Homeಮುಖಪುಟ’ಓ ಭರತವರ್ಷದ ನಾಯಕರೆ, ಅವಮಾನದಲ್ಲೇ ಮುಳುಗಿ ಸಾಯಿರಿ’; ಜಿಗ್ನೇಶ್ ಮೇವಾನಿ ಆಕ್ರೋಶ

’ಓ ಭರತವರ್ಷದ ನಾಯಕರೆ, ಅವಮಾನದಲ್ಲೇ ಮುಳುಗಿ ಸಾಯಿರಿ’; ಜಿಗ್ನೇಶ್ ಮೇವಾನಿ ಆಕ್ರೋಶ

ಪೊಲೀಸರು ತಮಗೆ ನ್ಯಾಯ ನಿರಾಕರಣೆ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ವಿಧಾನಸಭೆಯ ಬಳಿ ಮಹಿಳೆಯರಿಬ್ಬರು ಬೆಂಕಿ ಹಚ್ಚಿಕೊಂಡ ಘಟನೆ ನಡೆದಿದೆ.

- Advertisement -
- Advertisement -

ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ರಾಜ್ಯ ವಿಧಾನಸಭೆ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರ ಕಚೇರಿಯಿರುವ ಲೋಕ್‌ ಭವನದ ಬಳಿ ಮಹಿಳೆಯರಿಬ್ಬರು ಶುಕ್ರವಾರ ಸಂಜೆ ತಮಗೆ ತಾವೆ ಬೆಂಕಿ ಹಚ್ಚಿಕೊಂಡಿದ್ದಾರೆ.

ಉತ್ತರ ಪ್ರದೇಶದ ಅಮೆಥಿ ಜಿಲ್ಲೆಯ ಪ್ರಕರಣವೊಂದರಲ್ಲಿ ಪೊಲೀಸರು ನಿಷ್ಕ್ರಿಯರಾಗಿದ್ದಾರೆಂದು ಆರೋಪಿಸಿ ಮಹಿಳೆಯರು ಬೆಂಕಿ ಹಚ್ಚಿಕೊಂಡಿದ್ದು, ಒಬ್ಬನನ್ನು ಗುಡಿಯಾ ಎಂದು ಗುರುತಿಸಲಾಗಿದೆ. ಇಬ್ಬರಿಗೂ ಸುಟ್ಟ ಗಾಯಗಳಾಗಿದ್ದು ಲಕ್ನೋದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

“ಲೋಕ್ ಭವನ ಬಳಿ ಇಬ್ಬರು ಮಹಿಳೆಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಓರ್ವ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ, ಇನ್ನೊಬ್ಬ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದಾರೆ” ಎಂದು ಜಂಟಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ನವೀನ್ ಅರೋರಾ ತಿಳಿಸಿದ್ದಾರೆ.

ಅಮೆಥಿಯ ಜಾಮೋ ಪ್ರದೇಶದ ತಮ್ಮ ಹಳ್ಳಿಯಲ್ಲಿ ತಮ್ಮ ನೆರೆಹೊರೆಯವರು ಚರಂಡಿ ತ್ಯಾಜ್ಯದ ವಿವಾದದಲ್ಲಿ ಬೆದರಿಕೆ ಹಾಕುತ್ತಿದ್ದಾರೆ ಆದರೆ ಪೊಲೀಸರು ತಮ್ಮ ದೂರುಗಳ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಹಾಗೂ ಪೊಲೀಸರು ಕೂಡಾ ನೆರೆಹೊರೆಯವರೊಂದಿಗೆ ಸೇರಿ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಪ್ರಕರಣದಲ್ಲಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

“ಮೇ 9 ರಂದು ಮಹಿಳೆ ಮತ್ತು ಆಕೆಯ ನೆರೆಹೊರೆಯವರು ಚರಂಡಿ ವಿವಾದದ ಬಗ್ಗೆ ಜಗಳವಾಡಿದ್ದರು. ಎರಡೂ ಪಕ್ಷಗಳು ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿವೆ. ನಾವು ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ. ವಿವರವಾದ ವಿಚಾರಣೆಗೆ ಆದೇಶಿಸಲಾಗಿದೆ” ಎಂದು ಅಮೇಥಿಯ ಪೊಲೀಸ್ ವರಿಷ್ಠಾಧಿಕಾರಿ ಖ್ಯಾತಿ ಗಾರ್ಗ್ ಹೇಳಿದ್ದಾರೆ.

ಪ್ರಕರಣದ ಬಗ್ಗೆ ವಿರೋಧ ಪಕ್ಷಗಳು ತೀವ್ರವಾಗಿ ಆದಿತ್ಯನಾಥ್ ಸರ್ಕಾರವನ್ನು ತರಾಟೆಗೆ ಪಡೆದಿದ್ದಾರಲ್ಲದೆ ರಾಜ್ಯವನ್ನು ಜಂಗಲ್ ರಾಜ್ ಎಂದು ಕರೆದಿದ್ದಾರೆ.

ಊನಾ ಚಳುವಳಿಯ ನಾಯಕ ಹಾಗೂ ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ, ಓ ಭರತವರ್ಷದ ಯಜಮಾನರೇ ಅವಮಾನದಲ್ಲಿ ಮುಳುಗಿ ಸಾಯಿರಿ, ಈ ಮಹಿಳೆ ಎಂತಹ ಭೀಕರ ಕಿರುಕುಳಕ್ಕೆ ಒಳಗಾಗಿರಬಹುದು. ತನ್ನ ಧ್ವನಿಯನ್ನು ಯುಪಿ ಆಡಳಿತಕ್ಕೆ ತಲುಪಿಸಲು ಜೀವಂತ ಸುಟ್ಟು ಹಾಕಬೇಕಾಗಿರುವುದು ಎಂತಹ ನೋವು ಇದ್ದಿರಬಹುದು. ಸ್ವಲ್ಪವಾದರೂ ನಾಚಿಕೆಯಿದ್ದರೆ ಆದಿತ್ಯನಾಥ್ ರಾಜಿನಾಮೆ ಕೊಡಲಿ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಯೋಗಿ ಆದಿತ್ಯನಾಥ್ ಸರ್ಕಾರವು ಬಡವರ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ, ಯುಪಿಯಲ್ಲಿ ಸರ್ಕಾರ ಇನ್ನೂ ಇದೆಯೇ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಬಹುಜನ ಸಮಾಜ ಪಕ್ಷದ ಮುಖ್ಯಸ್ಥ ಮಾಯಾವತಿ ಆಗ್ರಹಿಸಿದ್ದಾರೆ.

“ಭೂ ವಿವಾದ ಪ್ರಕರಣದಲ್ಲಿ ತಾಯಿ ಮತ್ತು ಮಗಳು ಲಖನೌದ ಸಿಎಂ ಕಚೇರಿಯ ಮುಂದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಯಿತು. ಯುಪಿ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು. ಅಂತಹ ಘಟನೆಗಳು ಮತ್ತೆ ಸಂಭವಿಸದಂತೆ ಹಾಗೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ” ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.


ಓದಿ: ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ವನ್ನಾಗಿ ಮಾಡಿದೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...