Homeಕರ್ನಾಟಕರಾಜ್ಯ ಸರಕಾರ ಕೇಳಿದ ಬರ ಪರಿಹಾರದಲ್ಲಿ ಶೇ.20ಕ್ಕಿಂತ ಕಡಿಮೆ ಬಿಡುಗಡೆ: ಕೇಂದ್ರ ಸರ್ಕಾರದ ವಿರುದ್ಧ ಕೃಷ್ಣ...

ರಾಜ್ಯ ಸರಕಾರ ಕೇಳಿದ ಬರ ಪರಿಹಾರದಲ್ಲಿ ಶೇ.20ಕ್ಕಿಂತ ಕಡಿಮೆ ಬಿಡುಗಡೆ: ಕೇಂದ್ರ ಸರ್ಕಾರದ ವಿರುದ್ಧ ಕೃಷ್ಣ ಬೈರೇಗೌಡ ವಾಗ್ಧಾಳಿ

- Advertisement -
- Advertisement -

ರಾಜ್ಯಕ್ಕೆ 18,171.44 ಕೋಟಿ ರೂ.ಬರ ಪರಿಹಾರ ಬಿಡಗಡೆಗೆ ಆಗ್ರಹಿಸಿ ಕರ್ನಾಟಕ ಸರಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಈ ಬಗ್ಗೆ ಸಮಸ್ಯೆಯನ್ನು ಸೌಹಾರ್ಧಯುತವಾಗಿ ಪರಿಹರಿಸಿ ಎಂದು ಬರ ಪರಿಹಾರ ಬಿಡುಗಡೆಗೆ ಸುಪ್ರೀಂಕೋರ್ಟ್‌ ಸೂಚಿಸಿತ್ತು. ಆದರೆ ಕೇಂದ್ರ ಸರಕಾರ ಬರೀ 3,498 ಕೋಟಿ ಮಾತ್ರ ಬಿಡುಗಡೆ ಮಾಡಿದ್ದು, ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಮುಂದುವರಿದಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಚಿವ ಕೃಷ್ಣ ಬೈರೇಗೌಡ, ಕೇಂದ್ರದ ಎನ್‌ಡಿಆರ್‌ಆಫ್ ನಿಯಮಗಳ ಪ್ರಕಾರ ರಾಜ್ಯಕ್ಕೆ 18,171.44 ಕೋಟಿ ಬರ ಪರಿಹಾರ ಹಣ ನೀಡಬೇಕು. ಆದರೆ, ಕೇಂದ್ರ ಸರ್ಕಾರ ಕೇವಲ 3,498 ಕೋಟಿ ರೂ. ಮಾತ್ರ ಮಂಜೂರು ಮಾಡಿದೆ. ಈ ಹಣದ ಪ್ರಮಾಣ ನಾವು ಕೇಳಿದ್ದ ಪರಿಹಾರದ ಹಣಕ್ಕಿಂತ ಶೇ.20ಕ್ಕಿಂತ ಕಡಿಮೆ. ಕರ್ನಾಟಕ ಪ್ರಸ್ತುತ ಅತ್ಯಂತ ಭೀಕರ ಬರಗಾಲವನ್ನು ಎದುರಿಸುತ್ತಿದೆ. 240 ತಾಲೂಕುಗಳಲ್ಲಿ 223 ತಾಲೂಕುಗಳು ಭೀಕರ ಬರಗಾಲದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಬೆನ್ನಿಗೆ ನಿಲ್ಲಬೇಕಿದ್ದ ಕೇಂದ್ರ ಸರ್ಕಾರದಿಂದ ಕೇವಲ ಶೇ.20 ರಷ್ಟು ಹಣವನ್ನು ಮಾತ್ರ  ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

