Homeಕರ್ನಾಟಕಬಿಜೆಪಿಗೆ ಮತ್ತೊಂದು ಶಾಕ್: ಕಾಂಗ್ರೆಸ್ ಸೇರಲು ಮುಂದಾದ ಬಿಜೆಪಿ ಯುವ ಘಟಕದ ಮಾಜಿ ಅಧ್ಯಕ್ಷ ಡಾ.ಸಂದೀಪ್

ಬಿಜೆಪಿಗೆ ಮತ್ತೊಂದು ಶಾಕ್: ಕಾಂಗ್ರೆಸ್ ಸೇರಲು ಮುಂದಾದ ಬಿಜೆಪಿ ಯುವ ಘಟಕದ ಮಾಜಿ ಅಧ್ಯಕ್ಷ ಡಾ.ಸಂದೀಪ್

- Advertisement -
- Advertisement -

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಬಿಜೆಪಿ ರಾಜ್ಯ ಯುವ ಮೋರ್ಚಾ ನಿಕಟಪೂರ್ವ ಅಧ್ಯಕ್ಷ ಡಾ.ಸಂದೀಪ್ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಖ ಖಚಿತವಾಗಿದೆ.

ಡಾ.ಸಂದೀಪ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತುಕತೆಗಳು ನಡೆದಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಪಕ್ಷ ಸೇರ್ಪಡೆಯಾಗಲಿರುವ ಸಾಧ್ಯತೆ ಇದೆ.

ಪರಿಶಿಷ್ಟ ಜಾತಿಗೆ ಸೇರಿದ ಪ್ರಬಲ ನಾಯಕರಲ್ಲಿ ಒಬ್ಬರಾದ ಡಾ.ಸಂದೀಪ್ ಬಿಜೆಪಿಯಲ್ಲಿ ತಳಹಂತದಿಂದ ಹಿಡಿದು ಬಿಜೆಪಿ ಯುವ ಘಟಕದ ಅಧ್ಯಕ್ಷ ಸ್ಥಾನದವರೆಗೆ ಕ್ರಿಯಾಶೀಲವಾಗಿ ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಕಲೇಶಪುರ-ಆಲೂರು ಅಥವಾ ಆನೇಕಲ್ ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದರಲ್ಲಿ ಅವರನ್ನು ಸ್ಪರ್ಧೆಗೆ ಇಳಿಸುವುದಾಗಿ ಬಿಜೆಪಿ ಮತ್ತು ಆರೆಸ್ಸೆಸ್‌ ನಾಯಕರು ಭರವಸೆ ನೀಡಿದ್ದರಾದರೂ ಕೊನೆ ಘಳಿಗೆಯಲ್ಲಿ ಟಿಕೆಟ್ ವಂಚಿತರಾಗಿದ್ದರು.

ಈ ಕುರಿತು ನಾನು ಗೌರಿ.ಕಾಂ ಜೊತೆ ಮಾತನಾಡಿದ ಡಾ. ಸಂದೀಪ್, ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾತುಕತೆ ನಡೆಯುತ್ತಿದೆ. ಪ್ರಸ್ತುತ ವಿದ್ಯಮಾನವನ್ನು ನೋಡಿದಾಗ ಬಾಬಾ ಸಾಹೇಬರ ಸಂವಿಧಾನದ ಆಶಯ, ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಮಾರಕವಾಗಿರುವ ಹಿನ್ನೆಲೆ ಬಿಜೆಪಿ ತೊರೆಯುವ ನಿರ್ಧಾರಕ್ಕೆ ಬಂದಿದ್ದೆ, ಈ ಬಾರಿ ಟಿಕೆಟ್‌ಗೆ ಆಕಾಂಕ್ಷಿಯಾಗಿಲ್ಲ, ಕಳೆದ ಬಾರಿ ಆನೇಕಲ್‌ನಿಂದ ಟಿಕೆಟ್‌ ನಿರೀಕ್ಷೆಯಲ್ಲಿದ್ದೆ, ಬಹುತೇಖ ಟಿಕೆಟ್‌ ಸಿಗುತ್ತದೆ ಎಂದುಕೊಂಡಿದ್ದೆ, ಕೊನೆಗೆ ಹಣ, ಭ್ರ‍ಷ್ಟಾಚಾರ ಇಂತವರಿಗೆ ಮಣೆ ಹಾಕಿ ಟಿಕೆಟ್‌ ನೀಡಲಾಗಿದೆ. ಬಿಜೆಪಿ ಪಕ್ಷವನ್ನು ಕಾರ್ಯಕರ್ತರ ಪಕ್ಷಕ ಎನ್ನುತ್ತಾರೆ, ಆದರೆ ಕಾರ್ಯಕರ್ತರಿಗೆ ಮನ್ನಣೆ, ಬೆಂಬಲ ನೀಡುವುದಿಲ್ಲ. ಇದು ಬೇರೆ ತರನೇ ಅಪ್ಪ-ಮಕ್ಕಳ ಪಕ್ಷವಾಗಿದೆ. ಕಳೆದ 10 ವರ್ಷಗಳಿಂದ ಬಿಜೆಪಿ-ಆರೆಸ್ಸೆಸ್‌ನಲ್ಲಿ ಸಕ್ರಿಯವಾಗದ್ದೆ, ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಪ್ರಾಥಮಿಕವಾಗಿ ಮಾತುಕತೆ ನಡೆದಿದೆ. ಕಾಂಗ್ರೆಸ್‌ ಸೇರ್ಪಡೆ ಬಹತೇಖ ಖಚಿತ ಎಂದು ಹೇಳಿದ್ದಾರೆ.

ಇದನ್ನು ಓದಿ: ಅರವಿಂದ್ ಕೇಜ್ರಿವಾಲ್ ಬಂಧನದಿಂದ ಬಿಜೆಪಿಗೆ ವಿಶ್ವಾದ್ಯಂತ ಅವಮಾನ: ಅಖಿಲೇಶ್ ಯಾದವ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...