ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ಬಂಧನವಾಗಿದ್ದ ಸ್ಯಾಂಡಲ್‌ವುಡ್ ನಟಿ ಸಂಜನಾ ಗಲ್ರಾನಿಗೆ ಇಂದು ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಎಎನ್‌ಐ, “ಷರತ್ತುಬದ್ದ ಜಾಮೀನು ನೀಡಿರುವ ಹೈಕೋರ್ಟ್, 3 ಲಕ್ಷದ ವೈಯಕ್ತಿಕ ಬಾಂಡ್ ಪಡೆದು ತಿಂಗಳಿನಲ್ಲಿ ಎರಡು ಬಾರಿ ಸಹಿ ಹಾಕಲು ಹಾಜರಾಗಬೇಕು ಮತ್ತು ವಿಚಾರಣೆಗೆ ಸ್ಪಂಧಿಸಬೇಕು ಎಂದು ಕೋರ್ಟ್ ಹೇಳಿದೆ” ಎಂದು ವರದಿ ಮಾಡಿದೆ.
ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಆರೋಪಿಗಳಿಗೆ ಸಹಕರಿಸಿದ ಬೆಂಗಳೂರಿನ ಕಾನ್‌ಸ್ಟೇಬಲ್ ಬಂಧನ!
Karnataka High Court grants bail to actor Sanjana Galrani in connection with a drugs case. She'll be released upon furnishing of a personal bond of Rs 3,00,000 with two sureties of like amount. She will also have to mark her attendance twice every month & co-operate in the probe.
— ANI (@ANI) December 11, 2020
ದೇಶದಲ್ಲಿ ಡ್ರಗ್ಸ್ ಮಾಫಿಯಾಗೆ ಸಂಬಂಧಿಸಿದಂತೆ ಹಲವಾರು ಜನರನ್ನು ಬಂಧಿಸಲಾಗುತ್ತಿದ್ದು, ಪ್ರತಿಯೊಂದು ಪ್ರಕರಣವೂ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇಂದು ಸುಶಾಂತ್ ಸಿಂಗ್ ಸಾವಿನ ಪ್ರಕರಣದ ತನಿಖೆಯ ವೇಳೆ ಡ್ರಗ್ ಸೇವನೆಯ ಬಗ್ಗೆ ಬಾಯಿ ಬಿಟ್ಟ ರಿಯಾ ಚಕ್ರವರ್ತಿಯವರನ್ನು ಬಂಧಿಸಿದ ಬೆನ್ನಲ್ಲೇ ಸೆಪ್ಟಂಬರ್ 8 ರಂದು ಸಿಸಿಬಿ ಪೊಲೀಸರು ಸಂಜನಾ ಅವರನ್ನು ಬಂಧಿಸಿದ್ದರು.
ಇದನ್ನೂ ಓದಿ: ಡ್ರಗ್ಸ್ ಕೇಸ್‌ನಿಂದ ಹಿಂದೆ ಸರಿಯುವಂತೆ ಕೋರ್ಟ್‌ಗೆ ಬಾಂಬ್ ಬೆದರಿಕೆ
ನಟಿ ರಾಗಿಣಿಯ ನಂತರ ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದರು. ನಂತರ ಸಂಜನಾ ಜೊತೆಗೆ ಸಿಸಿಬಿ ಅಧಿಕಾರಿಗಳು ರಾಹುಲ್ ಶೆಟ್ಟಿ ಎಂಬುವವರನ್ನು ಬಂಧಿಸಿದ್ದರು. ಈ ವೇಳೆ ಸಂಜನಾ ಬಗ್ಗೆ ಪೊಲೀಸರ ಬಳಿ ರಾಹುಲ್ ಶೆಟ್ಟಿ ಬಾಯಿ ಬಿಟ್ಟಿದ್ದ. ರಾಹುಲ್ ಜೊತೆ ಹಲವು ಪಾರ್ಟಿಗಳಲ್ಲಿ ಸಹ ಸಂಜನಾ ಕಾಣಿಸಿಕೊಳ್ಳುತ್ತಿದ್ದರು ಎನ್ನಲಾಗಿತ್ತು. ಹೀಗಾಗಿ ಸಂಜನಾರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಪಿಸ್ತೂಲ್-ಪೆಟ್ರೋಲ್-ಫಾರ್ಮಾ-ಡ್ರಗ್-ಡಾಲರ್ ಪ್ರಪಂಚವನ್ನು ನಿಯಂತ್ರಿಸುತ್ತಿರುವ ಪಂಚ ಅಸ್ತ್ರಗಳು!
ಮಂಗಳೂರು ಮೂಲದ ಡ್ರಗ್ ಪೆಡ್ಲರ್ ಪೃಥ್ವಿ ಶೆಟ್ಟಿ ಹಾಗೂ ರಾಹುಲ್ ನೀಡಿದ್ದ ಹೇಳಿಕೆಯ ಆಧಾರದಲ್ಲಿ ನಟಿ ಸಂಜನಾ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು ಎನ್ನಲಾಗಿತ್ತು.
ಇದನ್ನೂ ಓದಿ: ಡ್ರಗ್ಸ್ ಜಾಲ: ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್‌ಗೆ ನೋಟಿಸ್ ಜಾರಿ