ಕಾನೂನಾತ್ಮಕವಾಗಿ ಕೇಂದ್ರ ಸರಕಾರ ಹಣ ನೀಡಬೇಕು. ರಾಜ್ಯಕ್ಕೆ ಬರಬೇಕಿರುವ ಹಣವನ್ನು ಬಿಡುಗಡೆ ಮಾಡಬೇಕು. ಸುಪ್ರೀಂಕೋರ್ಟ್‌ಗೆ ಹೋದ ಕಾರಣ ಕೇಂದ್ರ ಹಣ ನೀಡಿದೆ. ಇಲ್ಲವಾದಲ್ಲಿ ಹಣ ನೀಡುತ್ತಿರಲಿಲ್ಲ. ಇದರ ಸಂಪೂರ್ಣ ಹಣವನ್ನು ರೈತರಿಗೆ ಹಸ್ತಾಂತರಿಸುತ್ತೇವೆ. ನಮಗೆ ಇನ್ನೂ ಹಣ ಬಂದಿಲ್ಲ. ವಾರದೊಳಗೆ ಹಣ ಬಂದ ತಕ್ಷಣ ರೈತರಿಗೆ ತಲುಪಿಸುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂಕೋರ್ಟ್‌ಗೆ ಧನ್ಯವಾದಗಳು. ಎನ್‌ಡಿಆರ್‌ಎಫ್‌ ನಿಯಮವಾಳಿ ಪ್ರಕಾರ, ರಾಜ್ಯಕ್ಕೆ ರೂ.18,171 ಕೋಟಿ ರೂ. ನೀಡಬೇಕಾಗಿದೆ, ಆದರೆ ಕೇಂದ್ರ ಸರ್ಕಾರ ಕೇವಲ ರೂ. 3498.98 ಕೋಟಿ ನೀಡಿದೆ. ಬರ ಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ಕೇಂದ್ರ ಸರ್ಕಾರ ಕರ್ನಾಟಕದ ಮೇಲಿನ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್‌ನಲ್ಲಿ ಬರಸ್ಥಿತಿ ಬಗ್ಗೆ ಮನವರಿಕೆ ಮಾಡಿ ಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ಗೆ  ಕೇಂದ್ರ ಸರಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯದ ಆದೇಶದ ಹಿನ್ನೆಲೆ ಪರಿಹಾರ ನೀಡಲಾಗಿದೆ ಎಂದು ಹೇಳಿದ್ದಾರೆ.

ಪರಿಹಾರ ಬಿಡುಗಡೆ ವಿಚಾರದಲ್ಲಿ ಬಿಜೆಪಿಯ ನಾಯಕರದ್ದಾಗಲಿ, ಕೇಂದ್ರ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್ ಇಟ್ಟುಕೊಂಡಿರುವ ಕಾಳಜಿಯ ಫಲವಾಗಿದೆ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನತೆ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಸಿಎಂ ಸಿದ್ದರಾಮಯ್ಯ, ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು. ಎನ್‌ಡಿಆರ್‌ಎಫ್‌ ನಿಯಮವಾಳಿ ಪ್ರಕಾರ ರಾಜ್ಯಕ್ಕೆ ರೂ.18,171 ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ರೂ. 3498.98 ಕೋಟಿಗೆ ಅನುಮೋದನೆ ನೀಡಿ, 3,454 ಕೋಟಿ ರೂ.ಬಿಡುಗಡೆ ಮಾಡಿದೆ. ಬರ ಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬರೆದುಕೊಂಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯ ಲೋಕಸಭಾ ಅಭ್ಯರ್ಥಿಗಳ ಪೈಕಿ ಶೇ. 25ರಷ್ಟು ಮಂದಿ ಇತರ ಪಕ್ಷಗಳಿಂದ ವಲಸೆ ಬಂದವರು

0
ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಶೇ 25ರಷ್ಟು ಮಂದಿ ಬೇರೆ ಪಕ್ಷಗಳಿಂದ ವಲಸೆ ಬಂದವರು ಎಂದು ವರದಿಗಳು ಹೇಳಿವೆ. ಬಿಜೆಪಿ ಕಣಕ್ಕಿಳಿಸಿರುವ 435 ಅಭ್ಯರ್ಥಿಗಳ ಪೈಕಿ 106 ಮಂದಿ...