- Advertisement -
- Advertisement -
ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬರಹಗಾರ, ಪ್ರಗತಿಪರ ಚಿಂತಕ ಡಾ.ಎಸ್.ಬಿ ಜೋಗುರರವರು (51) ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.
ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿಯವರಾದ ಅವರು ಧಾರವಾಡದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪತ್ರಕರ್ತರಾಗಿ, ಬರಹಗಾರರಾಗಿ ಪರಿಚಿತರಿದ್ದ ಇವರು ಪ್ರಗತಿಪರ ಚಳವಳಿಗಳಲ್ಲಿ ಗುರುತಿಸಿಕೊಂಡಿದ್ದರು. ಎರಡು ವರ್ಷದಿಂದ ಬಾಧಿಸುತ್ತಿದ್ದ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಅಸ್ತಂಗತರಾಗಿದ್ದಾರೆ.
ಮೃತ ಡಾ.ಎಸ್.ಬಿ ಜೋಗುರ ಅವರ ಅಂತ್ಯಕ್ರಿಯೆ ಇಂದ 11 ಗಂಟೆಗೆ ಧಾರವಾಡದ ಹೊಸಯಲ್ಲಾಪೂರ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.


