Homeಕರ್ನಾಟಕಬರ ಪರಿಹಾರ ಬಿಡುಗಡೆಯಲ್ಲಿ ರಾಜ್ಯಕ್ಕೆ ಅನ್ಯಾಯ: ವಿಧಾನಸೌಧದ ಆವರಣದಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬರ ಪರಿಹಾರ ಬಿಡುಗಡೆಯಲ್ಲಿ ರಾಜ್ಯಕ್ಕೆ ಅನ್ಯಾಯ: ವಿಧಾನಸೌಧದ ಆವರಣದಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸರಕಾರದ ಬರ ಪರಿಹಾರ ನೀಡಿಕೆ ಅನ್ಯಾಯದ ವಿರುದ್ಧ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ ಡಿಕೆ ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಅವರ ನೇತೃತ್ವದಲ್ಲಿ ವಿಧಾನಸೌಧದ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.

ಎನ್‌ಡಿಆರ್‌ಎಫ್‌ ನಿಯಮವಾಳಿ ಪ್ರಕಾರ, ರಾಜ್ಯಕ್ಕೆ 18,171 ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ₹3,498 ಕೋಟಿಗೆ ಅನುಮೋದನೆ ನೀಡಿ,  3,454 ಕೋಟಿ ಬಿಡುಗಡೆ ಮಾಡಿದೆ. ಇದು ಒಟ್ಟು ಬಾಕಿ ಮೊತ್ತದ ಶೇ.20ಕ್ಕಿಂತ ಕಡಿಮೆಯಾಗಿದ್ದು, ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇದಲ್ಲದೆ ಇಂದು ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಪ್ರತಿಭಟನಾಕಾರರು ಗೋ-ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಕ್ಕೂಟ ವ್ಯವಸ್ಥೆಯಲ್ಲಿ ನಾವಿದ್ದೇವೆ, ಈ ವ್ಯವಸ್ಥೆಯಲ್ಲಿ ಬರ ಬಂದಾಗ ಪರಿಹಾರ ನೀಡುವುದು ಕೇಂದ್ರದ ಕರ್ತವ್ಯ, ನಾವು ಭಿಕ್ಷೆ ಬೇಡುತ್ತಿಲ್ಲ, 223 ತಾಲೂಕುಗಳಲ್ಲಿ ಬರಗಳ ಇದೆ, 100ವರ್ಷಗಳಲ್ಲಿ ಇದು ಭೀಕರ ಬರಗಾಲವಾಗಿದೆ. ನಾನೇ ಕುದ್ದು ಪ್ರಧಾನಿ, ಅಮಿತ್‌ ಶಾಗೆ ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಆಗ್ರಹಿಸಿದ್ದೆವು, ಆದರೆ ಅವರು ಪರಿಹಾರ ಕೊಟ್ಟಿಲ್ಲ, ಅದಕ್ಕೆ ನಾವು ಅನಿವಾರ್ಯವಾಗಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದೇವೆ. 35,000ಕೋಟಿಗೂ ಹೆಚ್ಚು ಮೌಲ್ಯದ ಬೆಳೆ ನಷ್ಟವಾಗಿದೆ. ಎನ್‌ಡಿಆರ್‌ಎಫ್ ಪ್ರಕಾರ, 18,172 ಕೋಟಿ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಸೂಚಿಸಲಾಗಿತ್ತು. ಈಗ 19%ಕ್ಕಿಂತ ಕಡಿಮೆ ಪರಿಹಾರ ನೀಡಿದ್ದಾರೆ, ಇದು ಬಹಳ ಕಡಿಮೆಯಾಗಿದೆ. ಇದರಿಂದ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಕರ್ನಾಟಕಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಜನರಿಗೆ ಖಾಲಿ ಚೊಂಬು ತಂದಿದ್ದಾರೆ. ಕರ್ನಾಟಕ ಕೇಳಿದ್ದ 18,172 ಕೋಟಿ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರ ಸೆಪ್ರೆಂಬರ್ 2023ರಿಂದಲೂ ನಿರಾಕರಿಸುತ್ತಲೇ ಬಂದಿದೆ. ಸುಪ್ರೀಂ ಕೋರ್ಟ್ ಹೇಳಿದ ಬಳಿಕವೂ ಇವರು ರಾಜ್ಯದ ರೈತರ ಕೈಗೆ ಕೊಟ್ಟಿದ್ದು ಲಾಲಿಪಾಪ್ ಅಷ್ಟೇ! ನಾವೇನು ಭಿಕ್ಷೆ ಕೇಳುತ್ತಿಲ್ಲ, ಬರ ಪರಿಹಾರ ರೈತರ ಹಕ್ಕು ಎಂದು ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್‌, ಬರಗಾಲದಿಂದ ಸಂಕಷ್ಟದಲ್ಲಿರುವ ರೈತರು, ಕಾರ್ಮಿಕರು, ಕೂಲಿ ಕೆಲಸಗಾರರಿಗಾಗಿ ನಾವು ಕೇಳುತ್ತಿದ್ದೇವೆ. ರಾಜ್ಯ ಸರ್ಕಾರದಿಂದ ನಾವು ಎಷ್ಟು ಸಾಧ್ಯವೋ ಅಷ್ಟು ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದೇವೆ. ಆದರೆ ಕೇಂದ್ರ ಸರ್ಕಾರ 7 ತಿಂಗಳು ಕಳೆದ ಬಳಿಕ ಕೇವಲ 3,454 ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಬರ ಪರಿಹಾರಕ್ಕಾಗಿ ಆಗ್ರಹಿಸಿ ನಮ್ಮ ಹೋರಾಟ ನ್ಯಾಯಾಲಯದಲ್ಲಿ ಹಾಗೂ ಜನರ ನಡುವೆಯೂ ಮುಂದುವರೆಯಲಿದೆ. ನಾವು ಅವರ ಮನೆಯ ಹಣ ಕೇಳುತ್ತಿಲ್ಲ, ನನಗೆ ಕೊಡಿ, ಸಿದ್ದರಾಮಯ್ಯ ಅವರಿಗೆ ಕೊಡಿ ಎಂದು ಕೇಳ್ತಿದ್ದೀವಾ? ರಾಜ್ಯಕ್ಕೆ ಭಿಕ್ಷೆ ಬೇಡ, ಇದು ನಮ್ಮ ಹಕ್ಕು, ಅದನ್ನು ನಾವು ಕೇಳುತ್ತಿದ್ದೇವೆ, ನಮಗೆ ಸೆಪ್ಟಂಬರ್‌ನಿಂದ ಇಲ್ಲಿಯವರೆಗೆ ಆಗುತ್ತಿರುವ ನಷ್ಟವನ್ನು ಸೇರಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಚಿವರಾದ ಡಾ.ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಎನ್‌. ಚಲುವರಾಯಸ್ವಾಮಿ, ದಿನೇಶ್ ಗುಂಡೂರಾವ್, ಕೆ. ಎಚ್. ಮುನಿಯಪ್ಪ, ಶಾಸಕರಾದ ಎಚ್. ಸಿ. ಬಾಲಕೃಷ್ಣ, ರಿಜ್ವಾನ್ ಅರ್ಷದ್ ಮತ್ತಿತರರು ಭಾಗವಹಿಸಿದ್ದರು.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...