Homeಮುಖಪುಟಡ್ರಗ್ಸ್ ಪ್ರಕರಣ: ಬಾಲಿವುಡ್ ನಟ, ಬಿಗ್ ಬಾಸ್ ಮಾಜಿ ಸ್ಪರ್ಧಿ ಅಜಾಜ್ ಖಾನ್ ಪೊಲೀಸರ ವಶಕ್ಕೆ

ಡ್ರಗ್ಸ್ ಪ್ರಕರಣ: ಬಾಲಿವುಡ್ ನಟ, ಬಿಗ್ ಬಾಸ್ ಮಾಜಿ ಸ್ಪರ್ಧಿ ಅಜಾಜ್ ಖಾನ್ ಪೊಲೀಸರ ವಶಕ್ಕೆ

- Advertisement -
- Advertisement -

ಡ್ರಗ್ಸ್ ಪ್ರಕರಣ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಮತ್ತು ಬಿಗ್ ಬಾಸ್ ಮಾಜಿ ಸ್ಪರ್ಧಿ ಅಜಾಜ್ ಖಾನ್ ಅನ್ನು ಮಾದಕವಸ್ತು ನಿಯಂತ್ರಣ ದಳ (ಎನ್‌ಸಿಬಿ) ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಡ್ರಗ್ ಪೆಡ್ಲರ್ ಶಾದಾಬ್ ಬಟಾಟಾ ವಿಚಾರಣೆ ವೇಳೆ ಅಜಾಜ್ ಖಾನ್ ಹೆಸರೂ ಕೇಳಿಬಂದಿತ್ತು. ಈ ಸಂಬಂಧ ಅಜಾಜ್ ಖಾನ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ತನಿಖಾ ತಂಡವು ಅಜಾಜ್ ಖಾನ್ ಜೊತೆಗೆ ಅಂಧೇರಿ ಮತ್ತು ಲೋಖಾಂಡವಾಲಾ ಪ್ರದೇಶಗಳಲ್ಲಿ ಶೋಧಕಾರ್ಯ ನಡೆಸಿತ್ತು. ಎನ್‌ಸಿಬಿ ಕಚೇರಿಗೆ ಭೇಟಿ ನೀಡಿದ ನಂತರ ಅಜಾಜ್ ಖಾನ್‌ ಅನ್ನು ವಶಕ್ಕೆ ಪಡೆಯಲಾಗಿದೆ. ಅಜಾಜ್ ಖಾನ್ ಹೇಳಿಕೆಯನ್ನು ಎನ್‌ಸಿಬಿ ಅಧಿಕಾರಿಗಳು ದಾಖಲಿಸುತ್ತಿದ್ದಾರೆ. ಇನ್ನೂ ಬಂಧಿಸಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಂಗಳವಾರವಷ್ಟೇ ಮುಂಬೈಗೆ ಬಂದಿಳಿದಿದ್ದ ಅಜಾಜ್ ಖಾನ್, ದಕ್ಷಿಣ ಮುಂಬೈನ ಎನ್‌ಸಿಬಿ ಕಚೇರಿಯ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿ, ನನ್ನನ್ನು ಬಂಧಿಸಿಲ್ಲ. ಆದರೆ ಸ್ವತಃ ನಾನೇ ಅಧಿಕಾರಿಗಳನ್ನು ಭೇಟಿ ಮಾಡಲು ಬಂದಿರುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: ಡ್ರಗ್ಸ್‌ ಪ್ರಕರಣ: ರಾಗಿಣಿ, ಸಂಜನಾ ಸೇರಿದಂತೆ 25 ಜನರ ವಿರುದ್ಧ 2,900 ಪುಟಗಳ ಚಾರ್ಜ್‌ಶೀಟ್

ಬಾಲಿವುಡ್‌ ನಟ ಸುಶಾಂತ್ ಸಿಂಗ್ ಸಾವಿನ ನಂತರ ದೇಶದ ಚಿತ್ರರಂಗ ವಲಯದಲ್ಲಿ ಡ್ರಗ್ಸ್‌ ಮಾಫಿಯಾ ಬಗ್ಗೆ ಸಾಕಷ್ಟು ಸುದ್ದಿಗಳು ಹೊರಬಂದಿದ್ದವು. ಇದರಲ್ಲಿ ಹಲವಾರು ತಾರೆಯರೂ ಸೇರಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದಲ್ಲಿಯೂ ಈ ಜಾಲ ಹರಡಿಕೊಂಡಿದೆ ಎಂಬ ಸುಳಿವು ಸಿಕ್ಕ ನಂತರ ಪೊಲೀಸರು ತನಿಖೆ ಆರಂಭಿಸಿದ್ದರು.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ 25 ಮಂದಿ ವಿರುದ್ಧ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಪಾರ್ಟಿಗಳಲ್ಲಿ ಡ್ರಗ್ಸ್ ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಪ್ರಕರಣವನ್ನು ಬೆನ್ನತ್ತಿದ ಸಿಸಿಬಿ ಪೊಲೀಸರು, ಕೆಲವರನ್ನು ಬಂಧಿಸಿದ್ದರು. ಕೆಲವರು ಈಗಾಗಲೇ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಇದೀಗ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, 2,900 ಪುಟಗಳ ದೋಷಾರೋಪ ಪಟ್ಟಿಯನ್ನು ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಪಮೇಲಾ-ಡ್ರಗ್ಸ್ ಪ್ರಕರಣ : ಬಂಗಾಳ ಬಿಜೆಪಿ ನಾಯಕ ರಾಕೇಶ್ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....