Homeಕರ್ನಾಟಕಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಡಾ. ಶ್ರೀಧರ್; ಯಶಸ್ವಿನಿ ಟ್ರಸ್ಟ್‌ನಿಂದ ಹೆಸರು ಕೈಬಿಟ್ಟ ಸರ್ಕಾರ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಡಾ. ಶ್ರೀಧರ್; ಯಶಸ್ವಿನಿ ಟ್ರಸ್ಟ್‌ನಿಂದ ಹೆಸರು ಕೈಬಿಟ್ಟ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಸ್ವಯುಂ ಸೇವಕ ಸಂಘದ (ಆರ್‌ಎಸ್‌ಎಸ್‌) ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯ ಶ್ರೀಧರ್ ಹೆಸರನ್ನು ಸರ್ಕಾರದ ‘ಯಶಸ್ವಿನಿ ಟ್ರಸ್ಟ್‌’ನಿಂದ ತೆಗೆದುಹಾಕಲಾಗಿದೆ. ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯರಿಗೆ ಟ್ರಸ್ಟಿಯಾಗಿ ನೇಮಿಸಲಾಗಿತ್ತು; ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಇದು ಕಾಂಗ್ರೆಸ್‌ ಪಕ್ಷವು ಹೊಂದಿರುವ ಕೋಮುವಾದಿ ವಿರೋಧಿ ಮತ್ತು ಸಾಮರಸ್ಯ ನೀತಿಗೆ ವಿರುದ್ಧವಾಗಿದೆ. ತಕ್ಷಣವೇ ಡಾ. ಶ್ರೀಧರ್ ಅವರನ್ನು ಟ್ರಸ್ಟಿಯಾಗಿ ನೇಮಿಸಿ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಬಿ ಶಶಿಧರ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದರು.

ತೀವ್ರ ವಿರೋಧಗಳ ಬೆನ್ನಲ್ಲೇ ಯಶಸ್ವಿನಿ ಟ್ರಸ್ಟ್‌ನ ಟ್ರಸ್ಟಿ ಸ್ಥಾನದಿಂದ ವೈದ್ಯ ಶ್ರೀಧರ್ ಹೆಸರನ್ನು ಕೈಬಿಡಲಾಗಿದೆ. ಈ ಸಂಬಂಧ ಸರ್ಕಾರ ಆದೇಶವನ್ನು ಹೊರಡಿಸಿದ್ದು, “ಆಡಳಿತಾತ್ಮಕ ದೃಷ್ಟಿಯಿಂದ ಈ ಹಿಂದಿನ ಆದೇಶವನ್ನು ಮಾರ್ಪಡಿಸಿ, ಡಾ. ಶೀಧರ್ ಅವರ ಹೆಸರನ್ನು ಕೈಬಿಡಲಾಗಿದೆ” ಎಂದು ತಿಳಿಸಿದೆ.

ಈ ಹಿಂದಿನ ಆದೇಶ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಶಶಿಧರ್, “ಅಕ್ಟೋಬರ್ 12ರಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಆಯೋಜಿಸಿತ್ತು. ಆ ಕಾರ್ಯಕ್ರಮದಲ್ಲಿ ಕುಮಾರ್ ಆಸ್ಪತ್ರೆಯ ಡಾ. ಶ್ರೀಧರ್ ಅವರು ಗಣವೇಶ ಧರಿಸಿ ಭಾಗಿಯಾಗಿದ್ದರು. ಮಾತ್ರವಲ್ಲದೆ, ಆ್ಯಂಬುಲೆನ್ಸ್‌ಅನ್ನೂ ಕೊಂಡೊಯ್ದಿದ್ದರು. ಅವರನ್ನು ಸರ್ಕಾರದ ‘ಯಶಸ್ವಿನಿ ಟ್ರಸ್ಟ್‌’ಗೆ ಟ್ರಸ್ಟಿಯಾಗಿ ನೇಮಿಸುವಂತೆ ಕಾಂಗ್ರೆಸ್‌ ಶಾಸಕ ಪಡಕ್ಷರಿ ಅವರು ಶಿಫಾರಸು ಮಾಡಿದ್ದರು. ಅವರ ಶಿಫಾರಸಿನಂತೆ ಸರ್ಕಾರವು ಡಾ. ಶ್ರೀಧರ್ ಅವರನ್ನು ಟ್ರಸ್ಟಿಯಾಗಿ ನೇಮಿಸಿದೆ. ಇದು, ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಕಳವಳ ಹುಟ್ಟುಹಾಕಿದೆ” ಎಂದು ತಿಳಿಸಿದ್ದರು.

“ಕೋಮುವಾದಿ ಸಂಘ ಪರಿವಾರದ (ಆರ್ ಎಸ್ ಎಸ್) ವಿರುದ್ಧ ಕಾಂಗ್ರೆಸ್ ನಾಯಕತ್ವ ರಾಜ್ಯ ಮತ್ತು ದೇಶವ್ಯಾಪಿ ಸಮರ ಸಾರಿರುವ ಸಂದರ್ಭದಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿಯವರು ಪಕ್ಷದ ಸಿದ್ಧಾಂತಗಳಿಗೆ ವ್ಯತಿರಿಕ್ತ ಎನ್ನಿಸುವ ನಡೆಗಳನ್ನು ಅನುಸರಿಸುತ್ತಿರುವುದು ಆಘಾತಕಾರಿ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.

