Homeಕರ್ನಾಟಕಅಂಬೇಡ್ಕರ್‌ ಕುರಿತ ಪದ್ಯ ತೆರವು; ಕೆದಕಿದಷ್ಟೂ ಸಿಗುತ್ತಿವೆ ಚಕ್ರತೀರ್ಥ ಸಮಿತಿಯ ಹುಳುಕು!

ಅಂಬೇಡ್ಕರ್‌ ಕುರಿತ ಪದ್ಯ ತೆರವು; ಕೆದಕಿದಷ್ಟೂ ಸಿಗುತ್ತಿವೆ ಚಕ್ರತೀರ್ಥ ಸಮಿತಿಯ ಹುಳುಕು!

- Advertisement -
- Advertisement -

ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ನೇತೃತ್ವದಲ್ಲಿ ನಡೆದಿರುವ ಪಠ್ಯಪುಸ್ತಕ ಪರಿಶೀಲನೆಯಲ್ಲಿ ಹಲವಾರು ತಪ್ಪುಗಳು ಕಂಡು ಬರುತ್ತಿವೆ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಸಂಬಂಧಿಸಿದ ಪಠ್ಯಗಳ ವಿಚಾರದಲ್ಲಿ ಸಮಿತಿ ಅಸಡ್ಡೆಯ ತೋರಿರುವುದು ಸ್ಪಷ್ಟವಾಗುತ್ತಿದೆ.

ಚೆನ್ನಣ್ಣ ವಾಲೀಕಾರ ಅವರು ಬರೆದಿರುವ ‘ನೀ ಹೋದ ಮರುದಿನ’ ಎಂಬ ಪದ್ಯವನ್ನು ಆರನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಪಠ್ಯಪರಿಶೀಲನಾ ಸಮಿತಿ ಅಳವಡಿಸಿತ್ತು. ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತ ಈ ಪದ್ಯವನ್ನು ನೂತನ ಪಠ್ಯಪುಸ್ತಕಗಳ ಪರಿಶೀಲನಾ ಸಮಿತಿಯು ತೆಗೆದುಹಾಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಶೋಷಿತ ಸಮುದಾಯಗಳಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಆದರೆ ಶೋಷಿತ ಸಮುದಾಯ ಎದುರಿಸುತ್ತಿರುವ ಅವಮಾನ, ಅನ್ಯಾಯ, ಅಸ್ಪಶ್ಯತೆಯೇನೂ ಬಾಬಾ ಸಾಹೇಬರು ತೀರಿಕೊಂಡ ಬಳಿಕ ಕಡಿಮೆಯಾಗಿಲ್ಲ. ಅದು ಮುಂದುವರಿಯುತ್ತಲೇ ಇದೆ. ಸಂವಿಧಾನದ ವಿಧಿ 17ರ ಪ್ರಕಾರ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಿದ್ದರೂ ಅದು ಇನ್ನೂ ಸಮಾಜದಲ್ಲಿ ಜೀವಂತವಿದೆ. ಇಳೆಯ ಮಕ್ಕಳಲ್ಲಿ ಆರಂಭದಲ್ಲೇ ಈ ಜಾತಿ ವ್ಯವಸ್ಥೆಯ ನೋವು, ಅಸಮಾನತೆ, ಸಾಮಾಜಿಕ ನ್ಯಾಯದ ಅರಿವುಗಳನ್ನು ತುಂಬುತ್ತಾ ಹೋದರೆ ಶೋಷಿತ ಸಮುದಾಯ ಈ ಕಷ್ಟಗಳಿಂದ ಹೊರಬರಬಹುದು” ಎಂಬುದು ಎಂಥವರಿಗೂ ಅರ್ಥವಾಗುವ ಸಂಗತಿ. ಆದರೆ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಬಾಬಾ ಸಾಹೇಬರ ಕುರಿತ ಈ ಕಾವ್ಯವನ್ನೇ ತೆಗೆದುಹಾಕಿ ಅಸ್ಪಶ್ಯತೆಯನ್ನು ಆಚರಿಸಿದಂತೆ ಕಾಣುತ್ತಿದೆ!

ಬಾಬಾ ಸಾಹೇಬರ ವಿಷಯದಲ್ಲಿ ಹಲವು ತಿರುಚುವಿಕೆ

‘ಡಾ.ಬಿ.ಆರ್‌.ಅಂಬೇಡ್ಕರ್’ ಅವರಿಗೆ ಸಂವಿಧಾನ ಶಿಲ್ಪಿ ಎಂಬ ಬಿರುದು ಇರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಆದರೆ ಅದನ್ನು ಚಕ್ರತೀರ್ಥ ಸಮಿತಿ ಮರೆಮಾಚಿದೆ.

‘ಕರಡು ರಚನಾ ಸಮಿತಿ’ ಉಪಶೀರ್ಷಿಕೆಯಲ್ಲಿ ನೀಡಲಾಗಿದ್ದ ಹಳೆಯ ಪಠ್ಯದಲ್ಲಿ ಹೀಗಿತ್ತು: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು 22 ಸಮಿತಿಗಳನ್ನು, 5 ಉಪಸಮಿತಿಗಳನ್ನು ಹೊಂದಿತ್ತು. ಇವುಗಳಲ್ಲಿ ಪ್ರಮುಖವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ರವರು ಇದರ ಅಧ್ಯಕ್ಷರಾಗಿದ್ದರು. ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ. ಈ ಕರಡು ಸಮಿತಿಯಲ್ಲಿ ಎನ್.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ, ಮಹಮ್ಮದ್‌ ಸಾದುಲ್ಲಾ, ಸಿ.ಮಾಧವರಾವ್‌ ಅವರು ಸದಸ್ಯರಾಗಿದ್ದರು.”

ಇದನ್ನೂ ಓದಿರಿ: ‘ಕನ್ನಡ ರಾಜ್ಯೋತ್ಸವ’ ಕುರಿತ ಪಾಠವನ್ನೇ ಕಿತ್ತುಬಿಸಾಡಿದ ಚಕ್ರತೀರ್ಥ ಸಮಿತಿ!

ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿಯು ‘ಕರಡು ಸಮಿತಿ’ ಉಪಶೀರ್ಷಿಕೆಯಲ್ಲಿದ ವಿಷಯಗಳನ್ನು ಹೀಗೆ ಪರಿಷ್ಕರಣೆ ಮಾಡಿದೆ: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು ಅನೇಕ ಸಮಿತಿಗಳನ್ನು ರಚಿಸಿತು. ಅವುಗಳಲ್ಲಿ ಮುಖ್ಯವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ ಅದರ ಅಧ್ಯಕ್ಷರಾಗಿದ್ದರು. ಈ ಸಮಿತಿಯಲ್ಲಿ ಎನ್‌.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾದಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ ಮುಂತಾದ ಮುಸ್ಸದ್ಧಿಗಳು ಸದಸ್ಯರುಗಳಾಗಿದ್ದರು”- ಇಷ್ಟು ಮಾತ್ರ ಉಳಿಸಿಕೊಂಡು “ಇವರು (ಅಂಬೇಡ್ಕರ್‌) ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ” ಎಂಬ ಸಾಲನ್ನು ಕಿತ್ತುಹಾಕಲಾಗಿದೆ. ಇಲ್ಲಿ ಮಹಮ್ಮದ್‌ ಸಾದುಲ್ಲಾ, ಸಿ.ಮಾಧವರಾವ್‌ ಅವರ ಹೆಸರನ್ನು ಚಕ್ರತೀರ್ಥ ನಮೂದಿಸದೇ ಇರುವುದು ಏತಕ್ಕೆ ಎಂಬುದೂ ಚರ್ಚೆಯಾಗುತ್ತಿದೆ.

ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹಿಂದೂ ಧರ್ಮದಲ್ಲಿನ ಜಾತಿ ವ್ಯವಸ್ಥೆಯಿಂದ ನೊಂದು, ಜಾತಿ ವ್ಯವಸ್ಥೆಯನ್ನು ವಿರೋಧಿಸಿದ ಬೌದ್ಧಧರ್ಮಕ್ಕೆ ಮರುಳುತ್ತಾರೆ. ಈ ವಿಷಯವನ್ನು ಹಳೆಯ ಪಠ್ಯದಲ್ಲಿ ಸೇರಿಸಲಾಗಿತ್ತು. ಆದರೆ ಹೊಸ ಪಠ್ಯದಲ್ಲಿ ಈ ವಿಷಯವನ್ನು ತೆರವು ಮಾಡಲಾಗಿದೆ. ಹೀಗೆ ಅಂಬೇಡ್ಕರ್‌ ಅವರಿಗೆ ಸಂಬಂಧಿಸಿದ ವಿಷಯಗಳನ್ನು ತಿರುಚುವ ಅಥವಾ ಪಠ್ಯದಿಂದಲೇ ಕೈಬಿಡುವ ಕೆಲಸವನ್ನು ಚಕ್ರತೀರ್ಥ ಸಮಿತಿ ಮಾಡಿದೆ. ಹುಡುಕಿದಷ್ಟೂ ಹುಳುಕುಗಳು ಕಣ್ಣಿಗೆ ರಾಚತೊಡಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...