HomeUncategorizedಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ; 16 ಜನರ ವಿರುದ್ಧ ಕೇಸ್ ದಾಖಲು

ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ; 16 ಜನರ ವಿರುದ್ಧ ಕೇಸ್ ದಾಖಲು

- Advertisement -
- Advertisement -

ಮಧ್ಯಪಾನ ಮಾಡಿ ಶಾಲಾ ಬಸ್‌ಗಳನ್ನು ಓಡಿಸುತ್ತಿದ್ದ 16 ಚಾಲಕರನ್ನು ಪತ್ತೆಹಚ್ಚಿರುವ ಬೆಂಗಳೂರು ಟ್ರಾಫಿಕ್ ಪೊಲೀಸರು, ಕೇಸ್ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.

‘ಇಂದು, “ಡ್ರಿಂಕ್ ಅಂಡ್ ಡ್ರೈವ್” ಉಲ್ಲಂಘನೆಗಾಗಿ ಶಾಲಾ ವಾಹನ ಚಾಲಕರ ವಿರುದ್ಧ ಬೆಳಗ್ಗೆ ಏಳು ಗಂಟೆಯಿಂದ 9:30ರ ನಡುವೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಒಟ್ಟು 3414 ವಾಹನಗಳನ್ನು ತಪಾಸಣೆ ನಡೆಸಲಾಗಿದ್ದು, 16 ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವುದು ಪತ್ತೆಯಾಗಿದೆ. ಅಂತಹ ಚಾಲಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವರ ಚಾಲನಾ ಪರವಾನಗಿಯನ್ನು (ಡಿಎಲ್) ಅಮಾನತುಗೊಳಿಸಲು ಆರ್‍‌ಟಿಒಗೆ ಕಳುಹಿಸಲಾಗಿದೆ’ ಎಂದು ಜಂಟಿ ಪೊಲೀಸ್ ಆಯುಕ್ತರು (ಟ್ರಾಫಿಕ್) ತಿಳಿಸಿದ್ದಾರೆ.

ಇಂದು ಬೆಳಗ್ಗೆ 7ರಿಂದ 9.30ರವರೆಗೆ ಟ್ರಾಫಿಕ್ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು 3,414 ಶಾಲಾ ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಸದರಲ್ಲಿ 16 ಚಾಲಕರು ಬೆಳ್ಳಂಬೆಳಿಗ್ಗೆ ಮದ್ಯಸೇವಿಸಿ ಶಾಲಾ ಮಕ್ಕಳ ವಾಹನ ಚಾಲನೆ ಮಾಡಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಮದ್ಯಪಾನ ಮಾಡಿದ್ದ ಚಾಲಕರ ವಿರುದ್ಧ ಸಂಚಾರಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಕುಡಿದು ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದ್ದುಮ 16 ಚಾಲಕರ ವಾಹನ ಪರವಾನಗಿ ರದ್ದುಗೊಳಿಸುವಂತೆ ಆರ್ ಟಿಒ ಇಲಾಖೆಗೆ ಶಿಫಾರಸು ಮಾಡಲಾಗಿದೆ.

ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಸಂಚಾರ ಜಂಟಿ ಪೊಲೀಸ್ ಆಯುಕ್ತ ಎಂ. ಎನ್.ಅನುಚೇತ್, ‘ಇಂದು ಬೆಳಗ್ಗೆ ನಮ್ಮ ಸಂಚಾರ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಹಲವು ಶಾಲಾ ವಾಹನ ಚಾಲಕರನ್ನ ತಪಾಸಣೆ ಮಾಡಲಾಗಿದ್ದು, ಮೂರು ಸಾವಿರಕ್ಕೂ ಹೆಚ್ಚು ವಾಹನಗಳನ್ನ ಪರಿಶೀಲಿಸಲಾಗಿದೆ. ಈ ವೇಳೆ 16 ಚಾಲಕರು ಕುಡಿದು ವಾಹನ ಚಾಲನೆ ಮಾಡಿರೋದು ಕಂಡು ಬಂದಿದೆ. ಅವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಕ್ರಮ ಕೈಗೊಳ್ಳಲಾಗ್ತಿದೆ. ಅವರ ಚಾಲನಾ ಪರವಾನಗಿ (ಡಿಎಲ್) ಅಮಾನತು ಮಾಡುವಂತೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗಿದೆ. ಶಾಲಾ ಆಡಳಿತ ಮಂಡಳಿಗಳಿಯಿಂದಲೂ ಈ ಬಗ್ಗೆ ಸಮಜಾಯಿಷಿ ಕೇಳಲಾಗಿದ್ದು, ಅವರು ನೀಡಿದ ಮಾಹಿತಿ ಆಧಾರದಲ್ಲಿ ನಾವು ಸಾರಿಗೆ ಇಲಾಖೆಗೆ ವರದಿ ಸಲ್ಲಿಸುತ್ತೇವೆ. ಕೆಲ ಶಾಲಾ ಆಡಳಿತ ಮಂಡಳಿಗಳು ತಮ್ಮ ಖಾಸಗಿ ವಾಹನಗಳನ್ನ ಮಕ್ಕಳ ಸಂಚಾರಕ್ಕೆ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕೂಡ ಸಾರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ; ವಿದ್ಯಾರ್ಥಿಗಳನ್ನು ಭೇಟಿಯಾಗಲು ಬಿಜೆಪಿ ಸರ್ಕಾರ ನನಗೆ ಅವಕಾಶ ನೀಡ್ತಿಲ್ಲ: ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...