“ಇತ್ತೀಚೆಗೆ (ಅಕ್ಟೋಬರ್ 12 ರಂದು) ತಿಪಟೂರು ಪಟ್ಟಣದಲ್ಲಿ ಆರ್ ಎಸ್ ಎಸ್ ಗಣವೇಶಧಾರಿಯಾಗಿ ಪಥಸಂಚಲನದ ಮುಂಚೂಣಿಯಲ್ಲಿ ಭಾಗವಹಿಸಿದ ಡಾ. ಶ್ರೀಧರ್ ಅವರಿಗೆ ರಾಜ್ಯ ಸರ್ಕಾರದ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಯಶಸ್ವಿ ಅನುಷ್ಟಾನಕ್ಕಾಗಿ ರೂಪಿಸಿದ ಸಹಕಾರ ಇಲಾಖೆಯ ಯಶಸ್ವಿನಿ‌ ಟ್ರಸ್ಟ್ ನ ಟ್ರಸ್ಟಿಯಾಗಿ ನೇಮಕ ಮಾಡಿದ್ದು, ಅವರ ಹೆಸರು ಶಿಫಾರಸ್ಸು ಮಾಡಿದ ಶಾಸಕ ಷಡಕ್ಷರಿ ಅವರ ಕ್ರಮದಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ತೀವ್ರ ಮುಜುಗರ ಉಂಟಾಗಿದೆ” ಎಂದು ಅವರು ಹೇಳಿದ್ದರು.

“ಸ್ವತಃ ಮುಖ್ಯಮಂತ್ರಿಗಳಾದ ತಾವು ಪ್ರಧಾನ ಪೋಷಕರಾಗಿರುವ ಈ ಟ್ರಸ್ಟ್ ಗೆ ಸಂಘ ಪರಿವಾರದ ಕಟ್ಟಾ ಕಾರ್ಯಕರ್ತ ಡಾ ಶ್ರೀಧರ್ ಅವರನ್ನು ಟ್ರಸ್ಟಿಯಾಗಿಸಿ ಹೊರಡಿಸಿದ ಇತ್ತೀಚಿನ ಸುತ್ತೋಲೆಯನ್ನು ಮುಖ್ಯಮಂತ್ರಿಗಳಾದ ತಾವು ಹಾಗೂ ಕೆಪಿಸಿಸಿ ಅಧ್ಯಕ್ಷ ಹಾಗು ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರು ಗಮನಿಸಿಲ್ಲವೇ ಎನ್ನುವುದು ತಿಪಟೂರು ಮತ್ತು ತುಮಕೂರು ಜಿಲ್ಲೆಯ ನಿಷ್ಠಾವಂತ ಕಾಂಗ್ರೆಸ್ ಧುರೀಣರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

“ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ಮುತುವರ್ಜಿ ವಹಿಸಿ ಸಂಘ ಪರಿವಾರಕ್ಕೆ ಸೇರಿದ ತಿಪಟೂರಿನ ಕುಮಾರ್ ಆಸ್ಪತ್ರೆಯ ಡಾ. ಶ್ರೀಧರ್ ಹೆಸರನ್ನು ಯಶಸ್ವಿನಿ ಟ್ರಸ್ಟ್ ಗೆ ಶಿಫಾರಸ್ಸು ಮಾಡಿದ್ದು ಈಗ ಗುಟ್ಟಾಗಿ ಉಳಿದಿಲ್ಲ. ಕೋಮುವಾದಿಗಳ ಪರ ಎನ್ನಿಸುವ ಶಾಸಕರ ಇಂಥ ಧೋರಣೆಯನ್ನು ಸಹಿಸಲು ಅಸಾಧ್ಯ ಎಂದು ಕಾಂಗ್ರೆಸ್ ಕಾರ್ಯಕರ್ತರು ನನ್ನ ಬಳಿ ದೂರಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದ ಕೋಮುವಾದ ವಿರೋಧಿ ನಿಲುವಿಗೆ, ಸಾಮರಸ್ಯ ನೀತಿಗೆ ಮತ್ತು ಘನತೆಗೆ ಚ್ಯುತಿ ಬಂದಂತಾಗಿದೆ. ತಿಪಟೂರು ತಾಲ್ಲೂಕಿನ ಹಾಗೂ ತುಮಕೂರು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಇಂಥ ಆಕ್ರೋಶ ಮತ್ತು ಅಸಮಾಧಾನಗಳನ್ನು ಕೆಪಿಸಿಸಿಯ ಒಬ್ಬ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಹೈಕಮಾಂಡ್ ಗಮನಕ್ಕೆ ತರುವುದು ನನ್ನ ನೈತಿಕ ಹೊಣೆಗಾರಿಕೆ ಎಂದು ಭಾವಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಕೂಡಲೇ ಈ ಸುತ್ತೋಲೆ ವಾಪಸ್ ಪಡೆದು ಕ್ಷೇತ್ರದ ಕಾರ್ಯಕರ್ತರನ್ನು ತೀವ್ರ ಮುಜುಗರದಿಂದ ಪಾರು ಮಾಡುವಂತೆ ತಮ್ಮಲ್ಲಿ ಕಳಕಳಿಯ ಮನವಿ ಮಾಡುತ್ತಿದ್ದೇನೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಕಲ್ಲಡ್ಕ ಪ್ರಭಾಕರ್ ಭಟ್ ಕೆಣಕಿ ಉಳಿದ ಸರ್ಕಾರವಿಲ್ಲ, ಕರಾವಳಿ ಕಿಡಿಯಾದೀತು”: ಪ್ರಚೋದನಕಾರಿ ಪೋಸ್ಟ್ ವಿರುದ್ಧ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...