Homeಮುಖಪುಟಡ್ರಗ್ಸ್ ಪ್ರಕರಣ: ಆರ್ಯನ್ ಖಾನ್‌ಗೆ ಜಾಮೀನು ನಿರಾಕರಣೆ

ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್‌ಗೆ ಜಾಮೀನು ನಿರಾಕರಣೆ

- Advertisement -
- Advertisement -

ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಮತ್ತು ಇನ್ನಿಬ್ಬರಿಗೆ ಡ್ರಗ್ ಪ್ರಕರಣದಲ್ಲಿ ಜಾಮೀನು ನೀಡಲು ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ನಿರಾಕರಿಸಿದೆ.

ಮಾದಕದ್ರವ್ಯ ಔಷಧಗಳು ಮತ್ತು ಸೈಕೋಟ್ರೋಪಿಕ್ ಪದಾರ್ಥಗಳ (ಎನ್‌ಡಿಪಿಎಸ್) ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ನಿಯೋಜಿತವಾಗಿರುವ ವಿಶೇಷ ನ್ಯಾಯಾಧೀಶ ವಿ ವಿ ಪಾಟೀಲ್, ಆರ್ಯನ್ ಖಾನ್ ಮತ್ತು ಅವರ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಹಾಗೂ ಫ್ಯಾಶನ್ ಮಾಡೆಲ್ ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಇದನ್ನೂ ಓದಿ: ಆರ್ಯನ್ ಖಾನ್‌ರ ಮೂಲಭೂತ ಹಕ್ಕುಗಳನ್ನು ಉಳಿಸಿ: ಸುಪ್ರೀಂಗೆ ಶಿವಸೇನಾ ಸಚಿವನ ಅರ್ಜಿ  

ಆರ್ಯನ್ ಖಾನ್, ಅರ್ಬಾಜ್ ಮತ್ತು ಮುನ್ಮುನ್ ಅವರನ್ನು ಮಾದಕದ್ರವ್ಯ ನಿಯಂತ್ರಣ ಬ್ಯೂರೋ (NCB) ಅಕ್ಟೋಬರ್ 3 ರಂದು ಡ್ರಗ್ಸ್‌‌ ಸಂಗ್ರಹ, ಬಳಕೆ, ಖರೀದಿ ಮತ್ತು ಸಾಗಾಣಿಕೆ ಸಂಬಧಿಸಿ ಆರೋಪಗಳನ್ನು ಹೊರೆಸಿ ಬಂಧಿಸಿದೆ. ಸದ್ಯಕ್ಕೆ ಮೂವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿರುವುದರ ವಿರುದ್ಧ ಆರ್ಯನ್ ಖಾನ್‌ ಬುಧವಾರ ಬಾ೦ಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಆರ್ಯನ್ ಖಾನ್ ಮತ್ತು ಅರ್ಬಾಜ್ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದು, ಮುನ್ಮುನ್ ಅವರನ್ನು ಮುಂಬೈನ ಬೈಕುಲ್ಲಾ ಮಹಿಳಾ ಜೈಲಿನಲ್ಲಿ ಇರಿಸಲಾಗಿದೆ.

ಈ ಪ್ರಕರಣದ ಆರೋಪಿ ಆರ್ಯನ್ ಖಾನ್ ಮತ್ತು ಇತರರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8 (ಸಿ), 20 (ಬಿ), 27, 28, 29 ಮತ್ತು 35 ರ ಅಡಿಯಲ್ಲಿ ಅಪರಾಧಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ಲಖಿಂಪುರ್ ಖೇರಿಯನ್ನು ಗೌಣಗೊಳಿಸಲು ಆರ್ಯನ್ ಖಾನ್ ಪ್ರಕರಣ ಯಶಸ್ವಿಯಾಯಿತು: ಕಪಿಲ್ ಸಿಬಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಣದುಬ್ಬರ, ಉದ್ಯೋಗಗಳ ಬಗ್ಗೆ ಮಾತನಾಡುವ ಬದಲು ಬಿಜೆಪಿ ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ: ಪ್ರಿಯಾಂಕಾ...

0
'ಆಡಳಿತಾರೂಢ ಬಿಜೆಪಿ ಹಣದುಬ್ಬರವನ್ನು ಹೇಗೆ ನಿಯಂತ್ರಿಸುತ್ತದೆ ಅಥವಾ ಜನರಿಗೆ ಉದ್ಯೋಗವನ್ನು ನೀಡುತ್ತದೆ ಎಂಬುದರ ಕುರಿತು ಮಾತನಾಡುವ ಬದಲು ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ' ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ...