Homeಮುಖಪುಟಡಾ.ಆನಂದ್ ತೇಲ್ತುಂಬ್ಡೆ ಅವರ ತಾತ್ಕಾಲಿಕ ಜಾಮೀನು ಅರ್ಜಿ ತಿರಸ್ಕೃತ

ಡಾ.ಆನಂದ್ ತೇಲ್ತುಂಬ್ಡೆ ಅವರ ತಾತ್ಕಾಲಿಕ ಜಾಮೀನು ಅರ್ಜಿ ತಿರಸ್ಕೃತ

- Advertisement -
- Advertisement -

ಎಲ್ಗಾರ್ ಪರಿಷತ್ ಪ್ರಕರಣದ ಆರೋಪಿ ಡಾ.ಆನಂದ್ ತೇಲ್ತುಂಬ್ಡೆ ಅವರಿಗೆ ತಾತ್ಕಾಲಿಕ ಜಾಮೀನು ನೀಡಲು ಪುಣೆಯ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ಜೊತೆಗೆ ಮೇ 8ರವರೆಗೆ ತೇಲ್ತುಂಬೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಡಿಸೆಂಬರ್ 31, 2017ರಂದ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಪ್ರಕರಣದ ಆರೋಪಿ ಆಗಿರುವ ಆನಂದ್ ತೇಲ್ತುಂಬೆ ಅವರು ಏಪ್ರಿಲ್ 14ರ ಡಾ.ಬಿ.ಆರ್. ಅಂಬೇಡ್ಕರ್ ಜನ್ಮದಿನದಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಶರಣರಾಗಿದ್ದರು.

ಈ ಹಿನ್ನೆಲೆಯಲ್ಲಿ ತೇಲ್ತುಂಬ್ಡೆ ಅವರು ತಮ್ಮ ವಕೀಲರಾದ ಆರ್. ಸತ್ಯನಾರಾಯಣ್ ಮತ್ತು ಆರೀಫ್‌ ಸಿದ್ದಿಕಿ ಮೂಲಕ ವಿಶೇಷ ನ್ಯಾಯಾಲಯಕ್ಕೆ ತಾತ್ಕಾಲಿಕ ಜಾಮೀನು ನೀಡುವಂತೆ ಕೋರಿದ್ದರು. ತೇಲ್ತುಂಬ್ಡೆ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.


ಇದನ್ನೂ ಓದಿ: IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO ಆನಂದ್‌ ತೇಲ್ತುಂಬ್ಡೆ ಬಂಧನ ಸರಿಯೇ? 


ಆದರೆ ರಾಷ್ಟ್ರೀಯ ತನಿಖಾ ಸಂಸ್ಥೆ ಆನಂದ್‌ರವರ ಅವರ ಅರ್ಜಿಯನ್ನು ವಿರೋಧಿಸಿದ್ದಲ್ಲದೆ, ಈ ಪ್ರಕರಣ ತುಂಬಾ ಗಂಭೀರವಾಗಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಹಾಗಾಗಿ ತನಿಖೆಗೆ ಅಗತ್ಯವಿರುವುದರಿಂದ ಜಾಮೀನು ನೀಡಬಾರದೆಂದು ಮನವಿ ಮಾಡಿದೆ.

ಈ ವೇಳೆ ಆನಂದ್‌ ಪರ ವಾದ ಮಂಡಿಸಿದ ವಕೀಲರು ತಮ್ಮ ಕ್ಷಕ್ಷಿದಾರರಿಗೆ ಉಸಿರಾಟದ ತೊಂದರೆ ಇದೆ. ಉಸಿರಾಟ ಕಡಿಮೆಯಾಗಿದೆ. ಕೋವಿಡ್-19 ವ್ಯಾಪಿಸಿರುವುದರಿಂದ ಉಸಿರಾಟದ ತೊಂದರೆಯಾದರೆ ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯಕೀಯ ತಪಾಸಣೆ ಅಗತ್ಯ. ಹಾಗಾಗಿ ತೇಲ್ತುಂಬ್ಡೆ ಅವರಿಗೆ ತಾತ್ಕಾಲಿಕ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಎರಡು ಕಡೆಯ ವಾದ-ವಿವಾದ ಆಲಿಸಿದ ವಿಶೇಷ ನ್ಯಾಯಾಲಯ ತೇಲ್ತುಂಬ್ಡೆ ಅವರ ತಾತ್ಕಾಲಿಕ ಜಾಮೀನು ಅರ್ಜಿಯನ್ನು ನಿರಾಕರಿಸಿತು. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ತೇಲ್ತುಂಬೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮುಂದೆ ಶರಣಾಗಿದ್ದರು. ಸುಪ್ರೀಂಕೋರ್ಟ್ ಕೂಡ ನಿರೀಕ್ಷಣಾ ಜಾಮೀನನ್ನು ತಿರಸ್ಕರಿಸಿತ್ತು.


ಇದನ್ನೂ ಓದಿ: ಆನಂದ್‌ ತೇಲ್‌ತುಂಬ್ಡೆ: ಬಂಧನದಲ್ಲಿ ಅಂಬೇಡ್ಕರ್ ಆತ್ಮಬಂಧು 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ತೇಲ್ತುಂಬೆ ಅವರಿಗೆ ‘ಅನಾರೋಗ್ಯದಲ್ಲಿ’ ಏರುಪೇರಾಗಿದೆ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

    …’ಆರೋಗ್ಯದಲ್ಲಿ’ ಏರುಪೇರಾಗಿದೆ…

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...