Homeಮುಖಪುಟ'ದೇಶಿ ನಿರ್ಮಿತ ಶಸ್ತ್ರಾಸ್ತ್ರಗಳಿಂದ ಮುಂದಿನ ಯುದ್ಧ ಗೆಲ್ಲುತ್ತೇವೆ': ಸೇನಾ ಮುಖ್ಯಸ್ಥ ಬಿಪಿನ್ ರಾವತ್

‘ದೇಶಿ ನಿರ್ಮಿತ ಶಸ್ತ್ರಾಸ್ತ್ರಗಳಿಂದ ಮುಂದಿನ ಯುದ್ಧ ಗೆಲ್ಲುತ್ತೇವೆ’: ಸೇನಾ ಮುಖ್ಯಸ್ಥ ಬಿಪಿನ್ ರಾವತ್

- Advertisement -
- Advertisement -

ಸ್ಥಳೀಯ ಯುದ್ಧ ವ್ಯವಸ್ಥೆ ಹಾಗೂ ದೇಶೀಯ ಶಸ್ತ್ರಾಸ್ತ್ರಗಳ ಮೂಲಕ ನಾವು ಮುಂದಿನ ಯುದ್ಧವನ್ನು ಗೆಲ್ಲುತ್ತೇವೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ. ಸೈಬರ್, ಬಾಹ್ಯಾಕಾಶ ತಂತ್ರಜ್ಞಾನ, ಲೇಸರ್, ಎಲೆಕ್ಟ್ರಾನಿಕ್ ವಾರ್ ಫೇರ್, ರೊಬೋಟಿಕ್ಸ್ ಅಭಿವೃದ್ಧಿಯಲ್ಲಿ ಭವಿಷ್ಯವಿದೆ ಎಂದಿದ್ದಾರೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) 41 ನೇ ನಿರ್ದೇಶಕರ ಸಮಾವೇಶದಲ್ಲಿ ಮಾತನಾಡಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ದೇಶದಲ್ಲಿ ರಕ್ಷಣಾ ಸೇವೆಗಳ ಅಗತ್ಯತೆಗಳನ್ನು ಪೂರೈಸಲು ಸ್ಥಳೀಯ ಶಸ್ತ್ರಾಸ್ತ್ರ ವ್ಯವಸ್ಥೆಯನ್ನೇ ಬಳಕೆ ಮಾಡಲಾಗುವುದು. ದೇಶೀಯ ಶಸ್ತ್ರಾಸ್ತ್ರ ವ್ಯವಸ್ಥೆಯ ಮೂಲಕವೇ ಮುಂದಿನ ಯುದ್ಧದಲ್ಲಿ ಹೋರಾಟ ಮಾಡಿ ಗೆಲ್ಲುತ್ತೇವೆ. ಸ್ಥಳೀಯವಾಗಿ ತಯಾರಿಸಲಾಗುವ ಶಸ್ತ್ರಾಸ್ತ್ರ, ಯುದ್ಧ ಸಾಮಗ್ರಿಗಳ ತಯಾರಿಕೆಯಲ್ಲಿ ಡಿಆರ್ ಡಿಒ ಪ್ರಗತಿ ಸಾಧಿಸಿದೆ ಎಂದು ರಾವತ್ ಹೇಳಿದ್ದಾರೆ.

ಸರ್ಕಾರಿ ಸಂಸ್ಥೆಯಾಗಿರುವ ಡಿಆರ್ ಡಿಒ, 52 ಪ್ರಯೋಗಾಲಯಗಳ ಸಂಪರ್ಕ ಹೊಂದಿದೆ. ಏರೋನಾಟಿಕ್ಸ್, ಲ್ಯಾಂಡ್ ಕಾಂಬ್ಯಾಟ್ ಎಂಜಿನಿಯರಿಂಗ್, ಶಸ್ತ್ರಾಸ್ತ್ರ, ಎಲೆಕ್ಟ್ರಾನಿಕ್ಸ್, ಕ್ಷಿಪಣಿ ಮತ್ತು ನೌಕಾ ವ್ಯವಸ್ಥೆಗಳಂತಹ ವಿವಿಧ ಕ್ಷೇತ್ರಗಳನ್ನು ಒಳಗೊಂಡ ಮಿಲಿಟರಿಯ ಸಂಶೋಧನೆ ಮತ್ತು ಅಭಿವೃದ್ಧಿಯ ಕೊಂಡಿಯಾಗಿದೆ. ದೇಶದ ರಕ್ಷಣಾ ಉದ್ಯಮ ಈಗ ಮೊಳಕೆಯೊಡೆಯುತ್ತಿದೆ. ಭವಿಷ್ಯದಲ್ಲಿ ಗಡಿಗಳ ಭದ್ರತೆ, ಯುದ್ಧ ಸಮಯದಲ್ಲಿ ಹೋರಾಟ ನಡೆಸಲು ಬೇಕಾದ ಯುದ್ಧ ಸಾಮಗ್ರಿಗಳ ವ್ಯವಸ್ಥೆಯ ಅಭಿವೃದ್ಧಿಯನ್ನು ನೋಡುವ ಸಮಯ ಬಂದಿದೆ. ಸಂಪರ್ಕ ರಹಿತ ಯುದ್ಧ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳುವಂತೆ ರಾವತ್ ಕರೆ ನೀಡಿದ್ದಾರೆ.

ಭವಿಷ್ಯದಲ್ಲಿ ಯುದ್ಧ ಸ್ಥಿತಿಗತಿ ನಿಭಾಯಿಸಲು ಸೈಬರ್, ಬಾಹ್ಯಾಕಾಶ ತಂತ್ರಜ್ಞಾನ, ಲೇಸರ್, ಎಲೆಕ್ಟ್ರಾನಿಕ್ ಮತ್ತು ರೋಬೋಟಿಕ್ ತಂತ್ರಜ್ಞಾನದಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದಬೇಕಿದೆ. ಶಸ್ತ್ರಾಸ್ತ್ರಗಳ ವಿನ್ಯಾಸ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಅಧಿಕಾರಿಗಳು ಕೈಗೊಳ್ಳಬೇಕಿದೆ. ಜಂಟಿ ಯೋಜನೆಗಳಲ್ಲಿ ಯಶಸ್ಸು ಮತ್ತು ವೈಫಲ್ಯಗಳನ್ನೂ ಸಹ ಸಮವಾಗಿ ಹಂಚಿಕೊಳ್ಳಬೇಕಾಗುತ್ತದೆ. ಆಗ ಪರಸ್ಪರರು ಬೊಟ್ಟು ಮಾಡಿ ತೋರಿಸಲಾಗುವುದಿಲ್ಲ ಎಂದರು.

ಅಲ್ಲದೇ ದಿ. ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರನ್ನು ಸ್ಮರಿಸಿದ ರಾವತ್, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಮುದಾಯಕ್ಕೆ ಮಾನದಂಡಗಳನ್ನು ನಿಗದಿಪಡಿಸಲಾಗಿದ್ದು, ವಿಜ್ಞಾನಿಗಳಿಗೆ ಇದು ಒಂದು ಸವಾಲಾಗಿದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...