Homeಮುಖಪುಟ’ಆಕ್ಟ್-1978’ ಚಿತ್ರ: ಸಾಮಾಜಿಕ ಜಾಗೃತಿ ಮೂಡಿಸುವ ಪೋಸ್ಟರ್‌ಗಳು ವೈರಲ್‌‌!

’ಆಕ್ಟ್-1978’ ಚಿತ್ರ: ಸಾಮಾಜಿಕ ಜಾಗೃತಿ ಮೂಡಿಸುವ ಪೋಸ್ಟರ್‌ಗಳು ವೈರಲ್‌‌!

ಇಲ್ಲಿದೆ ನೋಡಿ ಜನರ ಮೆಚ್ಚುಗೆ ಗಳಿಸಿರುವ ಸಿನಿಮಾ ಪೋಸ್ಟರ್‌‌ಗಳು...

- Advertisement -
- Advertisement -

ರಾಷ್ಟ್ರ ಪ್ರಶಸ್ತಿ ವಿಜೇತ “ನಾತಿ ಚರಾಮಿ” ಚಿತ್ರದ ನಿರ್ದೇಶಕ ಮಾಂಸೋರೆ ನಿರ್ದೇಶಿಸಿರುವ “ಆಕ್ಟ್-1978’’ ಸಿನಿಮಾ ಇದೆ ತಿಂಗಳ 20 ರಂದು ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗುತ್ತಿದ್ದು ಭಾರಿ ನಿರೀಕ್ಷೆಯನ್ನು ಹುಟ್ಟಿಸಿದೆ. ಅದರಲ್ಲೂ ಚಿತ್ರ ತಂಡವು ತಮ್ಮ ಚಿತ್ರದ ಪ್ರಚಾರಕ್ಕೆ ಆಯ್ಕೆ ಮಾಡಿಕೊಂಡಿರುವ ರೀತಿ/ವಿಧಾನ ಭಾರಿ ಮೆಚ್ಚುಗೆ ಗಳಿಸಿದೆ.

ಚಿತ್ರಕ್ಕೆ ಬೆಲ್ ಬಾಟಂ ಖ್ಯಾತಿಯ ಟಿ.ಕೆ.ದಯಾನಂದ್ ಚಿತ್ರಕಥೆ, ಸಂಭಾಷಣೆ ಬರೆದಿದ್ದು, ಆರ್.ದೇವರಾಜ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಯಜ್ಞಾ ಶೆಟ್ಟಿ, ಬಿ.ಸುರೇಶ್, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್, ಶ್ರುತಿ, ದತ್ತಣ್ಣ, ಸಂಚಾರಿ ವಿಜಯ್ ಹೀಗೆ ಅನೇಕ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ಸಮಾಜವು ”ಇದು ಹೀಗೆಯೆ” ಎಂದು ಒಪ್ಪಿಕೊಂಡಿರುವ ಹಲವಾರು ಸಾಮಾಜಿಕ ಸಮಸ್ಯೆಗಳತ್ತ ಗಮನ ಸೆಳೆದಿರುವ ಚಿತ್ರತಂಡವು, “ಅದು ಹಾಗಲ್ಲ ಹೀಗಿದೆ” “ಹೀಗಿರಬೇಕಿತ್ತು” ಎಂಬುವುದರ ಸುತ್ತ ಪೋಸ್ಟರ್‌ಗಳನ್ನು ರಚಿಸಿ, ಸಾಮಾಜಿಕ ಜಾಗೃತಿಯ ಜೊತೆಗೆ ವಿಶಿಷ್ಟ ರೀತಿಯಲ್ಲಿ ಸಿನಿಮಾ ಪ್ರಚಾರವನ್ನು ಕೈಗೊಂಡಿದೆ. ಜನಸಾಮಾನ್ಯರಿಗೆ ಅರಿವಿಲ್ಲದ ಕಾನೂನು-ಕಟ್ಟಳೆಗಳ ಬಗ್ಗೆ ಪೋಸ್ಟರ್‌ಗಳನ್ನು ಮಾಡಿ ಪ್ರಚಾರ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟರ್‌ಗಳು ನಿರಂತರವಾಗಿ ಹರಿದಾಡುತ್ತಾ ವೈರಲಾಗುತ್ತಿದೆ.

ಅವುಗಳ ಕೆಲವು ಝಲಕ್ ಇಲ್ಲಿದೆ…

ಚಿತ್ರದ ಟ್ರೇಲರ್‌ ವಿಕ್ಷೀಸಿ;

ಇದನ್ನೂ ಓದಿ: ‘ಆಕ್ಟ್-1978’ ಟ್ರೇಲರ್ ಮೂಲಕ ಕುತೂಹಲದ ಬಾಂಬಿಟ್ಟ ಮಂಸೋರೆ, ಯಜ್ಞಾ ಶೆಟ್ಟಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್, ಕೆ. ಕವಿತಾಗೆ ನೋ ರಿಲೀಫ್‌: ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

0
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು...