Homeಮುಖಪುಟರೈತ ಹೋರಾಟದ ಮುಖಗಳು: ಮನುಷ್ಯರಿಗೆ ಮಾತ್ರವಲ್ಲದೆ ಸಮಾಜದ ರೋಗಗಳಿಗೂ ಮದ್ದುಕೊಡುತ್ತಿದ್ದಾರೆ ವೈದ್ಯ ದರ್ಶನ್ ಪಾಲ್!

ರೈತ ಹೋರಾಟದ ಮುಖಗಳು: ಮನುಷ್ಯರಿಗೆ ಮಾತ್ರವಲ್ಲದೆ ಸಮಾಜದ ರೋಗಗಳಿಗೂ ಮದ್ದುಕೊಡುತ್ತಿದ್ದಾರೆ ವೈದ್ಯ ದರ್ಶನ್ ಪಾಲ್!

ದೆಹಲಿ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿರುವ ರೈತ ನಾಯಕರನ್ನು ಪರಿಚಯಿಸುವ ಸರಣಿ ಇದು

- Advertisement -
- Advertisement -

ಎಪ್ಪತ್ತು ವರ್ಷದ ಈ ವ್ಯಕ್ತಿ ಒಂದು ಕಾಲದಲ್ಲಿ ವೈದ್ಯರು. ಅರಿವಳಿಕೆಯ ತಜ್ಞರಾಗಿ ರೋಗ ಚಿಕಿತ್ಸೆಯಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದರು. ಈಗಲೂ ಅರಿವಳಿಕೆ ಪಡೆದ ಸ್ಥಿತಿಯಲ್ಲಿರುವ ವ್ಯವಸ್ಥೆಗೆ ಮದ್ದು ನೀಡುವ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ.

ಕಳೆದ ಒಂದೂವರೆ ತಿಂಗಳಿನಿಂದ ದೆಹಲಿಯ ನಾಲ್ಕು ದಿಕ್ಕುಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ನೇತೃತ್ವ ವಹಿಸಿರುವ ಇವರ ಹೆಸರು ದರ್ಶನ್‌ ಪಾಲ್. ಕ್ರಾಂತಿಕಾರಿ ಕಿಸಾನ್‌ ಯೂನಿಯನ್‌ ಪಂಜಾಬ್‌ನ ಅಧ್ಯಕ್ಷರಾದ ಇವರು ಕಳೆದ ಜೂನ್‌ ತಿಂಗಳಿಂದ ರೈತರನ್ನು ಸಂಘಟಿಸುತ್ತಿದ್ದಾರೆ.

ಮೂಲತಃ ಪಟಿಯಾಲದವರಾದ ಪಾಲ್‌, ವೈದ್ಯರಾಗಿ ಸೇವೆ ಸಲ್ಲಿಸುತ್ತಲೇ ಹಲವು ರೈತ-ಕಾರ್ಮಿಕ ಸಮಸ್ಯೆಗಳ ಪರವಾಗಿ ಹೋರಾಡಿದವರು. ರೈತರ ಸಾಲ ಮನ್ನಾಕ್ಕಾಗಿ ಹಲವು ವರ್ಷಗಳ ಕಾಲ ಹೋರಾಡಿದ್ದರು.

2002ರಲ್ಲಿ ತಮ್ಮ ಪಂಜಾಬ್‌ ನಾಗರಿಕ ವೈದ್ಯ ಸೇವೆ ತೊರೆದ ಪಾಲ್‌ ತಮ್ಮ ಕುಟುಂಬಕ್ಕೆ ಸೇರಿದ 15 ಎಕರೆ ಭೂಮಿಯಲ್ಲಿ ಕೃಷಿ ಆರಂಭಿಸಿದರು. ಹಾಗೆಯೇ ಭಾರತೀಯ ಕಿಸಾನ್‌ ಯೂನಿಯನ್‌ನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. 2016ರಲ್ಲಿ ಕ್ರಾಂತಿಕಾರಿ ಕಿಸಾನ್‌ ಯೂನಿಯನ್‌ ಸೇರಿದ ಪಾಲ್‌ ಕಳೆದ ವರ್ಷ ಯೂನಿಯನ್‌ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು.

ಆಲ್‌ ಇಂಡಿಯಾ ಕಿಸಾನ್‌ ಸಂಘರ್ಷ ಸಮಿತಿ ಸದಸ್ಯರೂ ಆಗಿರುವ ಪಾಲ್‌, ರೈತರ ಹೋರಾಟವನ್ನು ಪಂಜಾಬಿಗಷ್ಟೇ ಸೀಮಿತವಾಗಿಸದೆ, ಉತ್ತರ ಪ್ರದೇಶ, ರಾಜಸ್ಥಾನ, ಕರ್ನಾಟಕ, ಮಹಾರಾಷ್ಟ್ರದಲ್ಲೂ ಸಂಘಟಿಸಿದ್ದಾರೆ.

ಈಗ ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ಹೋರಾಟ ಸಂಘಟಿಸಲಾರಂಭಿಸಿದ ಪಾಲ್‌ 31 ಸಂಘಟನೆಗಳನ್ನು ಒಗ್ಗೂಡಿಸಿ, ಸಮನ್ವಯಕಾರರಾಗಿ ಹೋರಾಟ ಮುನ್ನಡೆಸುತ್ತಿದ್ದಾರೆ.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ಹರಿಯಾಣ ಸಿಎಂ ಕರ್ನಾಲ್ ಭೇಟಿ ವೇಳೆ ರೈತರ ಮೇಲೆ ಮತ್ತೆ ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...