆಸುತ್ತಿದೆ” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಹೊಸ ಸಂಸತ್ ಕಟ್ಟಡಕ್ಕೆ ‘ಅಂಬೇಡ್ಕರ್’ ಹೆಸರಿಡಿ: ಕೇಂದ್ರಕ್ಕೆ ತೆಲಂಗಾಣ ಸರ್ಕಾರ ಒತ್ತಾಯ
ರಾಜ್ಯದ ಹೊಸ ಸಚಿವಾಲಯಕ್ಕೆ ಅಂಬೇಡ್ಕರ್ ಅವರ ಹೆಸರನ್ನು ಇಡುವುದಾಗಿ ಘೋಷಿಸಿದ ಮುಖ್ಯಮಂತ್ರಿ, “ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ತಿಗೆ ಅಂಬೇಡ್ಕರ್ ಅವರ ಹೆಸರು ಇಡಬೇಕು ಎಂಬ ತೆಲಂಗಾಣ ಸರ್ಕಾರದ ಬೇಡಿಕೆಯನ್ನು ಪರಿಗಣಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುತ್ತೇನೆ” ಎಂದು ಹೇಳಿದ್ದಾರೆ.
ಭಾರತದ ನೂತನ ಸಂಸತ್ ಭವನಕ್ಕೆ ಡಾ.ಅಂಬೇಡ್ಕರ್ ಅವರ ಹೆಸರಿಡುವ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವ ನಿರ್ಣಯವನ್ನು ತೆಲಂಗಾಣ ಸರ್ಕಾರವು ಈಗಾಗಲೆ ಅಂಗೀಕರಿಸಿದೆ.



Good.
Only lower caste leaders are putting Ambedkar’s name wherever possible.
Upper caste and Brahmin leaders are selecting only Brahmin leaders name.