Homeಮುಖಪುಟಡ್ರಗ್ಸ್ ಕೇಸ್: ರಾಕುಲ್, ರಾಣಾ, ಪುರಿ ಜಗನ್ನಾಥ್, ರವಿತೇಜಾ ಸೇರಿ 12 ಮಂದಿಗೆ ಇಡಿ ಸಮನ್ಸ್

ಡ್ರಗ್ಸ್ ಕೇಸ್: ರಾಕುಲ್, ರಾಣಾ, ಪುರಿ ಜಗನ್ನಾಥ್, ರವಿತೇಜಾ ಸೇರಿ 12 ಮಂದಿಗೆ ಇಡಿ ಸಮನ್ಸ್

- Advertisement -
- Advertisement -

ನಾಲ್ಕು ವರ್ಷದ ಹಿಂದಿನ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಕುಲ್ ಪ್ರೀತ್ ಸಿಂಗ್, ನಟರಾದ ರಾಣಾ ದಗ್ಗುಬಾಟಿ, ರವಿತೇಜಾ, ನಿರ್ದೇಶಕ ಪುರಿ ಜಗನ್ನಾಥ್, ನಟಿ ಚಾರ್ಮಿ ಕೌರ್ ಮತ್ತು ಮುಮೈತ್ ಖಾನ್ ಸೇರಿದಂತೆ 12 ಮಂದಿ ಟಾಲಿವುಡ್ ನಟರು ಮತ್ತು ನಿರ್ದೇಶಕರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.

ಆಗಸ್ಟ್ 31 ಕ್ಕೆ ನಿರ್ದೇಶಕ ಪುರಿ ಜಗನ್ನಾಥ್ ಅವರಿಗೆ ಸಮನ್ಸ್ ನೀಡಿದ್ದರೆ, ಸೆಪ್ಟೆಂಬರ್ 6 ಕ್ಕೆ ನಟಿ ರಾಕುಲ್ ಪ್ರೀತ್ ಸಿಂಗ್‌ಗೆ ಸಮನ್ಸ್ ನೀಡಲಾಗಿದೆ. ನಟರಾದ ರಾಣಾ ದಗ್ಗುಬಾಟಿ ಮತ್ತು ರವಿತೇಜಾ ಅವರಿಗೆ ಕ್ರಮವಾಗಿ ಸೆಪ್ಟೆಂಬರ್ 8 ಮತ್ತು 9 ರಂದು ಸಮನ್ಸ್ ನೀಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ನಟಿ ಮುಮೈತ್ ಖಾನ್‌ಗೆ ನವೆಂಬರ್ 15 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದು, ನಟಿ ಚಾರ್ಮಿ ಕೌರ್ ಅವರಿಗಗೂ ಇಡಿ ಸಮನ್ಸ್ ಜಾರಿ ಮಾಡಿದೆ.

2017 ರ ಡ್ರಗ್ ಕೇಸ್ ಸಂಬಂಧವಾಗಿ ಈ 12 ಜನ ನಟರು ಮತ್ತು ನಿರ್ದೇಶಕರನ್ನು ವಿಶೇಷ ತನಿಖಾ ತಂಡವು (ಎಸ್‌ಐಟಿ) ಈ ಹಿಂದೆ ವಿಚಾರಣೆ ನಡೆಸಿತ್ತು. ಸಾಕ್ಷಿ, ಆಧಾರಗಳ ಕೊರತೆಯಿಂದ ಪ್ರಕರಣವನ್ನು ಬಿಟ್ಟುಬಿಡಲಾಗಿತ್ತು.

ಇದನ್ನೂ ಓದಿ: ನಟಿ ರಾಗಿಣಿ, ಸಂಜನಾ ಡ್ರಗ್ಸ್ ಸೇವಿಸಿದ್ದು FSL ಪರೀಕ್ಷೆಯಲ್ಲಿ ದೃಢ

ಈಗ ಇದೇ ಪ್ರಕರಣದಲ್ಲಿ ಸೆಲೆಬ್ರಿಟಿಗಳನ್ನು ಸಾಕ್ಷಿಯಾಗಿ ಕರೆಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಕ್ರಮ ಹಣ ವರ್ಗಾವಣೆ, ಡ್ರಗ್ಸ್ ಸೇವನೆ ಮತ್ತು ಸರಬರಾಜು ಪ್ರಕರಣಗಳಲ್ಲಿ ಸಮನ್ಸ್ ನೀಡಲಾಗಿದೆ.

