Homeಮುಖಪುಟದಲಿತ ಮುಖ್ಯಮಂತ್ರಿ: ಬಿಜೆಪಿಗೆ ಡಾ.ಎಚ್‌.ಸಿ.ಮಹದೇವಪ್ಪ ತಿರುಗೇಟು

ದಲಿತ ಮುಖ್ಯಮಂತ್ರಿ: ಬಿಜೆಪಿಗೆ ಡಾ.ಎಚ್‌.ಸಿ.ಮಹದೇವಪ್ಪ ತಿರುಗೇಟು

ಕಾಂಗ್ರೆಸ್‌ ಪಕ್ಷವು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಪಂಜಾಬ್‌ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಸಿಖ್‌ ದಲಿತ ವ್ಯಕ್ತಿಯಾದ ಚರಣ್‌‌ಜಿತ್‌ ಸಿಂಗ್‌ ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವುದು ಕರ್ನಾಟಕದಲ್ಲಿಯೂ ದಲಿತ ಮುಖ್ಯಮಂತ್ರಿ ಚರ್ಚೆಗೆ ಕಾರಣವಾಗಿದೆ.

- Advertisement -
- Advertisement -

ಕಾಂಗ್ರೆಸ್‌ ಪಕ್ಷವು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಪಂಜಾಬ್‌ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಸಿಖ್‌ ದಲಿತ ವ್ಯಕ್ತಿಯಾದ ಚರಣ್‌‌ಜಿತ್‌ ಸಿಂಗ್‌ ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವುದು ಕರ್ನಾಟಕದಲ್ಲಿಯೂ ದಲಿತ ಮುಖ್ಯಮಂತ್ರಿ ಚರ್ಚೆಗೆ ಕಾರಣವಾಗಿದೆ.

ದಲಿತ ಮುಖ್ಯಮಂತ್ರಿ ವಿಚಾರದಲ್ಲಿ ಎಲ್ಲ ಪಕ್ಷಗಳೂ ಅನ್ಯಾಯ ಮಾಡಿವೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಪ್ರಬಲ ಲಿಂಗಾಯತ, ಒಕ್ಕಲಿಗ ಸಮುದಾಯದ ವ್ಯಕ್ತಿಗಳೇ ಅತಿ ಹೆಚ್ಚು ಬಾರಿ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳಾಗಿದ್ದಾರೆ. ಯಾವ ಪಕ್ಷವು ಇಲ್ಲಿ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಿಲ್ಲ. ರಾಜಕೀಯ ಕೆಸರೆರಚಾಟಕ್ಕೆ ‘ದಲಿತ ಮುಖ್ಯಮಂತ್ರಿ’ ಎಂಬ ಚರ್ಚೆ ಕಾರಣವಾಗುತ್ತದೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷವು ಪಂಜಾಬ್‌ ವಿದ್ಯಮಾನವನ್ನು ಹಿಡಿದು, ‘ದಲಿತ ಮುಖ್ಯಮಂತ್ರಿ’ ವಿಚಾರವನ್ನು ಪ್ರಸ್ತಾಪಿಸಿ, “ಪಂಜಾಬ್‌ ರಾಜ್ಯದಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕಾಗಿ ಹಗಲುಕನಸು ಕಾಣುತ್ತಿರುವ ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರೇ, ದಲಿತ ಸಿಎಂ ವಿಚಾರದಲ್ಲಿ ನಿಮ್ಮ ನಿಲುವೇನು? ಮಲ್ಲಿಕಾರ್ಜುನ ಖರ್ಗೆ ಮತ್ತು ಪರಮೇಶ್ವರ್ ಅವರ ರಾಜಕೀಯ ಜೀವನವನ್ನು ಮುಗಿಸಿದ ರೀತಿ ಕರ್ನಾಟಕ ಕಾಂಗ್ರೆಸ್‌ನ ಅಂತರಾಳದಲ್ಲಿ ಹುಟ್ಟಿದ ದಲಿತ ಸಿಎಂ ವಾದದ ಭ್ರೂಣ ಹತ್ಯೆ ಮಾಡುತ್ತೀರಾ?” ಎಂದು ಟ್ವೀಟ್ ಮಾಡಿದೆ.

ಮುಂದುವರಿದು, “ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವರಿಷ್ಠರ ದ್ವಿಮುಖ ನೀತಿಯ ಬಗ್ಗೆ ಏನೆನ್ನಬೇಕು? ಪಂಜಾಬ್‌ನಲ್ಲಿ ಚರಣಜಿತ್ ಅವರಿಗೆ ಪಟ್ಟಕಟ್ಟಿ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದೇವೆ ಎಂದು ಬೀಗುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ದಲಿತ ಸಿಎಂ ವಾದ ಹಾಗೂ ದಲಿತ ನಾಯಕರನ್ನು ಮೂಲೆಗುಂಪು ಮಾಡಿ ಮೌನಕ್ಕೆ ಶರಣಾಗಿದ್ದಾರೆ” ಎಂದು ಬಿಜೆಪಿ ಹೇಳಿದೆ.

ಇದಕ್ಕೆ ತಮ್ಮ ಫೇಸ್‌ಬುಕ್‌ ಖಾತೆಯ ಮೂಲಕ  ಪ್ರತಿಕ್ರಿಯಿಸಿರುವ ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, “ಸದಾ ಮೌಢ್ಯತೆ ಮತ್ತು ಮತೀಯವಾದವನ್ನೇ ಉಸಿರಾಡುತ್ತಿರುವ ಬಿಜೆಪಿಗರು ದಲಿತರನ್ನು ಸಿಎಂ ಮಾಡುವುದಿರಲಿ, ಅವರಿಗೆ ಸರಿಯಾಗಿ ಗೌರವವನ್ನೂ ನೀಡಲು ಹಿಂದೆ ಮುಂದೆ ನೋಡುತ್ತಾರೆ. ದಲಿತರ ಬದುಕಿನ ಘನತೆ ಮತ್ತು ಅವರ ಹಕ್ಕುಗಳಿಗೆ ವಿರುದ್ಧವಾಗಿರುವಂತಹ ಅಮಾನವೀಯ ವಾತಾವರಣವನ್ನು ನಿರ್ಮಿಸಿದ್ದಾರೆ. ಇದೇ ಮತೀಯವಾದಿಗಳು ಇದೀಗ ದಲಿತ ಸಿ.ಎಂ. ಹೆಸರಿನಲ್ಲಿ ದಲಿತರ ಒಗ್ಗಟ್ಟನ್ನು ಒಡೆಯುವ ಕೆಲಸವನ್ನು ಮಾಡುತ್ತಿರುವುದು ಹಾಸ್ಯಾಸ್ಪದ ಮತ್ತು ಅಪಾಯಕಾರಿ ಬೆಳವಣಿಗೆ” ಎಂದಿದ್ದಾರೆ.

“ಈಗಾಗಲೇ ಹಲವು ರಾಜ್ಯಗಳಲ್ಲಿ ಇವರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡುವ ಅವಕಾಶ ಸಿಕ್ಕರೂ ಮುಖ್ಯಮಂತ್ರಿ ಮಾಡದೇ ಕಾಂಗ್ರೆಸ್ ಪಕ್ಷದ ಒಗ್ಗಟ್ಟನ್ನು ಒಡೆಯುವ ಕೆಲಸ ಮಾಡುತ್ತಿರುವ ಬಿಜೆಪಿಗರು ಎಂದಿಗೂ ದಲಿತರ ಬದುಕಿನ ಹಿತದ ಬಗ್ಗೆ ಯೋಚಿಸುವುದು ಕನಸಿನ ಮಾತು. ಭಾರತದ ವಿವಿಧ ರಾಜ್ಯಗಳಲ್ಲಿ ಅವಕಾಶ ಸಿಕ್ಕಾಗಲೆಲ್ಲ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಬದ್ಧತೆ ತೋರಿರುವುದು ಕಾಂಗ್ರೆಸ್ ಪಕ್ಷ ಎಂಬುದನ್ನು ಎಲ್ಲರೂ ನೆನಪಿಡಬೇಕು” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...