Homeಮುಖಪುಟಡ್ರಗ್ಸ್ ಪ್ರಕರಣ: ಪಂಜಾಬ್ ಮಾಜಿ ಸಚಿವ ಬಿಕ್ರಮ್ ಸಿಂಗ್‌ಗೆ ನ್ಯಾಯಾಂಗ ಬಂಧನ

ಡ್ರಗ್ಸ್ ಪ್ರಕರಣ: ಪಂಜಾಬ್ ಮಾಜಿ ಸಚಿವ ಬಿಕ್ರಮ್ ಸಿಂಗ್‌ಗೆ ನ್ಯಾಯಾಂಗ ಬಂಧನ

- Advertisement -
- Advertisement -

ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರ ಸೋದರ ಮಾವ, ಪಂಜಾಬ್ ಮಾಜಿ ಸಚಿವ ಬಿಕ್ರಮ್ ಸಿಂಗ್ ಮಜಿಥಿಯಾ ಅವರನ್ನು ಡ್ರಗ್ಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಮಧ್ಯಂತರ ಜಾಮೀನು ಅವಧಿ ಮುಗಿದ ನಂತರ ಅವರು ಮೊಹಾಲಿ ನ್ಯಾಯಾಲಯದ ಮುಂದೆ ಶರಣಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮಜಿಥಿಯಾ ಅವರ ಜಾಮೀನು ಅವಧಿ ಈ ಹಿಂದೆಯೇ ಮುಗಿದಿತ್ತು. ಅವರು ನಿಯಮಿತ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಪಂಜಾಬ್ ವಿಧಾನಸಭಾ ಚುನಾವಣೆ ಮುಗಿಯುವವರೆಗೆ (ಫೆಬ್ರವರಿ 24ರವರೆಗೆ) ಅವರನ್ನು ಬಂಧಿಸದಂತೆ ಆದೇಶ ನೀಡಿತ್ತು. ಚುನಾವಣೆ ಮುಗಿದ ನಂತರ ಇಂದು (ಫೆ.25) ಬೆಳಗ್ಗೆ ಮೊಹಾಲಿಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸಂದೀಪ್ ಕುಮಾರ್ ಸಿಂಗ್ಲಾ ಅವರ ಮುಂದೆ ಮಜಿಥಿಯಾ ಅವರು ಶರಣಾಗಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಅವರನ್ನು ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಕೋರಲಿಲ್ಲ. ಹೀಗಾಗಿ ಅವರನ್ನು ಮೊಹಾಲಿ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲು ನಿರ್ಧರಿಸಿದೆ. ಅಲ್ಲದೆ, ಇಂದು ಅವರ ಮತ್ತೊಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ನ್ಯಾಯಾಲಯ ಸಂಕೀರ್ಣದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಮಜಿಥಿಯಾ ಅವರನ್ನು ವಿಚಾರಣೆ ನಡೆಸಲು ವಿಶೇಷ ತನಿಖಾ ತಂಡಕ್ಕೆ ನ್ಯಾಯಾಲಯ ಅನುಮತಿ ನೀಡಿದೆ.


ಇದನ್ನೂ ಓದಿ: ಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ

0
ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (ಎಸ್‌ಸಿಬಿಎ) ​​ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿರಿಯ ವಕೀಲ ಕಪಿಲ್ ಸಿಬಲ್ ಗೆಲುವು ಸಾಧಿಸಿದ್ದಾರೆ. ಸಿಬಲ್ 1,066 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಹಿರಿಯ ವಕೀಲ ಪ್ರದೀಪ್ ರೈ...