Homeಮುಖಪುಟಪಾಕಿಸ್ತಾನದ ಗೂಢಚಾರಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿರುವ ಡಿಆರ್‌ಡಿಒ ವಿಜ್ಞಾನಿ ಆರ್‌ಎಸ್‌ಎಸ್ ವ್ಯಕ್ತಿ: ಕಾಂಗ್ರೆಸ್ ಆರೋಪ

ಪಾಕಿಸ್ತಾನದ ಗೂಢಚಾರಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿರುವ ಡಿಆರ್‌ಡಿಒ ವಿಜ್ಞಾನಿ ಆರ್‌ಎಸ್‌ಎಸ್ ವ್ಯಕ್ತಿ: ಕಾಂಗ್ರೆಸ್ ಆರೋಪ

- Advertisement -
- Advertisement -

ಪಾಕಿಸ್ತಾನದ ಬೇಹುಗಾರಿಕೆ ಆರೋಪದ ಮೇಲೆ ಇತ್ತೀಚೆಗೆ ಬಂಧನಕ್ಕೊಳಗಾದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಅಧಿಕಾರಿಯೊಬ್ಬರು ಹಲವು ವರ್ಷಗಳಿಂದ ಆರ್‌ಎಸ್‌ಎಸ್ ಸ್ವಯಂಸೇವಕರಾಗಿದ್ದಾರೆ ಮತ್ತು ಅವರ ಕುಟುಂಬವು ನಾಲ್ಕು ತಲೆಮಾರುಗಳಿಂದ ಸಂಘದೊಂದಿಗೆ ಸಂಬಂಧ ಹೊಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಬುಧವಾರ, ಡಿಆರ್‌ಡಿಒದ ಅಧಿಕಾರಿಯಾಗಿರುವ ಪ್ರದೀಪ್ ಕುರುಲ್ಕರ್ ಅವರ ಯೂಟ್ಯೂಬ್ ಸಂದರ್ಶನವನ್ನು ಎಐಸಿಸಿ ಪ್ರದರ್ಶಿಸಿತು, ಇದರಲ್ಲಿ ಕುರುಲ್ಕರ್ ಅವರು ಮತ್ತು ಅವರ ಕುಟುಂಬ ಸಂಘದೊಂದಿಗಿನ ಸಂಪರ್ಕಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದರು. ಪುಸ್ತಕ ಬಿಡುಗಡೆ ಕಾರ್ಯಕ್ರಮದ ಮತ್ತೊಂದು ವಿಡಿಯೋ ಕ್ಲಿಪ್ಪಿಂಗ್, ವೇದಿಕೆಯ ಮೇಲೆ ಕುಳಿತಿರುವ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ಕುರುಲ್ಕರ್ ಸಭೆಯನ್ನು ಉದ್ದೇಶಿಸಿ ಮಾತನಾಡುವುದನ್ನು ತೋರಿಸಿದೆ. ಇನ್ನೊಂದು ಫೋಟೋದಲ್ಲಿ ಕುರುಲ್ಕರ್ ಅವರು ಸಾವರ್ಕರ್ ಪ್ರತಿಮೆಗೆ ನಮಸ್ಕರಿಸುತ್ತಿರುವುದನ್ನು ತೋರಿಸಿದೆ.

Anjana on Twitter: "A few days ago, DRDO Scientist Pradeep Kurulkar was  arrested by Maha ATS for providing crucial information to Pak Intelligence  Operative. He is a Savarkar fan and RSS member.

“ಡಿಆರ್‌ಡಿಒದ ‘ಪಾಕಿಸ್ತಾನಿ ಗೂಢಚಾರ’ ವಿಜ್ಞಾನಿ ಮತ್ತು ದೇಶದ್ರೋಹಿ ಪ್ರದೀಪ್ ಕುರುಲ್ಕರ್ ಆರೆಸ್ಸೆಸ್ ನ ನಿಕಟ ಸಂಪರ್ಕ ಹೊಂದಿದ್ದಾರೆ. ಆರ್‌ಎಸ್‌ಎಸ್‌ನೊಂದಿಗಿನ ಕುರುಲ್ಕರ್ ಅವರ ಒಡನಾಟವು ತಲೆಮಾರುಗಳ ಹಿಂದಿನದು ಎಂದು ಅವರು ಕಳೆದ ವರ್ಷ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ” ಎಂದು ಎಐಸಿಸಿ ವಕ್ತಾರ ಪವನ್ ಖೇರಾ ಅಧಿಕೃತ ಬ್ರೀಫಿಂಗ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ, ಆರ್‌ಎಸ್‌ಎಸ್‌ನಿಂದ ಭಾರತದ ಪ್ರಜಾಪ್ರಭುತ್ವದ ಮೇಲೆ ದಾಳಿ: ರಾಹುಲ್ ವಾಗ್ದಾಳಿ

”ಅವರ ತಾತ ಆರ್‌ಎಸ್‌ಎಸ್ ಕಾರ್ಯಕರ್ತರಾಗಿದ್ದರು, ಅವರು ಗಣಿತಶಾಸ್ತ್ರಜ್ಞರಾಗಿ ಕೆಲಸ ಮಾಡಿದರು ಮತ್ತು ಅವರ ತಂದೆ ಸಂಘಕ್ಕಾಗಿ ತಮ್ಮ ಕೆಲಸವನ್ನು ನಿರ್ವಹಿಸುತ್ತಿದ್ದರು. ಅವರು ಪುಣೆಯ ಆರ್‌ಎಸ್‌ಎಸ್ ಶಾಖೆಯ ಖಜಾಂಚಿಯಾಗಿದ್ದರು. ಕುರುಲ್ಕರ್ ಗಣಿತ ಮತ್ತು ವಿಜ್ಞಾನ ಶಿಕ್ಷಕರಾಗಿದ್ದರು ಮತ್ತು ಅವರು ಐದು ವರ್ಷದವರಾಗಿನಿಂದಲೂ ಶಾಖೆಗೆ ಹೋಗುತ್ತಿದ್ದರು. ಅವರಿಗೆ ಶಾಖೆಯು ದೈನಂದಿನ ದಿನಚರಿಯ ಅವಿಭಾಜ್ಯ ಅಂಗವಾಗಿತ್ತು. ಇದು ಅತ್ಯಂತ ಗಂಭೀರವಾದ ವಿಷಯವಾಗಿದೆ, ಇದು ಬಿಜೆಪಿ-ಆರ್‌ಎಸ್‌ಎಸ್‌ನ ದೇಶವಿರೋಧಿ ಮುಖವನ್ನು ಬಹಿರಂಗಪಡಿಸುತ್ತದೆ. ಈ ಪ್ರಕರಣವು ಭಾರತದ ರಾಷ್ಟ್ರೀಯ ಭದ್ರತೆಗೆ ನೇರವಾಗಿ ಅಪಾಯವನ್ನುಂಟುಮಾಡುವ ಆರ್‌ಎಸ್‌ಎಸ್ ನಾಯಕನಿಗೆ ಸಂಬಂಧಿಸಿದ ವಿಚಾರವಾಗಿದೆ” ಎಂದು ಪವನ್ ಖಾರಾ ಹೇಳಿದರು.

”ಕುರುಲ್ಕರ್ ಮತ್ತು ಆರ್‌ಎಸ್‌ಎಸ್ ನಡುವಿನ ಸಂಬಂಧವೇನು ಎಂಬುದನ್ನು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಬೇಕು. ಅನೇಕ ಬಾರಿ ವಿದೇಶಕ್ಕೆ ಹೋಗಿದ್ದ ಕುರುಲ್ಕರ್ ಆರ್‌ಎಸ್‌ಎಸ್ ಅಥವಾ ಪಾಕಿಸ್ತಾನಕ್ಕೆ ಸ್ವಂತ ಬೇಹುಗಾರಿಕೆಗೆ ಹೋಗಿದ್ದಾರಾ? ಇದು ‘ಟೂಲ್‌ಕಿಟ್’ನ ಭಾಗವೇ? ಭಾರತ ವಿರೋಧಿ ಚಟುವಟಿಕೆಗಳಲ್ಲಿ ಆರ್‌ಎಸ್‌ಎಸ್-ಬಿಜೆಪಿಯ ಟೂಲ್‌ಕಿಟ್ ಏನು?” ಖೇರಾ ಗಂಭೀರ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...