Homeಮುಖಪುಟಭಾರತೀಯ ವಾಯುಸೇನೆಯ ಮೊದಲ ಮಹಿಳಾ ಅಧಿಕಾರಿ ಡಾ.ವಿಜಯಲಕ್ಷ್ಮಿ ರಮಣನ್ ನಿಧನ!

ಭಾರತೀಯ ವಾಯುಸೇನೆಯ ಮೊದಲ ಮಹಿಳಾ ಅಧಿಕಾರಿ ಡಾ.ವಿಜಯಲಕ್ಷ್ಮಿ ರಮಣನ್ ನಿಧನ!

ವಿಜಯಲಕ್ಷ್ಮಿ ರಮಣನ್ ಅವರಿಗೆ ಆಗಸ್ಟ್ 1972 ರಲ್ಲಿ ವಿಂಗ್ ಕಮಾಂಡರ್ ಹುದ್ದೆಗೆ ಬಡ್ತಿ ನೀಡಲಾಯಿತು. ಇದಾದ 5 ವರ್ಷಗಳ ನಂತರ ವಿಶಿಷ್ಟ್‌ ಸೇವಾ ಪದಕ ನೀಡಿ ಗೌರವಿಸಲಾಯಿತು.

- Advertisement -
- Advertisement -

ನಿವೃತ್ತ ವಿಂಗ್ ಕಮಾಂಡರ್ ಡಾ. ವಿಜಯಲಕ್ಷ್ಮಿ ರಮಣನ್, ಭಾರತೀಯ ವಾಯುಸೇನೆಯ ಮೊದಲ ಮಹಿಳಾ ಅಧಿಕಾರಿ ತಮ್ಮ 96 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಿಶೀಷ್ಠ ಸೇವಾ ಪದಕ (ವಿಎಸ್ಎಂ) ಪಡೆದ ವಿಜಯಲಕ್ಷ್ಮಿ ರಮಣನ್, ವೃದ್ಧಾಪ್ಯ ಸಹಜ ಕಾಯಿಲೆಗಳಿಂದಾಗಿ ತಮ್ಮ ಮಗಳ ಮನೆಯಲ್ಲಿ ನಿಧನರಾದರು ಎಂದು ಅವರ ಅಳಿಯ ಎಸ್.ಎಲ್.ವಿ ನಾರಾಯಣ್ ಹೇಳಿದರು.

ಫೆಬ್ರವರಿ 1924 ರಲ್ಲಿ ಜನಿಸಿದ ಅವರು, ಎಂಬಿಬಿಎಸ್ ಮಾಡಿದ ನಂತರ ಆಗಸ್ಟ್ 22, 1955 ರಂದು ಆರ್ಮಿ ಮೆಡಿಕಲ್ ಕಾರ್ಪ್ಸ್‌ನಲ್ಲಿ ನಿಯೋಜಿಸಲ್ಪಟ್ಟರು. ಇದರ ಜೊತೆಗೆ ವಿವಿಧ ವಾಯುಪಡೆಯ ಆಸ್ಪತ್ರೆಗಳಲ್ಲಿ ಸ್ತ್ರೀರೋಗತಜ್ಞರಾಗಿ ಸೇವೆ ಸಲ್ಲಿಸಿದ್ದು, ಯುದ್ಧಗಳ ಸಮಯದಲ್ಲಿ ಗಾಯಗೊಂಡ ಸೈನಿಕರಿಗೂ ಚಿಕಿತ್ಸೆ ನೀಡುತ್ತಾ ಆಡಳಿತಾತ್ಮಕ ಕರ್ತವ್ಯಗಳನ್ನೂ ನಿರ್ವಹಿಸಿದ್ದರು.

ಇದನ್ನೂ ಓದಿ: ಬಳಸಿದ ಮಾಸ್ಕ್‌ & ಪಿಪಿಇ ಕಿಟ್ ವಿವೇವಾರಿಗೆ ಮಾರ್ಗಸೂಚಿ ಹೊರಡಿಸುವಂತೆ ರಾಜ್ಯಕ್ಕೆ ಹೈಕೋರ್ಟ್ ಸೂಚನೆ

ಇವರಿಗೆ ಆಗಸ್ಟ್ 1972 ರಲ್ಲಿ ವಿಂಗ್ ಕಮಾಂಡರ್ ಹುದ್ದೆಗೆ ಬಡ್ತಿ ನೀಡಲಾಯಿತು. ಇದಾದ 5 ವರ್ಷಗಳ ನಂತರ ವಿಶಿಷ್ಟ್ ಸೇವಾ ಪದಕ ನೀಡಿ ಗೌರವಿಸಲಾಯಿತು. ನಂತರ ಫೆಬ್ರವರಿ, 1979 ರಲ್ಲಿ ನಿವೃತ್ತರಾಗಿದ್ದರು.

ಇವರ ಪತಿ ದಿವಂಗತ ಕೆ ವಿ ರಮಣನ್ ಕೂಡ ಭಾರತೀಯ ವಾಯುಪಡೆಯ ಅಧಿಕಾರಿಯಾಗಿದ್ದರು.

ಇವರಿಗೆ ಮಗಳು ಮತ್ತು ಮಗ ಇದ್ದಾರೆ. ವಿಜಯಲಕ್ಷ್ಮಿ ರಮಣನ್ ಕರ್ನಾಟಕ ಸಂಗೀತದಲ್ಲಿ ತರಬೇತಿ ಪಡೆದಿದ್ದು, ಚಿಕ್ಕ ವಯಸ್ಸಿನಲ್ಲಿಯೇ ಆಲ್ ಇಂಡಿಯಾ ರೇಡಿಯೊದಲ್ಲಿ ಕಲಾವಿದರಾಗಿದ್ದರು.


ಇದನ್ನೂ ಓದಿ: ಚಿಲಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....