ಜುಲೈ 2017 ರಲ್ಲಿ ಹೈದರಾಬಾದ್ ಅಬಕಾರಿ ಇಲಾಖೆಯ ವಿಶೇಷ ತನಿಖಾ ತಂಡವು ಟಾಲಿವುಡ್ ಸೆಲೆಬ್ರಿಟಿಗಳು ಮತ್ತು ಇತರರ ವಿರುದ್ಧ ತನಿಖೆಯನ್ನು ಆರಂಭಿಸಿತ್ತು.

2017 ರ ಜುಲೈನಲ್ಲಿ ಡ್ರಗ್ ಪ್ರಕರಣ ಬಹಿರಂಗವಾಗಿತ್ತು. ಡ್ರಗ್ ಕಳ್ಳಸಾಗಣೆಗೆ ಸಂಬಂಧಿಸಿದಂತೆ ಹಲವಾರು ಪ್ರಕರಣಗಳು ದಾಖಲಾಗಿದ್ದವು. ಡಚ್ ಪ್ರಜೆ, ದಕ್ಷಿಣ ಆಫ್ರಿಕಾದ ಪ್ರಜೆ ಸೇರಿದಂತೆ ಮಾಜಿ ಏರೋಸ್ಪೇಸ್ ಎಂಜಿನಿಯರ್ ಆಗಿದ್ದ ಯುಎಸ್ ಪ್ರಜೆ ಸೇರಿದಂತೆ 20 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿತ್ತು. ಇದೇ ಪ್ರಕರಣದಲ್ಲಿ ಎಸ್‌ಐಟಿ ದಕ್ಷಿಣ ಆಫ್ರಿಕಾದ ಪ್ರಜೆ, ರಾಫೆಲ್ ಅಲೆಕ್ಸ್ ವಿಕ್ಟರ್ ಎಂಬುವವರನ್ನು ಮುಂಬೈನಿಂದ ಹೈದರಾಬಾದ್‌ಗೆ ಕೊಕೇನ್ ಸಾಗಿಸಿದ ಆರೋಪದ ಮೇಲೆ 2017 ರ ಆಗಸ್ಟ್‌ನಲ್ಲಿ ಬಂಧಿಸಿತ್ತು.

ವಿಶೇಷ ತನಿಖಾ ತಂಡವು ಸೆಲೆಬ್ರಿಟಿಗಳು ಸೇರಿದಂತೆ 62 ಶಂಕಿತರ ಕೂದಲು ಮತ್ತು ಉಗುರಿನ ಮಾದರಿಗಳನ್ನು ಸಂಗ್ರಹಿಸಿತ್ತು, ಆದರೆ ಇಲ್ಲಿಯವರೆಗೆ, ಎಸ್‌ಐಟಿ ಯಾವುದೇ ಸೆಲೆಬ್ರಿಟಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿಲ್ಲ. ಯಾವ ಸೆಲೆಬ್ರಿಟಿಗಳು ಡ್ರಗ್ ಕಳ್ಳಸಾಗಣೆ, ಡ್ರಗ್ ಸೇವನೆಯ ಭಾಗವಾಗಿದ್ದಾರೆ ಎಂಬುದನ್ನು ಕೂಡ ಎಸ್‌ಐಟಿ ಇಲ್ಲಿಯವರೆಗೆ ಬಹಿರಂಗಪಡಿಸಿಲ್ಲ.


ಇದನ್ನೂ ಓದಿ: ಪಮೇಲಾ-ಡ್ರಗ್ಸ್ ಪ್ರಕರಣ : ಬಂಗಾಳ ಬಿಜೆಪಿ ನಾಯಕ ರಾಕೇಶ್ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...