ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ 25 ಮಂದಿ ವಿರುದ್ಧ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
ಪಾರ್ಟಿಗಳಲ್ಲಿ ಡ್ರಗ್ಸ್ ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಪ್ರಕರಣವನ್ನು ಬೆನ್ನತ್ತಿದ ಸಿಸಿಬಿ ಪೊಲೀಸರು, ಕೆಲವರನ್ನು ಬಂಧಿಸಿದ್ದರು. ಕೆಲವರು ಈಗಾಗಲೇ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಇದೀಗ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, 2,900 ಪುಟಗಳ ದೋಷಾರೋಪ ಪಟ್ಟಿಯನ್ನು ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಪ್ರಧಾನಿಯೇ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಂಡಿದ್ದಾರೆ; ಇವರು ಮಾಡಿದ್ದು ಸರಿಯೇ?- ಸ್ಪಷ್ಟನೆ ಕೇಳಿದ ಕೇಂದ್ರ
“ಪ್ರಕರಣದಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ. ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ವಿರೇನ್ ಖನ್ನಾ ಸೇರಿದಂತೆ 25 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 180 ಸಾಕ್ಷಿಗಳ ಹೇಳಿಕೆ ಉಲ್ಲೇಖಿಸಲಾಗಿದೆ” ಎಂದು ಮೂಲಗಳು ತಿಳಿಸಿವೆ.
ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ನಂತರ ದೇಶದ ಚಿತ್ರರಂಗ ವಲಯದಲ್ಲಿ ಡ್ರಗ್ಸ್ ಮಾಫಿಯಾ ಬಗ್ಗೆ ಸಾಕಷ್ಟು ಸುದ್ದಿಗಳು ಹೊರಬಂದಿದ್ದವು. ಇದರಲ್ಲಿ ಹಲವಾರು ತಾರೆಯರೂ ಸೇರಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದಲ್ಲಿಯೂ ಈ ಜಾಲ ಹರಡಿಕೊಂಡಿದೆ ಎಂಬ ಸುಳಿವು ಸಿಕ್ಕ ನಂತರ ಪೊಲೀಸರು ತನಿಖೆ ಆರಂಭಿಸಿದ್ದರು.
ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು


