ಸಿಸಿಬಿ
PC: Filmy Scoop

ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಮಾಫಿಯಾ ದಿನೇ ದಿನೇ ಮುಳುವಾಗುತ್ತಿದೆ. ನಟಿ ರಾಗಿಣಿ, ಸಂಜನಾ ನಂತರ ನಟ ದಿಗಂತ್ ಮತ್ತು ನಟಿ ಐಂದ್ರಿತಾ ರೇಗೆ ಇಂದು ಸಿಸಿಬಿ ನೋಟಿಸ್ ಜಾರಿ ಮಾಡಿದೆ. ನಾಳೆ (ಸೆ.16) ಬೆಳಗ್ಗೆ 11 ಗಂಟೆಗೆ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಹಾಜರಾಗುವಂತೆ ತಿಳಿಸಲಾಗಿದೆ.

ಡ್ರಗ್ ಕೇಸ್‌ನಲ್ಲಿ ಬಂಧಿತರಾಗಿರುವವರ ಜೊತೆಗೆ ನಂಟಿದೆ ಎಂಬ ಆರೋಪ ಇದೆ. ಪ್ರಕರಣದ ಆರೋಪಿ ಶೇಖ್ ಫಾಸಿಲ್‌ ಶ್ರೀಲಂಕಾದಲ್ಲಿ ಆಯೋಜಿಸಿದ್ದ ಬಾಲೀಸ್‌ ಕ್ಯಾಸಿನೊ ಪಾರ್ಟಿಯಲ್ಲಿ ಐಂದ್ರಿತಾ ರೇ ಭಾಗವಹಿಸಿದ್ದು, ‘ಪಾರ್ಟಿಗೆ ಆಹ್ವಾನಿಸಿದ್ದಕ್ಕೆ ಧನ್ಯವಾದ. ಈದ್‌ ವೇಳೆ ಬಾಲೀಸ್‌ನಲ್ಲಿ ಭೇಟಿಯಾಗೋಣಾ’ ಎಂದು ಹೇಳಿರುವ ವಿಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರ ಜೊತೆಗೆ ಫಾಸಿಲ್ ಜೊತೆಗೆ ಅವರ ಸಾಕಷ್ಟು ಫೋಟೋಗಳು ವೈರಲ್ ಆಗಿವೆ. ಈ ಹಿನ್ನೆಲೆ ಈ ತಾರಾ ದಂಪತಿಗೆ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಡ್ರಗ್ಸ್ ದಂಧೆ – ಬೆಚ್ಚದಿರಿ: ವಿವರಗಳಷ್ಟೇ, ಯಾರ ಹೆಸರುಗಳೂ ಇಲ್ಲ

ನಟ ದಿಗಂತ್ ಮತ್ತು ಐಂದ್ರಿತಾ ರೈಗೆ ನೋಟಿಸ್ ನೀಡಲಾಗಿದೆ. ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಸಿಸಿಬಿ ನೋಟಿಸ್ ಬಗ್ಗೆ ಟ್ವೀಟ್ ಮಾಡಿರುವ ನಟಿ ಐಂದ್ರಿತಾ ರೇ, ನಮಗೆ ದೂರವಾಣಿ ಮೂಲಕ ಸಿಸಿಬಿ ನೋಟಿಸ್ ಸಿಕ್ಕಿದ್ದು, ವಿಚಾರಣೆಗಾಗಿ ನಾವು ನಾಳೆ 11 ಗಂಟೆಗೆ ಕಚೇರಿಗೆ ಹೋಗುತ್ತೆವೆ. ಸಿಸಿಬಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದಿದ್ದಾರೆ.

ಸದ್ಯ ಇದೇ ಪ್ರಕರಣ ಸಂಬಂಧ ನಟಿ ರಾಗಿಣಿ ದ್ವಿವೇದಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇತ್ತ ನಟಿ ಸಂಜನಾ ಗರ್ಲಾನಿ ಸಿಸಿಬಿ ಕಸ್ಟಡಿಯಲ್ಲಿದ್ದಾರೆ.


ಇದನ್ನೂ ಓದಿ: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

Donate

ಈ ಲೇಖನ, ಈ ವೆಬ್‌ಸೈಟ್ ನಿಮಗೆ ಇಷ್ಟವಾಯಿತೇ? ನಿಮ್ಮ ಬೆಂಬಲ ಇದಕ್ಕೆ ಅಗತ್ಯ.

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

+ posts