Homeಕರ್ನಾಟಕಡ್ರಗ್ಸ್‌ ಪ್ರಕರಣ: ಆರೋಪಿಗಳಿಗೆ ಸಹಕರಿಸಿದ ಬೆಂಗಳೂರಿನ ಕಾನ್‌ಸ್ಟೇಬಲ್ ಬಂಧನ!

ಡ್ರಗ್ಸ್‌ ಪ್ರಕರಣ: ಆರೋಪಿಗಳಿಗೆ ಸಹಕರಿಸಿದ ಬೆಂಗಳೂರಿನ ಕಾನ್‌ಸ್ಟೇಬಲ್ ಬಂಧನ!

ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಒಬ್ಬರನ್ನು ಕೆ.ಜಿ.ನಗರದ ಡ್ರಗ್ಸ್ ಪ್ರಕರಣದಲ್ಲಿ ಆರೋಪಿಗೆ ಸಹಾಯ ಮಾಡಿದ್ದಾರೆ ಎಂಬ ಕಾರಣಕ್ಕೆ ಬಂಧಿಸಲಾಗಿದೆ

- Advertisement -
- Advertisement -

ಡ್ರಗ್ಸ್ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರನ್ನು ಬಂಧಿಸಲಾಗಿದೆ ಎಂದು ಕೇಂದ್ರೀಯ ಅಪರಾಧ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಎಎನ್‌ಐ, “ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಒಬ್ಬರನ್ನು ಕೆ.ಜಿ.ನಗರದ ಡ್ರಗ್ಸ್ ಪ್ರಕರಣದಲ್ಲಿ ಆರೋಪಿಗೆ ಸಹಾಯ ಮಾಡಿದ್ದಾರೆ ಎಂಬ ಕಾರಣಕ್ಕೆ ಬಂಧಿಸಲಾಗಿದೆ ಎಂದು ಕೇಂದ್ರೀಯ ಅಪರಾಧ ವಿಭಾಗದ ಅಧಿಕಾರಿಗಳು ಹೇಳಿದ್ದಾರೆ” ಎಂದು ವರದಿ ಮಾಡಿದೆ.

ಇದನ್ನೂ ಓದಿ: ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ಪರ ನಿಂತ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ

ಇದನ್ನೂ ಓದಿ: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಖ್ಯಾತ ಹಾಸ್ಯ ಕಲಾವಿದೆ ಭಾರತಿ ಸಿಂಗ್ ಅವರನ್ನು ಮಾದಕ ವಸ್ತು ನಿಯಂತ್ರಣ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದರು. ನಂತರ ಆಕೆಯ ಪತಿಯನ್ನೂ ಸಹ ಬಂಧಿಸಲಾಗಿದೆ. ಅವರ ಮನೆಯನ್ನು ಅಧಿಕಾರಿಗಳು ಶೋಧಿಸುವ ವೇಳೆ ಗಾಂಜಾ ಪತ್ತೆಯಾಗಿತ್ತು.

ಇದನ್ನೂ ಓದಿ: ಇಂದಿರಾ ಗಾಂಧಿ ಜನ್ಮದಿನ: ಮಹಿಳೆಯರಿಗಾಗಿ ಉಚಿತ ಮೊಬೈಲ್ ಕ್ಲಿನಿಕ್ ಆರಂಭಿಸಿದ ಚತ್ತೀಸ್‌ಗಢ ಸರ್ಕಾರ

ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಈ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ಅಧಿಕಾರಿಗಳು ಬಾಲಿವುಡ್‌ ಅನ್ನು ಗುರಿಯಾಗಿಸಿಕೊಂಡು ಅನೇಕ ನಟ-ನಟಿಯರ ಮನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ರಾಗಿಣಿ ಮತ್ತು ಸಂಜನಾ ಅವರು ಇನ್ನೂ ಬಂಧನದಲ್ಲಿದ್ದಾರೆ.


ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿ & ಟೈಮ್ಸ್‌ ನೌ ಚಾನೆಲ್‌ಗೆ ನೋಟಿಸ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದಿದ್ದ ವಿದ್ಯಾರ್ಥಿಗಳಿಗೆ 50% ಅಂಕ: ಮರುಮೌಲ್ಯಮಾಪನ ಮಾಡಿದಾಗ ಶೂನ್ಯಕ್ಕಿಳಿದ ಅಂಕ

0
ಪರೀಕ್ಷೆಗಳಿಗೆ ಬರೆದಿರುವ ಉತ್ತರಗಳ ಗುಣಮಟ್ಟದ ಆಧಾರದಲ್ಲಿ ಅಂಕಗಳನ್ನು ನೀಡಲಾಗುತ್ತದೆ. ಆದರೆ ಉತ್ತರಪ್ರದೇಶದ  ಜೌನ್‌ಪುರದಲ್ಲಿರುವ ವೀರ್‌ ಬಹದ್ದೂರ್‌ ಸಿಂಗ್‌ ಪೂರ್ವಾಂಚಲ ವಿಶ್ವವಿದ್ಯಾಲಯದಲ್ಲಿನ ಪರೀಕ್ಷೆಯಲ್ಲಿನ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಮತ್ತು ಕ್ರಿಕೆಟ್‌ ಆಟಗಾರರ ಹೆಸರುಗಳನ್ನು...