ರಾಜ್ಯದಲ್ಲಿ 97 ಜನರಲ್ಲಿ ಬ್ಲಾಕ್ ಫಂಗಸ್ ಪತ್ತೆ, ನಾಲ್ವರು ಬಲಿ- ಸಚಿವ ಸುಧಾಕರ್‌

ಕೊರೊನಾ ಸಾಂಕ್ರಾಮಿಕದ ಆತಂಕದ ನಡುವೆಯೇ ಮತ್ತಷ್ಟು ಭೀತಿಗೆ ಕಾರಣವಾಗಿರುವ ಹೊಸ ಸ್ವರೂಪದ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್‌ ಸುದ್ದಿಗೋಷ್ಠಿ ನಡೆಸಿದ್ದಾರೆ. ಹೊಸ ವೈರಾಣು ಬಗ್ಗೆ ಆತಂಕ ಪಡುವ ಅಗತ್ಯವಿಲ್ಲದಿದ್ದರೂ ಮುನ್ನೆಚ್ಚರಿಕೆ ಕಡ್ಡಾಯ ಎಂದಿದ್ದಾರೆ.

ಇಂಗ್ಲೆಂಡ್‌ನಲ್ಲಿ ಕೊರೊನಾ ವೈರಸ್‌ನ ಹೊಸ ಪ್ರಬೇಧ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದೆ. ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿರುವ ಸಚಿವ ಸುಧಾಕರ್‌, “ರೂಪಾಂತರಗೊಂಡಿರುವ ವೈರಾಣುವಿನ ತೀವ್ರತೆಯಲ್ಲಿ ವ್ಯತ್ಯಾಸ ಇಲ್ಲದಿದ್ದರೂ ಹೊಸ ಪ್ರಬೇಧ ಹೆಚ್ಚು ಸಾಂಕ್ರಾಮಿಕ ಎಂದು ಪ್ರಾಥಮಿಕ ಅಧ್ಯಯನದಲ್ಲಿ ಹೇಳಲಾಗುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ: ಬ್ರಿಟನ್‌ನಲ್ಲಿ ಹೊಸ ಕೊರೊನಾ ವೈರಸ್ ಪತ್ತೆ: ಯುಕೆ ವಿಮಾನಗಳನ್ನು ನಿರ್ಬಂಧಿಸಿದ ಭಾರತ

ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ನಾಳೆ ಮಧ್ಯರಾತ್ರಿಯಿಂದ ಡಿಸೆಂಬರ್ 31ರವರೆಗೆ ಇಂಗ್ಲೆಂಡ್‌ನಿಂದ ಬರುವ ವಿಮಾನಗಳನ್ನು ನಿಷೇಧಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯು.ಕೆ., ಡೆನ್ಮಾರ್ಕ್ ಮತ್ತು ನೆದರ್ ಲೆಂಡ್ ದೇಶಗಳಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ 7 ದಿನಗಳ ಹೋಮ್ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

 

ಕಳೆದ 14 ದಿನಗಳಲ್ಲಿ ಈ ದೇಶಗಳಿಂದ ರಾಜ್ಯಕ್ಕೆ ಆಗಮಿಸಿರುವ ವ್ಯಕ್ತಿಗಳನ್ನು 24 ಗಂಟೆಗಳಲ್ಲಿ ಪತ್ತೆ ಮಾಡಿ ಆರ್ ಟಿ-ಪಿಸಿಆರ್ ಟೆಸ್ಟ್ ಗೆ ಒಳಪಡಿಸಲಾಗುತ್ತದೆ. ಹೊಸ ಕೊರೊನಾ ವೈರಸ್ ಬಗ್ಗೆ ಯಾವುದೇ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲದಿದ್ದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೆ ಪಾಲಿಸಬೇಕೆಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಗಾರರು ಪ್ರಾರಂಭಿಸಿದ್ದ ಫೇಸ್‌‌ಬುಕ್‌, ಇನ್ಸ್ಟಾಗ್ರಾಮ್ ಖಾತೆಗಳ ಮೇಲಿನ ನಿಷೇಧ ವಾಪಾಸ್!

ನಾಳೆಯಿಂದ ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕಿಯೋಸ್ಕ್ ವ್ಯವಸ್ಥೆ ‌ಮಾಡುತ್ತೇವೆ. ಬೇರೆ ಬೇರೆ ದೇಶಗಳ ಮೂಲಕ ಬರುವವರ ಮೇಲೆ ನಿಗಾ ಇಡಲು, ಪರೀಕ್ಷೆ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲರಿಗೂ ಒಂದು ವಾರ ಕ್ವಾರಂಟೈನ್ ಮಾಡಲಾಗುತ್ತದೆ, ವೈರಸ್ ಬಗ್ಗೆ ಯಾರೂ ಆತಂಕಕ್ಕೆ ಒಳಗಾಗುವುದು ಬೇಡ ಎಂದಿದ್ದಾರೆ.

ಹೊಸ ಸ್ವರೂಪದ ಕೊರೊನಾ ನಿಯಂತ್ರಣಕ್ಕಾಗಿ ಇಂಗ್ಲೆಂಡ್‌ ಸರ್ಕಾರ ಈಗಾಗಲೇ ನಾಲ್ಕನೇ ಹಂತದ ಲಾಕ್‌ಡೌನ್ ಘೋಷಿಸಿ, ಜನರನ್ನು ಮನೆಯಲ್ಲಿಯೇ ಇರುವಂತೆ ಮನವಿ ಮಾಡಿದೆ.

ಅಲ್ಲದೆ, ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ನಿಯಂತ್ರಣದಲ್ಲಿಲ್ಲ. ಅದರ ಹರಡುವಿಕೆಯ ವೇಗ ತೀವ್ರವಾಗಿದೆ. ಈ ಹಿನ್ನೆಲೆ ಈಗ ದೇಶದಲ್ಲಿ ಹೇರಲಾಗಿರುವ ಲಾಕ್‌ಡೌನ್ ತಿಂಗಳುಗಳವರೆಗೆ ಉಳಿಯಬಹುದು ಎಂದು ಬ್ರಿಟನ್ ಆರೋಗ್ಯ ಸಚಿವರು ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

LEAVE A REPLY

Please enter your comment!
Please enter your name here