Homeಕರ್ನಾಟಕಗಣಿ-ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣ: ಓರ್ವನ ಬಂಧನ

ಗಣಿ-ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣ: ಓರ್ವನ ಬಂಧನ

- Advertisement -
- Advertisement -

ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಗಣಿ-ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಪ್ರತಿಮಾ ಕೆಎಸ್‌ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಿರಣ್ ಬಂಧಿತ ಆರೋಪಿ. ಈತ ಈ ಮೊದಲು ಪ್ರತಿಮಾ ಕೆಎಸ್‌ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈತನನ್ನು 10ದಿನಗಳ ಮೊದಲು ಕೆಲಸದಿಂದ ತೆಗೆದು ಹಾಕಲಾಗಿತ್ತು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್ ಹೇಳಿದ್ದಾರೆ.

ಕಿರಣ್‌ ಕಳೆದ 5 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಡ್ರೈವರ್‌ ಆಗಿ ಕೆಲಸ ಮಾಡುತ್ತಿದ್ದ. ಆತನಿಗೆ ಪ್ರತಿಮಾ ಅವರು ಕೆಲಸದಿಂದ ತೆಗೆದು ಹಾಕಿದ್ದರು. ಇದರಿಂದಾಗಿ ಆಕೆಯನ್ನು ಕೊಂದಿದ್ದಾನೆ ಎಂದು ತನಿಖೆಯ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿದೆ. ಈತ ಪ್ರತಿಮಾ ಅವರನ್ನು ಕೊಲೆ ಮಾಡಿದ ಬಳಿಕ ಬೆಂಗಳೂರಿನಿಂದ 200ಕಿ.ಮೀ ದೂರದಲ್ಲಿರುವ ಚಾಮರಾಜನಗರಕ್ಕೆ ಪರಾರಿಯಾಗಿದ್ದಾನೆ. ಅಲ್ಲಿಂದ ಪೊಲೀಸರು ಈತನಿಗೆ ಬಂಧಿಸಿದ್ದಾರೆ.

ಪ್ರತಿಮಾ ಅವರ ದೇಹವು ಗಂಟಲು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಭಾನುವಾರ ಬೆಳಿಗ್ಗೆ 8.30ರ ಸುಮಾರಿಗೆ ಆಕೆಯ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಪ್ರಾಥಮಿಕ ವಿಚಾರಣೆಯ ಪ್ರಕಾರ ಅವರು ಶನಿವಾರ ಸಂಜೆ 6 ಗಂಟೆಯವರೆಗೆ ಕಚೇರಿಯಲ್ಲಿದ್ದರು. ನಂತರ ಕಿರಣ್ ಬದಲಿಗೆ ನೇಮಕಗೊಂಡ ಚಾಲಕ ಅವರನ್ನು ಮನೆಗೆ ಬಿಟ್ಟು ಬಂದಿದ್ದರು.

ಪ್ರತಿಮಾ ಅವರು ದೊಡ್ಡಕಲ್ಲಸಂದ್ರದ ಅಪಾರ್ಟ್ಮೆಂಟ್‌ವೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಇವರು ವಿವಾಹಿತರಾಗಿದ್ದು ಪ್ರತಿಮಾ ಪತಿ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಿದ್ದರು. ರಾತ್ರಿ ಪ್ರತಿಮಾ ಅವರಿಗೆ ಸಹೋದರ ಕರೆ ಮಾಡಿದ್ದ, ಆದರೆ ಕರೆ ಸ್ವೀಕರಿಸಿರಲಿಲ್ಲ. ಬೆಳಿಗ್ಗೆ ಮನೆ ಬಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

2017ರಲ್ಲಿ ರಾಮನಗರದಲ್ಲಿ 3 ವರ್ಷ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ಪ್ರತಿಮಾ ಅವರು ಬಳಿಕ ಬೆಂಗಳೂರಿಗೆ ವರ್ಗಾವಣೆಯಾಗಿದ್ದರು. ಬೆಂಗಳೂರಿನ ಗ್ರಾಮಾಂತರ ಭೂಗರ್ಭ ಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದನ್ನು ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...